ಕಲಬುರಗಿ | ಬಹುಜನ ಚಳವಳಿಯಿಂದ ಸಾಮಾಜಿಕ ಪರಿವರ್ತನೆ : ಹ.ರಾ.ಮಹೇಶ

Date:

ಬಹುಜನ ಸಮಾಜ ಪಕ್ಷದ ರಾಜ್ಯ ಸಂಯೋಜಕ ಡಾ. ಹ.ರಾ.ಮಹೇಶ ಅವರಿಗೆ ತಮ್ಮ ವೃತ್ತಿ ಬದುಕಿಗೆ ಸ್ವಯಂ ನಿವೃತ್ತಿ ಘೋಷಿಸಿದ ಹಿನ್ನೆಲೆ ನಗರದಲ್ಲಿ ಭಾನುವಾರ ಅಭಿನಂದನಾ ಸಮಾರಂಭ ನಡೆಯಿತು.

- Advertisement -

ಹ.ರಾ.ಮಹೇಶ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ, ʼಪ್ರಸ್ತುತ ಸಮಾಜದಲ್ಲಿ ಯುವ ಜನಾಂಗ, ವಿದ್ಯಾರ್ಥಿ, ಸಮುದಾಯ, ಮಹಿಳಾ ಸಮುದಾಯದ ಅನೇಕ ಸಮಸ್ಯೆಗಳು ಎದುರಿಸುತ್ತಿದೆ. ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದರ ಬಗ್ಗೆ ನಾವೆಲ್ಲರೂ ಯೋಚಿಸಬೇಕಾಗಿದೆ’ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

‘ಸಂವಿಧಾನ ಜಾರಿಯಾಗಿ 76 ವರ್ಷ ಕಳೆದರೂ ಸಮಾಜದಲ್ಲಿ ಬೇರೂರಿರುವ ಬಡತನ, ಹಸಿವು, ನಿರುದ್ಯೋಗ, ಮಹಿಳಾ ದೌರ್ಜನ್ಯಗಳಿಗೆ ಮುಕ್ತಿ ಸಿಕ್ಕಿಲ್ಲ. ನಮ್ಮನ್ನಾಳುವ ಸರ್ಕಾರಗಳು ಸಂವಿಧಾನ ಬದ್ಧವಾಗಿ ಆಡಳಿತ ನೀಡದ ಕಾರಣಕ್ಕೆ ದೇಶದಲ್ಲಿ ಹಲವು ಸಮಸ್ಯೆಗಳು ಕಾಡುತ್ತಿವೆ. ಈ ಬಗ್ಗೆ ಆತ್ಮವಲೋಕನ ಮಾಡಿಕೊಳ್ಳುವ ಅಗತ್ಯವಿದೆ. ಆರ್ಥಿಕ ಅಸಮಾನತೆ, ಸಾಮಾಜಿಕ, ಅಸಮಾನತೆ ತೊಲಗಿಸಬೇಕಾದರೆ ಸಂವಿಧಾನ ಬದ್ಧವಾಗಿ ಆಡಳಿತ ಮಾಡುವ ಬಹುಜನ ಸಮಾಜ ಪಕ್ಷಕ್ಕೆ ನಾವೆಲ್ಲರೂ ಬಲ ನೀಡಬೇಕಾಗಿದೆ’ ಎಂದು ಹೇಳಿದರು.

‘ಬಹುಜನ ಚಳುವಳಿ ಇನ್ನು ಸಕ್ರಿಯವಾಗಿ, ಬಲವಾಗಿ ಕಾರ್ಯನಿರ್ವಹಿಸಬೇಕಾದರೆ ನೌಕರರು, ವಿದ್ಯಾವಂತರು ಚಳುವಳಿಗಾಗಿ ತ್ಯಾಗ ಮನೋಭಾವ ಅಳವಡಿಸಿಕೊಳ್ಳಬೇಕಾಗಿದೆ. ರಾಜ್ಯದಲ್ಲಿ ಬಿಎಸ್ಪಿ ಪಕ್ಷ ಅಧಿಕಾರಕ್ಕೆ ತರುವ ಪ್ರಯತ್ನ ನನ್ನದಾಗಿದೆʼ ಎಂದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ಎಲ್.ಆರ್.ಭೋಸಲೆ, ಮಹದೇವ ಧನ್ನಿ, ತಿಪ್ಪಣ್ಣ ಕಿನ್ನೂರು, ಮೈಲಾರಿ ಸೆಳ್ಳಗಿ, ಹುಚ್ಚಪ್ಪ ವಟ್ಟರ್, ಡಾ.ಅನಿಲ ಟೆಂಗಳಿ, ಬಹುಜನ ಸಮಾಜ ಪಕ್ಷದ ಜಿಲ್ಲಾ ಅಧ್ಯಕ್ಷ ಆನಂದ ಮಸ್ಕಿ, ಶಿವಲೀಲಾ ಪಾಟೀಲ್ ಹಡಗಿಲ್, ಪ್ರಿಯಾಂಕಾ ಜಮಾದಾರ್, ಮಾಶಾಕ್ ಪಟೇಲ್‌ ಹಾಗೂ ಸಾಮಾಜಿಕ ಚಿಂತಕರು, ಕಾರ್ಯಕರ್ತರು ಭಾಗವಹಿಸಿದರು.

ರಾಜ್ಯದಲ್ಲಿ ಬಿಎಸ್ಪಿ ಅಧಿಕಾರಕ್ಕೆ ತರುವ ಪ್ರಯತ್ನ ನನ್ನದು :

ಭಾರತೀಯ ಸಂವಿಧಾನದ ಆಶಯಗಳನ್ನು ಚಳವಳಿಯ ಮೂಲಕ ಜನರಿಗೆ ತಲುಪಿಸುವ ಮೂಲ ಉದ್ದೇಶದಿಂದ ನನ್ನ ವೃತ್ತಿ ಬದುಕಿಗೆ ನಿವೃತ್ತಿ ಘೋಷಿಸಿದ್ದು, ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಬಹುಜನ ಪಕ್ಷ ಅಧಿಕಾರಕ್ಕೆ ತರುವ ಗುರಿ ಹೊಂದಿದ್ದೇನೆʼ ಎಂದು ಸಾಮಾಜಿಕ ಚಿಂತಕ ಹ.ರಾ.ಮಹೇಶ ಹೇಳಿದರು.

ಉಪನ್ಯಾಸಕ ವೃತ್ತಿಗೆ ಸ್ವಯಂ ನಿವೃತ್ತಿ ಘೋಷಿಸಿ ಸಾಮಾಜಿಕ ಚಳುವಳಿಗಾಗಿ ಪೂರ್ಣಾವಧಿ ಕಾರ್ಯಕರ್ತರಾಗಿ ಕೆಲಸ ಮಾಡಲು ಪಣತೊಟ್ಟಿರುವ ಹ.ರಾ.ಮಹೇಶ ಅವರಿಗೆ ಶನಿವಾರ ಬೀದರ್‌ನಲ್ಲಿ ಜಿಲ್ಲಾ ಮೂಲಭಾರತೀಯ ಸಮಾಜದ ನೌಕರರ ವತಿಯಿಂದ ಸಿದ್ಧಾರ್ಥ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

WhatsApp Image 2025 09 07 at 9.56.39 PM
ಬೀದರ್‌ನಲ್ಲಿ ಏರ್ಪಡಿಸಿದ ಅಭಿನಂದನಾ ಸಮಾರಂಭದಲ್ಲಿ ಚಿಂತಕ ಹ.ರಾ.ಮಹೇಶ ಅವರು ಮಾತನಾಡಿದರು.

ಸಮಾಜದಲ್ಲಿ ಗೌತಮ್ ಬುದ್ಧರ ಧಮ್ಮ ಚಿಂತನೆ ಬಿತ್ತುವುದು ಅತ್ಯಂತ ಅಗತ್ಯವಾಗಿದೆ. ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ವಂಚಿತರಾಗುತ್ತಿರುವ ಸಮುದಾಯಗಳನ್ನು ಮೇಲೆತ್ತುವ ಪ್ರಯತ್ನಕ್ಕೆ ನಾವೆಲ್ಲರೂ ಶ್ರಮಿಸಬೇಕಾಗಿದೆ. ಈ ದಿಸೆಯಲ್ಲಿ ಬದುಕು ಪೂರ್ತಿ ಚಳವಳಿಗಾಗಿ ಶ್ರಮಿಸಲು ಹೊರಟಿರುವ ನನಗೆ ಎಲ್ಲರ ಸಹಕಾರ ಅಗತ್ಯವಿದೆʼ ಎಂದು ತಿಳಿಸಿದರು.

WhatsApp Image 2025 09 07 at 9.19.58 AM

ಕಾರ್ಯಕ್ರಮದಲ್ಲಿ ಪ್ರಮುಖರಾದ ವಿಠಲದಾಸ್‌ ಪ್ಯಾಗೆ, ಪ್ರೇಮಸಾಗರ್ ದಾಂಡೇಕರ್, ರಾಜಕುಮಾರ ಗುನ್ನಳ್ಳಿ, ಶ್ಯಾಮಸುಂದರ್ ಖಾನಾಪುರಕರ, ಸುಮಂತ ಕಟ್ಟಿಮನಿ, ಸೂರ್ಯಕಾಂತ ಸಿಂಗೆ, ಮಹೇಶ ಗೊರನಾಳಕರ್‌, ಟಿ.ಆರ್.ದೊಡ್ಡೆ, ಮಹಾದೇವ ಕಾಂಬಳೆ, ಪಾಂಡುರಂಗ ಬೆಲ್ದಾರ್ ಸೇರಿದಂತೆ‌ ಸಾಮಾಜಿಕ ಚಿಂತಕರು, ಹೋರಾಟಗಾರರು ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ : ಬೀದರ್‌ | ಕರ್ತವ್ಯ ಲೋಪ, ನಿರ್ಲಕ್ಷ್ಯತನ : ವೈದ್ಯೆ ಅಮಾನತು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...