ಕಲಬುರಗಿ | ಎಸ್‌ಐಆರ್: ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಪಾರದರ್ಶಕ ಪರಿಶೀಲನೆ ನಡೆಸಲಿ: ಬಹುಭಾಷ ನಟ ಪ್ರಕಾಶ್ ರೈ

Date:

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಉಂಟಾಗಿರುವ ಗೊಂದಲಗಳಿಗೆ ಚುನಾವಣಾ ಆಯೋಗ ತಕ್ಷಣ ಸ್ಪಷ್ಟತೆ ನೀಡಬೇಕು. ಅರ್ಹ ಮತದಾರರ ಹೆಸರುಗಳು ಪಟ್ಟಿಯಿಂದ ಹೊರಗುಳಿಯದಂತೆ ಪಾರದರ್ಶಕವಾಗಿ ಪರಿಶೀಲನೆ ನಡೆಸಬೇಕು ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಆಗ್ರಹಿಸಿದರು.

- Advertisement -

ನಗರದ ರಿಂಗ್ ರಸ್ತೆಯ ರಾಮನಗರ ಹಾಗೂ ಮಿಸ್ಬಾ ಕಾಲೋನಿಯಲ್ಲಿ ‘ಎಸ್‌ಐಆರ್ ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’ದ ಅಂಗವಾಗಿ ನಿವಾಸಿಗಳೊಂದಿಗೆ ಸಂವಾದ ನಡೆಸಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ವಂದೇ ಮಾತರಂ: ರಾಷ್ಟ್ರಗೌರವದ ಸಂಕೇತವೋ, ಚಿತ್ತ ಚದುರಿಸುವ ರಾಜಕೀಯ...

ಭಾರತದ ಯುವಜನತೆಯಲ್ಲಿ ರಾಹುಲ್ ಗಾಂಧಿಯವರ ವರ್ಚಸ್ಸು ಹೆಚ್ಚುತ್ತಿರುವುದನ್ನು ಗಮನಿಸಿ, ಇದೇ ಸಂಸತ್ ಕಲಾಪದಲ್ಲಿ, "ವಂದೇ ಮಾತರಂ" ವಿಷಯವನ್ನು ಮುನ್ನೆಲೆಗೆ ತಂದು, ಯುವಜನತೆಯ ಗಮನವನ್ನು ಬೇರೆಡೆ ಸೆಳೆಯುವ old trick ಮಾಡಲಾಗಿದೆ ಎಂಬುದು ಈ...

ಮುಂಗಾರು ಹಿನ್ನಡೆ, ಹಿಂಗಾರಿಗೆ ಕಂಟಕ: ದೇಶದಲ್ಲಿ 2027ರವರೆಗೆ ಬರಗಾಲದ ಆತಂಕ!

ಪ್ರಕೃತಿಯ ಏರುಪೇರುಗಳನ್ನು ಎದುರಿಸಲು ಸರ್ಕಾರಗಳು ತಕ್ಷಣದ ಆಪತ್ಕಾಲೀನ ಪರಿಹಾರ ಕ್ರಮಗಳಿಗೆ ಸೀಮಿತವಾಗದೆ, ದೀರ್ಘಕಾಲೀನ ಕಾರ್ಯತಂತ್ರಗಳನ್ನು ರೂಪಿಸುವುದು ಅತ್ಯಗತ್ಯ. ಮಣ್ಣಿನ ತೇವಾಂಶ ಸಂರಕ್ಷಣೆ, ನೀರಾವರಿ ವ್ಯಾಪ್ತಿಯ ವೈಜ್ಞಾನಿಕ ವಿಸ್ತರಣೆ, ಹವಾಮಾನ ಬದಲಾವಣೆಗೆ ಸ್ಥಿತಿಸ್ಥಾಪಕತ್ವ ಹೊಂದಿರುವ(Climate-resilient)...

ಕಾಲೇಜು ಕ್ಯಾಂಪಸ್‌ಗಳಲ್ಲಿ ದಲಿತ ವಿದ್ಯಾರ್ಥಿಗಳೇ ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ?

‘ದಲಿತ ವಿದ್ಯಾರ್ಥಿಗಳೇ ಏಕೆ ಹೀಗೆ ಸಾಯುತ್ತಿದ್ದಾರೆ?’ — ಇದು ಐಐಟಿ ಬಾಂಬೆಯ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ತಾಯಿ ಸೋನಾಲಿ ವಾಕೋಡೆ ಕೇಳಿದ ಪ್ರಶ್ನೆ. ಈ ಪ್ರಶ್ನೆ ಕೇವಲ ಮಗನನ್ನು ಕಳೆದುಕೊಂಡ ತಾಯಿಯ...

“ಎಸ್‌ಐಆರ್ ಪ್ರಕ್ರಿಯೆಯಲ್ಲಿ ಜನರಿಗೆ ಅಗತ್ಯ ದಾಖಲೆಗಳ ಕುರಿತು ಸಮರ್ಪಕ ಮಾಹಿತಿ ದೊರೆಯುತ್ತಿಲ್ಲ. ನೋಟಿಸ್ ನೀಡಲಾಗುತ್ತಿದ್ದರೂ ಯಾವ ದಾಖಲೆ ಸಲ್ಲಿಸಬೇಕು ಎಂಬುದನ್ನು ಸ್ಪಷ್ಟಪಡಿಸದಿರುವುದು ಸಾಮಾನ್ಯ ಮತದಾರರನ್ನು ಗೊಂದಲಕ್ಕೀಡು ಮಾಡುತ್ತಿದೆ” ಎಂದು ಅವರು ಹೇಳಿದರು.

3189919

“ಬಿಎಲ್‌ಒಗಳು ಮನೆಗಳಿಗೆ ತೆರಳಿ ಅರ್ಜಿ ಪಡೆದು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡುತ್ತಿದ್ದಾರೆ. ಆದರೆ ಕುಟುಂಬದ ಸದಸ್ಯರ ವಿವರಗಳೇ ತಪ್ಪಾಗಿ ದಾಖಲಾಗುತ್ತಿರುವ ಪ್ರಕರಣಗಳಿವೆ. ಒಬ್ಬರನ್ನು ಮೃತಪಟ್ಟವರು, ಮತ್ತೊಬ್ಬರನ್ನು ಶಾಶ್ವತವಾಗಿ ಸ್ಥಳಾಂತರಗೊಂಡವರು ಎಂದು ನಮೂದಿಸಿದರೆ, ಅಂತಹ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಸಾಮಾನ್ಯ ಜನರು ಎಲ್ಲಿಗೆ ಹೋಗಬೇಕು?” ಎಂದು ಪ್ರಶ್ನಿಸಿದರು.

ದಾಖಲೆಗಳ ಕುರಿತು ಸ್ಪಷ್ಟ ಮಾಹಿತಿ ನೀಡಿ

“ಎಸ್‌ಐಆರ್‌ಗೆ ಸಂಬಂಧಿಸಿದಂತೆ ನೋಟಿಸ್ ನೀಡುವುದರ ಜತೆಗೆ ಮಾನ್ಯ ದಾಖಲೆಗಳ ಕುರಿತು ಸ್ಪಷ್ಟ ಮಾರ್ಗಸೂಚಿ ನೀಡಬೇಕು” ಎಂದು ಒತ್ತಾಯಿಸಿದರು.

“ಯಾವ ದಾಖಲೆ ಸಲ್ಲಿಸಬೇಕು ಎಂಬುದನ್ನು ಜನರಿಗೆ ತಿಳಿಸದೆ ದಾಖಲೆ ಕೇಳುವುದು ಸರಿಯಲ್ಲ. ವಿಶೇಷವಾಗಿ ಬಡವರು, ಕಾರ್ಮಿಕರು, ಅಲೆಮಾರಿಗಳು ಹಾಗೂ ದಾಖಲೆಗಳ ಕೊರತೆಯಿರುವ ಕುಟುಂಬಗಳಿಗೆ ಇದರಿಂದ ತೊಂದರೆಯಾಗಬಹುದು. ಜನರ ಮನೆಗಳಿಗೆ ತೆರಳಿ ವಾಸ್ತವಾಂಶ ಪರಿಶೀಲಿಸುವ ವ್ಯವಸ್ಥೆ ಬಲಪಡಿಸಬೇಕು” ಎಂದರು.

“ಕಲಬುರಗಿಯಲ್ಲಿ 5,21,957 ಮತದಾರರ ಹೆಸರುಗಳನ್ನು ಎಎಸ್‌ಡಿಆರ್ ಪಟ್ಟಿಯಲ್ಲಿ ಸೇರಿಸಲಾಗಿದೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ, ಹೆಸರು, ವಿಳಾಸ ಹಾಗೂ ಇತರ ವಿವರಗಳಲ್ಲಿನ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಮತದಾರರಿಗೆ ಸಮರ್ಪಕ ಅವಕಾಶ ನೀಡಬೇಕು” ಎಂದು ಹೇಳಿದರು.

“ಕಾಗುಣಿತ ತಪ್ಪು ಸೇರಿದಂತೆ ಯಾವುದೇ ಸಣ್ಣ ತಪ್ಪು ಮತದಾರನ ಹಕ್ಕಿಗೆ ಧಕ್ಕೆಯಾಗಬಾರದು. ಪಟ್ಟಿಯನ್ನು ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗೆ ಅವಕಾಶ ಕಲ್ಪಿಸಬೇಕು” ಎಂದು ಆಗ್ರಹಿಸಿದರು.

‘ಪಶ್ಚಿಮ ಬಂಗಾಳದ ಪರಿಸ್ಥಿತಿ ಕರ್ನಾಟಕದಲ್ಲಿ ಬರಬಾರದು’

“ಪಶ್ಚಿಮ ಬಂಗಾಳದ ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದ ವಿವಾದಗಳನ್ನು ಉಲ್ಲೇಖಿಸಿದ ಪ್ರಕಾಶ್ ರಾಜ್, ಕರ್ನಾಟಕದಲ್ಲಿಯೂ ಮತದಾರರು ತಮ್ಮ ಹಕ್ಕು ಉಳಿಸಿಕೊಳ್ಳಲು ವರ್ಷಗಟ್ಟಲೆ ಕಚೇರಿ ಮತ್ತು ನ್ಯಾಯಾಲಯಗಳ ಸುತ್ತ ಅಲೆದಾಡುವ ಪರಿಸ್ಥಿತಿ ಬರಬಾರದು” ಎಂದರು.

“ಸಾಮಾನ್ಯ ನಾಗರಿಕ ತನ್ನ ಮತದಾನದ ಹಕ್ಕಿಗಾಗಿ ವರ್ಷಗಳ ಕಾಲ ಹೋರಾಡುವ ಸ್ಥಿತಿ ನಿರ್ಮಾಣವಾಗಬಾರದು. ಚುನಾವಣಾ ಪ್ರಕ್ರಿಯೆ ಜನಸ್ನೇಹಿಯಾಗಿರಬೇಕು. ಅಧಿಕಾರಿಗಳು ಜನರ ಬಳಿಗೆ ತೆರಳಿ ಸಮಸ್ಯೆಗಳನ್ನು ಆಲಿಸಬೇಕು” ಎಂದು ಹೇಳಿದರು.

“ರಾಜಕಾರಣಿಗಳು ಮತ್ತು ಪ್ರಭಾವಿ ವ್ಯಕ್ತಿಗಳ ಕುಟುಂಬಗಳ ದಾಖಲೆ ಪರಿಶೀಲನೆಯಷ್ಟೇ ಅಲ್ಲದೆ, ಸಾಮಾನ್ಯ ಜನರ ಮನೆಗಳಿಗೂ ಪರಿಶೀಲನಾ ವ್ಯವಸ್ಥೆ ಸಮರ್ಪಕವಾಗಿ ತಲುಪಬೇಕು” ಎಂದು ಒತ್ತಾಯಿಸಿದರು.

ಸೆ.30ರೊಳಗೆ ದಾಖಲೆ ಸಂಗ್ರಹ

“ಎಸ್‌ಐಆರ್‌ನಿಂದ ಸಮಸ್ಯೆ ಎದುರಿಸುತ್ತಿರುವ ಮತದಾರರಿಂದ ದಾಖಲೆ ಹಾಗೂ ಮಾಹಿತಿಯನ್ನು ಸೆಪ್ಟೆಂಬರ್ 30ರೊಳಗೆ ಸಂಗ್ರಹಿಸಿ ರಾಜ್ಯ ಸರ್ಕಾರದ ಮುಂದಿಡಲಾಗುವುದು” ಎಂದು ತಿಳಿಸಿದರು.

“ಸಂಗ್ರಹಿಸಿರುವ ದಾಖಲೆಗಳು ಹಾಗೂ ವಾಸ್ತವಾಂಶಗಳನ್ನು ಅಕ್ಟೋಬರ್ 1ರಂದು ದೆಹಲಿಯಲ್ಲಿ ನಡೆಯುವ ಸುದ್ದಿಗೋಷ್ಠಿಯಲ್ಲಿ ಮಂಡಿಸಲಾಗುವುದು. ಅಕ್ಟೋಬರ್ 15ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಸಂತ್ರಸ್ತರು ಸೇರಲಿದ್ದಾರೆ” ಎಂದರು.

‘ಪ್ರತಿಯೊಬ್ಬರ ಮತಕ್ಕೂ ಸಮಾನ ಮೌಲ್ಯ’

“ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಮತದಾನದ ಹಕ್ಕು ನೀಡಿದೆ. ಶ್ರೀಮಂತನ ಮತಕ್ಕೂ ಬಡವನ ಮತಕ್ಕೂ ಸಮಾನ ಮೌಲ್ಯವಿದೆ. ಆದ್ದರಿಂದ ಅರ್ಹ ಮತದಾರರ ಹೆಸರುಗಳು ಯಾವುದೇ ಕಾರಣಕ್ಕೂ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದು ಚುನಾವಣಾ ವ್ಯವಸ್ಥೆಯ ಜವಾಬ್ದಾರಿ” ಎಂದು ಹೇಳಿದರು.

“ಎಸ್‌ಐಆರ್ ಕುರಿತು ನಾಗರಿಕ ಸಮಾಜದ ವಿವಿಧ ಸಂಘಟನೆಗಳು ಹಲವು ತಿಂಗಳಿಂದ ಆತಂಕ ವ್ಯಕ್ತಪಡಿಸುತ್ತಿವೆ. ಜನರ ಪ್ರಶ್ನೆಗಳಿಗೆ ಚುನಾವಣಾ ವ್ಯವಸ್ಥೆ ಸ್ಪಷ್ಟ ಉತ್ತರ ನೀಡಬೇಕು ಹಾಗೂ ಸಂಪೂರ್ಣ ಪಾರದರ್ಶಕತೆ ಖಚಿತಪಡಿಸಬೇಕು” ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಬರಗಾಲ ಪ್ಯಾಕೇಜ್ 1000 ಕೋಟಿ ರೂ. ಘೋಷಣೆ ಸೇರಿ ಇತರೆ ಬೇಡಿಕೆ ಈಡೇರಿಕೆಗೆ ಕೆಪಿಆರ್‌ಎಸ್‌ ಆಗ್ರಹ

“ಕರ್ನಾಟಕದಲ್ಲಿ ಯಾವುದೇ ಅರ್ಹ ಮತದಾರ ಮತದಾನದ ಹಕ್ಕು ಕಳೆದುಕೊಳ್ಳುವ ಪರಿಸ್ಥಿತಿ ಬರಬಾರದು. ದಾಖಲೆಗಳ ಸಮೇತ ವಾಸ್ತವಾಂಶಗಳನ್ನು ಜನರು ಮತ್ತು ಮಾಧ್ಯಮಗಳ ಮುಂದಿಡುವ ಕೆಲಸ ಮುಂದುವರಿಯಲಿದೆ” ಎಂದು ಅವರು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಲಮಟ್ಟಿ 3ನೇ ಹಂತಕ್ಕೆ ವೇಗ ನೀಡಲು ಅವಳಿ ಜಿಲ್ಲೆಗಳ ಹೋರಾಟಗಾರರ ರಣತಂತ್ರ

ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ ನೀರಿನ ಮಟ್ಟವನ್ನು 519.60 ಮೀಟರ್‌ನಿಂದ 524.256...

ಯಲ್ಲಾಪುರ | ಪ್ರವಾಸಿ ತಾಣಗಳ ಪ್ರವೇಶ ನಿರ್ಬಂಧ ತೆರವಿಗೆ ಬಿಜೆಪಿ ಆಗ್ರಹ; ಇಲ್ಲವಾದರೆ ಪ್ರತಿಭಟನೆ ಎಚ್ಚರಿಕೆ

ಯಲ್ಲಾಪುರ: ತಾಲೂಕಿನ ವಿವಿಧ ಪ್ರವಾಸಿ ತಾಣಗಳಿಗೆ ವಿಧಿಸಿರುವ ಪ್ರವೇಶ ನಿರ್ಬಂಧವನ್ನು ತೆರವುಗೊಳಿಸುವಂತೆ...

ಬಾಗಲಕೋಟೆ | ಮುಂದುವರಿದ ಬಿಸಿಲ ಬೇಗೆ: ಮಳೆ ನಿರೀಕ್ಷೆಯಲ್ಲಿ ಕೃಷ್ಣಾ ತೀರದ ರೈತರು

ಮಳೆಗಾಲ ಮುಗಿಯುವ ಹಂತದಲ್ಲಿದ್ದರೂ ಬಾಗಲಕೋಟೆ ಜಿಲ್ಲೆಯಲ್ಲಿ ವಾತಾವರಣ ಮಾತ್ರ ಬೇಸಿಗೆಯ ಸ್ವರೂಪ...

ಆಲಮಟ್ಟಿ 3ನೇ ಹಂತದ ಯೋಜನೆ ಜಾರಿಗೆ ಹೋರಾಟ ತೀವ್ರ

ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ ನೀರಿನ ಮಟ್ಟವನ್ನು 519.60 ಮೀಟರ್‌ನಿಂದ 524.256...