ಕಲಬುರಗಿ | ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಎಸ್‌ಕೆಎಂ ಆಗ್ರಹ

Date:

ನಗರದಲ್ಲಿ ತೀವ್ರಗೊಂಡಿರುವ ಕುಡಿಯುವ ನೀರಿನ ಸಮಸ್ಯೆಯನ್ನು ತಕ್ಷಣ ಪರಿಹರಿಸಬೇಕು, ಎಲ್‌ಆ್ಯಂಡ್‌ಟಿ ಸಂಸ್ಥೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಜಿಲ್ಲಾ ಘಟಕದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಿದರು.

- Advertisement -

ನಗರದ ಜಗತ್ ವೃತ್ತದಿಂದ ಖಾಲಿ ಕೊಡಗಳನ್ನು ಹಿಡಿದು ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಮಹಾನಗರ ಪಾಲಿಕೆ ಕಚೇರಿವರೆಗೆ ತೆರಳಿ, ಪಾಲಿಕೆ ಆಯುಕ್ತರ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...
IMG 20260804 WA0001

ಈ ವೇಳೆ ಎಸ್‌ಕೆಎಂ ಹಾಗೂ ಎಐಕೆಎಸ್ ಜಿಲ್ಲಾ ಸಂಚಾಲಕ ಶರಣಬಸಪ್ಪ ಮಮಶೆಟ್ಟಿ ಮಾತನಾಡಿ, “ಭೀಕರ ಬರಗಾಲದ ಪರಿಣಾಮ ನಗರದಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದು, ಬಾವಿ ಮತ್ತು ಬೋರ್‌ವೆಲ್‌ಗಳು ಬತ್ತುತ್ತಿವೆ. ಹಲವು ವಾರ್ಡ್‌ಗಳಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆಯಾಗದೆ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಬಡ ಹಾಗೂ ಕೂಲಿ ಕಾರ್ಮಿಕ ಕುಟುಂಬಗಳು ಖಾಸಗಿ ಟ್ಯಾಂಕರ್‌ಗಳಿಂದ ನೀರು ಖರೀದಿಸುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಜಾನುವಾರುಗಳಿಗೂ ನೀರಿನ ಅಭಾವ ಎದುರಾಗಿದೆ. ನೀರಿನ ಸಮಸ್ಯೆ ನಿವಾರಿಸುವಲ್ಲಿ ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ವಿಫಲರಾಗಿದ್ದಾರೆ,” ಎಂದು ಆರೋಪಿಸಿದರು.

“ನಗರದ ಕುಡಿಯುವ ನೀರಿನ ಯೋಜನೆ ನಿರ್ವಹಿಸುತ್ತಿರುವ ಎಲ್‌ಆ್ಯಂಡ್‌ಟಿ ಸಂಸ್ಥೆ ಹಲವು ವರ್ಷಗಳಿಂದ ಸಮರ್ಪಕವಾಗಿ ಕಾರ್ಯನಿರ್ವಹಿಸಿಲ್ಲ. ಕಾಮಗಾರಿ ಹೆಸರಿನಲ್ಲಿ ರಸ್ತೆಗಳನ್ನು ಅಗೆದು ಸಾರ್ವಜನಿಕರಿಗೆ ತೊಂದರೆ ಉಂಟುಮಾಡಲಾಗಿದೆ. ಇದರಿಂದ ವಿದ್ಯಾರ್ಥಿಗಳು, ವಯೋವೃದ್ಧರು ಹಾಗೂ ವಾಹನ ಸವಾರರು ಅಪಾಯ ಎದುರಿಸುತ್ತಿದ್ದು, ಅಪಘಾತಗಳೂ ಹೆಚ್ಚಾಗಿವೆ. ನಗರದ ಹಲವು ಪ್ರದೇಶಗಳಲ್ಲಿ ಒಳಚರಂಡಿ ವ್ಯವಸ್ಥೆ ಹದಗೆಟ್ಟಿದ್ದು, ದುರ್ವಾಸನೆ ಹಾಗೂ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ,” ಎಂದು ಹೇಳಿದರು.

“ನಗರದಲ್ಲಿ ಮನೆಮನೆಗೆ ಶುದ್ಧ ಕುಡಿಯುವ ನೀರು ಪೂರೈಕೆ ವ್ಯವಸ್ಥೆ ಕಲ್ಪಿಸುವುದು, ಎಲ್‌ಆ್ಯಂಡ್‌ಟಿ ಸಂಸ್ಥೆಯ ವಿರುದ್ಧ ಕಾನೂನು ಕ್ರಮ ಜರುಗಿಸುವುದು, ಸಾರ್ವಜನಿಕ ಶೌಚಾಲಯ ನಿರ್ಮಾಣ, ಒಳಚರಂಡಿ ದುರಸ್ತಿ, ರಸ್ತೆ ಅಗಲೀಕರಣ ಹಾಗೂ ಬರಪೀಡಿತರಿಗೆ ಸೂಕ್ತ ಪರಿಹಾರ ಘೋಷಿಸುವಂತೆ ಸರ್ಕಾರವನ್ನು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಮಕ್ಕಳ ಹಕ್ಕು, ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮ

ಪ್ರತಿಭಟನೆಯಲ್ಲಿ ಭೀಮಾಶಂಕರ ಮಾಡಿಯಾಳ, ನಾಗೇಂದ್ರಪ್ಪ ಥಂಬೆ, ನಾಗಯ್ಯ ಸ್ವಾಮಿ, ಕರೆಪ್ಪ ಕರಗೊಂಡ, ದೇವಾನಂದ ಬಿರಾದಾರ್, ಸಿದ್ದು ಎಸ್‌.ಎಲ್., ಮೌಲಾ ಮುಲ್ಲಾ, ಸಾಜಿದ್ ಅಹ್ಮದ್ ಸೇರಿದಂತೆ ಎಸ್‌ಕೆಎಂ ಹಾಗೂ ವಿವಿಧ ರೈತ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಸಿಎಂ ಭೇಟಿ ಹಿನ್ನೆಲೆ: ಸಂಚಾರ ಮಾರ್ಗ ಬದಲಾವಣೆ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಹೋಬಳಿಗೆ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾ‌ರ್...

ಕೋಲಾರ | ಕ್ರಷರ್ ಘಟಕದಿಂದ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿ: ಸ್ಥಗಿತಕ್ಕೆ ಗ್ರಾಮಸ್ಥರ ಪ್ರತಿಭಟನೆ

ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ...

ಕೋಲಾರ | ಕೆ.ಎಸ್. ಗಣೇಶ್ ನೇತೃತ್ವದಲ್ಲಿ ಬೆಳೆದ ಸಂಘದಿಂದ ಎರಡು ಜಿಲ್ಲೆಗಳ ಪತ್ರಕರ್ತರಿಗೆ ಆರ್ಥಿಕ, ಆರೋಗ್ಯ ಹಾಗೂ ಸಾಮಾಜಿಕ ನೆರವು

ಪತ್ರಕರ್ತರ ಆರ್ಥಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಗೊಂಡಿರುವ ಕೋಲಾರ...

ಚಿಕ್ಕಮಗಳೂರು | ಸಿಎಂ ಭೇಟಿ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ; ಹೆಚ್.ಪಿ ಮಂಜೇಗೌಡ

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್...