ಕಲಬುರಗಿ ನಗರದ ಸಂತ್ರಾಸವಾಡಿ ಪ್ರದೇಶದಲ್ಲಿ ಯುವತಿಗೆ ಲಿಫ್ಟ್ ಕೊಟ್ಟಿದ್ದಕ್ಕೆ ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿ ಅನೈತಿಕ ಪೊಲೀಸ್ ಗಿರಿ ಮೆರೆದಿರುವ ಘಟನೆ ಕಲಬುರಗಿಯಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಬಂಧಿಸಲಾಗಿದೆ.
ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿರುವ ಬೈಲಪ್ಪ ಅದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಅನ್ಯ ಧರ್ಮದ ಯುವತಿಗೆ ತಮ್ಮ ಬೈಕ್ನಲ್ಲಿ ಡ್ರಾಪ್ ನೀಡಿದ್ದಾರೆ. ಈ ವೇಳೆ ಬೈಕ್ ಅಡ್ಡಗಟ್ಟಿ ಕಿಡಗೇಡಿಗಳು ತಮ್ಮ ಸಮುದಾಯದ ಯವತಿಯನ್ನು ಬೈಕ್ ಮೇಲೆ ಡ್ರಾಪ್ ಮಾಡಿದ್ದಕ್ಕೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.
ಹಲ್ಲೆಗೊಳಗಾದ ಯುವಕ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ನಗರದ ಎಂ.ಬಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಪ್ರಕರಣಕ್ಕೆ ಸಂಬಂಧ ನಗರದ ಎಂ.ಬಿ.ನಗರ ಠಾಣೆ ಪೊಲೀಸರು ಮೊಹಮ್ಮದ್ ಸಲ್ಮಾನ್, ಮೊಹಮ್ಮದ್ ಆದಿಲ್, ಮೊಹಮ್ಮದ್ ರೆಹಾನ್, ಮೊಹಮ್ಮದ್ ಉಜೈರ್, ಮೊಹಮ್ಮದ್ ಫೈಜ್, ಮೊಹಮ್ಮದ್ ಆಸಿಫ್ ಎಂಬ ಆರು ಜನ ಯುವಕರನ್ನು ಬಂಧಿಸಿದ್ದಾರೆ, ಉಳಿದ ಆರೋಪಿಗಳ ಬಂಧನಕ್ಕೆ ಜಾಲ ಬೀಸಿದ್ದಾರೆ.