ಕಲಬುರಗಿ | ನೋಟ್‌ಬುಕ್, ಪೆನ್ನು ವಿತರಿಸುವ ಮೂಲಕ ಜನ್ಮದಿನವನ್ನು ಆಚರಿಸಿಕೊಂಡ ಸ್ನೇಹ ಹಡಪದ

Date:

ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದ ಪವಾಡ ಪುರುಷ ಸದ್ಗುರು ಶ್ರೀ ಕೋರಿಸಿದ್ದೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕುಮಾರಿ ಸ್ನೇಹಾ ಎಂ. ಹಡಪದ ಅವರ 10ನೇ ವರ್ಷದ ಜನ್ಮದಿನವನ್ನು ಸಮಾಜಮುಖಿ ಕಾರ್ಯಕ್ರಮದ ಮೂಲಕ ಆಚರಿಸಲಾಯಿತು.

- Advertisement -

ಮಲ್ಲಿಕಾರ್ಜುನ ಬಿ. ಹಡಪದ ಸುಗೂರ ಎನ್ ಅವರ ಪುತ್ರಿ ಸ್ನೇಹಾ, ತನ್ನ ಜನ್ಮದಿನದ ಅಂಗವಾಗಿ ನಾಲ್ಕನೇ ತರಗತಿಯ ಸಹಪಾಠಿಗಳಿಗೆ ನೋಟ್‌ಬುಕ್ ಹಾಗೂ ಪೆನ್ನುಗಳನ್ನು ವಿತರಿಸಿದರು. ಶಾಲೆಯ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಶಿಕ್ಷಕ-ಶಿಕ್ಷಕಿಯರಿಗೆ ಪೆನ್ನುಗಳನ್ನು ಉಡುಗೊರೆಯಾಗಿ ನೀಡಿ ಗೌರವಿಸಿದರು. ಒಂದರಿಂದ ಹತ್ತನೇ ತರಗತಿಯವರೆಗಿನ ಎಲ್ಲ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ-ತಿನಿಸುಗಳನ್ನು ವಿತರಿಸಿ ಸಂತೋಷ ಹಂಚಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನ್ಯಾಯಕ್ಕಾಗಿ ಬಿಲ್ಕಿಸ್ ಬಾನೋ 22 ವರ್ಷಗಳ ಅಲೆದಾಟ: ಇಂದಿಗೂ...

2002ರ ಗುಜರಾತ್ ಗಲಭೆಯ ಕರಾಳ ನೆನಪುಗಳನ್ನು ಹೊತ್ತು, ತಮ್ಮವರನ್ನೆಲ್ಲಾ ಕಳೆದುಕೊಂಡು, ಅತ್ಯಾಚಾರದ ಘೋರ ಕ್ರೌರ್ಯಕ್ಕೆ ತುತ್ತಾದ ಬಿಲ್ಕಿಸ್ ಬಾನೋ ಬದುಕು ಇಂದಿಗೂ ನೆಮ್ಮದಿ ಕಂಡಿಲ್ಲ. ಇತ್ತೀಚೆಗೆ ಸುಪ್ರೀಂ ಕೋರ್ಟ್ ಇಬ್ಬರು ಅಪರಾಧಿಗಳ ಜೀವಾವಧಿ...

ಡಿಪಿಡಿಪಿ ಕಾಯ್ದೆ: ನಾಗರಿಕರ ಖಾಸಗಿತನದ ರಕ್ಷಣೆಯೋ, ಪತ್ರಿಕಾ ಸ್ವಾತಂತ್ರ್ಯದ...

ಡಿಪಿಡಿಪಿ ಕಾಯ್ದೆ ನಾಗರಿಕರ ಗೌಪ್ಯತೆಯನ್ನು ಕಾಪಾಡುವ ಭರವಸೆ ನೀಡುತ್ತಿದೆ. ಆದರೆ, ಇದೇ ಕಾಯ್ದೆಯು ಪತ್ರಕರ್ತರ ಮೂಲಭೂತ ಹಕ್ಕು ಮತ್ತು ತನಿಖಾ ಪತ್ರಿಕೋದ್ಯಮದ ಮೇಲೆ ಕರಿನೆರಳು ಬೀರಲಿದೆಯೇ? ಆರ್‌ಟಿಐ ದುರ್ಬಲಗೊಳ್ಳುತ್ತಿದೆಯೇ? ಒಂದೆಡೆ ವ್ಯಕ್ತಿಯ ಖಾಸಗಿತನದ...

ಉಳಿತಾಯದ ಪಾಠ ಹೇಳಿದ ಮೋದಿ: ಬೆಲೆ ಏರಿಕೆ, ನಿರುದ್ಯೋಗ;...

ಮಕ್ಕಳ ಶಿಕ್ಷಣ, ಮದುವೆ ಮತ್ತು ಮುಪ್ಪಿನ ಕಾಲಕ್ಕಾಗಿ ಹೊಟ್ಟೆಬಟ್ಟೆ ಕಟ್ಟಿ ಉಳಿತಾಯ ಮಾಡುವುದು ಭಾರತೀಯರ ಸಂಸ್ಕೃತಿಯಲ್ಲೇ ಬಂದಿದೆ. ಅವರಿಗೆ ಉಳಿತಾಯದ ಪಾಠ ಕಲಿಸುವ ಅಗತ್ಯವಿಲ್ಲ; ಬದಲಾಗಿ ಬಡತನದಿಂದ ಹೊರಬಂದ ಕುಟುಂಬಗಳು ಮತ್ತೆ ಸಂಕಷ್ಟಕ್ಕೆ...

ಹಡಪದ ಅಪ್ಪಣ್ಣ ಸಮಾಜದ ಕಲಬುರಗಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹಾಗೂ ನಾಲವಾರ ವಲಯ ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿಯಾಗಿರುವ ಮಲ್ಲಿಕಾರ್ಜುನ ಬಿ. ಹಡಪದ ಅವರು ಕಳೆದ ನಾಲ್ಕು ವರ್ಷಗಳಿಂದ ಮಗಳ ಜನ್ಮದಿನವನ್ನು ಶಾಲಾ ಮಕ್ಕಳಿಗೆ ಶೈಕ್ಷಣಿಕ ಸಾಮಗ್ರಿ ಹಾಗೂ ಸಿಹಿ ವಿತರಿಸುವ ಮೂಲಕ ಆಚರಿಸುತ್ತಿದ್ದಾರೆ. ಮಕ್ಕಳಲ್ಲಿ ಹಂಚಿಕೊಳ್ಳುವ ಗುಣ, ಶಿಕ್ಷಣದ ಮಹತ್ವ ಮತ್ತು ಸಮಾಜಸೇವೆಯ ಮನೋಭಾವ ಬೆಳೆಸುವ ಉದ್ದೇಶದಿಂದ ಈ ಕಾರ್ಯ ಕೈಗೊಳ್ಳುತ್ತಿದ್ದಾರೆ.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಶಾಂತಿನಾಥ ಹಿರೇಗೌಡ ಕೊಲ್ಲೂರು ಅವರು ಸ್ನೇಹಾಗೆ ಉತ್ತಮ ಆಯಸ್ಸು, ಆರೋಗ್ಯ, ವಿದ್ಯೆ ಹಾಗೂ ಉಜ್ವಲ ಭವಿಷ್ಯ ಲಭಿಸಲಿ ಎಂದು ಹಾರೈಸಿದರು. ಮುಖ್ಯೋಪಾಧ್ಯಾಯ ಜಯಸಿಂಗ್ ಜಾಧವ್ ಸೇರಿದಂತೆ ಶಾಲೆಯ ಶಿಕ್ಷಕ-ಶಿಕ್ಷಕಿಯರು ಜನ್ಮದಿನದ ಶುಭಾಶಯ ಕೋರಿ ಆಶೀರ್ವದಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಮೂಲಸೌಕರ್ಯಕ್ಕಾಗಿ ಪಾಲಿಕೆ ಎದುರು ಸ್ಲಂ ನಿವಾಸಿಗಳ ಪ್ರತಿಭಟನೆ

ಜನ್ಮದಿನದ ಸಂಭ್ರಮವನ್ನು ಸಹಪಾಠಿಗಳೊಂದಿಗೆ ಹಂಚಿಕೊಂಡು ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ ಸ್ನೇಹಾಳ ಸಮಾಜಮುಖಿ ಕಾರ್ಯಕ್ಕೆ ಶಿಕ್ಷಕರು ಹಾಗೂ ಗ್ರಾಮಸ್ಥರಿಂದ ಮೆಚ್ಚುಗೆ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಹದಗೆಟ್ಟ ರಸ್ತೆ, ಕೆಟ್ಟ ಬಸ್‌ಗಳಿಂದ ಪ್ರಯಾಣಿಕರಿಗೆ ತೊಂದರೆ: ರಸ್ತೆ ದುರಸ್ತಿ, 50 ಹೊಸ ಬಸ್‌ಗಳಿಗಾಗಿ ಸಿಪಿಐಎಂ ಆಗ್ರಹ

ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಸುಗಮ ಸಾರಿಗೆ...

ಉಡುಪಿ | ನಂಬಿಕೆ, ವಿಶ್ವಾಸದಿಂದ ಸಹಕಾರ ರಂಗ ಸುದೃಢ: ಕಾರ್ತಿಕ್ ಕುಮಾರ್

ರಾಷ್ಟ್ರೀಕೃತ ಬ್ಯಾಂಕುಗಳೊಂದಿಗೆ ಸ್ಪರ್ಧೆ ನೀಡುತ್ತಿರುವ ಸಹಕಾರಿ ರಂಗವು ಜನರ ನಂಬಿಕೆ ಮತ್ತು...

ದಾಂಡೇಲಿ, ಜೋಯಿಡಾ ತಾಲೂಕಿನ ಹಲವು ಭಾಗಗಳಲ್ಲಿ ನವೆಂಬರ್.20ರಂದು ವಿದ್ಯುತ್ ವ್ಯತ್ಯಯ

ದಾಂಡೇಲಿ ಹಾಗೂ ಜೋಯಿಡಾ ತಾಲೂಕಿನ ವಿವಿಧೆಡೆ 11 ಕೆ.ವಿ ವಿದ್ಯುತ್ ಮಾರ್ಗ...

ಕೋಲಾರ | ಶಾಹಿ ಗಾರ್ಮೆಂಟ್ಸ್ ವೇತನ ತಾರತಮ್ಯ ಸಲ್ಲದು; ಮೂಲಸೌಕರ್ಯ ಕಲ್ಪಿಸದಿದ್ದರೆ ಕಠಿಣ ಕ್ರಮ : ಡಿಸಿ ರವಿಕುಮಾರ್

ಕೋಲಾರದ ಶಾಹಿ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಕಾರ್ಮಿಕರ ವೇತನ ತಾರತಮ್ಯ...