ಕಲಬುರಗಿ | ದೇಶಸೇವೆ ಮುಗಿಸಿ ತಾಯ್ನಾಡಿಗೆ ಮರಳಿದ ವೀರಯೋಧ ಸಿದ್ದರಾಮ ಮುನ್ನೊಳಿ; ಗ್ರಾಮಸ್ಥರಿಂದ ಅದ್ದೂರಿ ಸ್ವಾಗತ

Date:

ದೇಶದ ಗಡಿಯಲ್ಲಿ ಸೈನಿಕನಾಗಿ ಸೇವೆ ಸಲ್ಲಿಸಿ ಹುಟ್ಟೂರಿಗೆ ವಾಪಸಾದಾ ಯೋಧ ಸಿದ್ದರಾಮ ಮುನ್ನೊಳಿ ಅವರಿಗೆ ಅದ್ದೂರಿ ಸ್ವಾಗತ ಕೋರಿದ್ದು, ಇಡೀ ಊರೇ ಹೂಮಳೆಗೆರೆದು ಅದ್ದೂರಿ ಮೇರವಣಿಗೆ ನಡೆಸುವ ಮೂಲಕ ಹಬ್ಬದಂತೆ ಸಂಭ್ರಮಿಸಿದ್ದಾರೆ.

- Advertisement -

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಪಡಸಾವಳಿ ಗ್ರಾಮದಲ್ಲಿ ಎಲ್ಲೆಂದರಲ್ಲಿ ರಾರಾಜಿಸುತ್ತಿರುವ ತ್ರಿವರ್ಣ ಧ್ವಜಗಳು, ಒಂದೇ ಮಾತರಂ ಎಂದು ಘೋಷಣೆ ಕೂಗಿತ್ತಿರುವ ಯುವಕರು, ತೆರೆದ ವಾಹನದಲ್ಲಿ ಜನರತ್ತ ಕೈಬಿಸುತ್ತಿರುವ ವೀರಯೋಧ. ಈ ಎಲ್ಲ ದೃಶ್ಯಗಳು ಕಂಡುಬಂದಿದೆ. 40 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ತವರಿಗೆ ವಾಪಸ್ಸಾದ ವೀರಯೋಧ ಸಿದ್ದರಾಮ ಮುನ್ನೊಳಿ ಅವರನ್ನು ಗ್ರಾಮಸ್ಥರೆಲ್ಲ ಸೇರಿ ಅದ್ದೂರಿಯಾಗಿ ಸ್ವಾಗತಿಸಿದರು‌. ನಗರದ ತುಂಬೆಲ್ಲ ತೆರೆದ ವಾಹನದಲ್ಲಿ ಭವ್ಯ ಮೆರವಣಿಗೆ ನಡೆಸಿ ದೇಶಾಭಿಮಾನ ಮೆರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬಳಿಕ ನಡೆದ ಸಮಾರಂಭದಲ್ಲಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್, ಡಾ. ಶಂಭುಲಿಂಗ ಶಿವಾಚಾರ್ಯರು, ಮಾಜಿ ಸೈನಿಕರು, ಗ್ರಾಮದ ಗಣ್ಯರು ಭಾಗವಹಿಸಿ ನಿವೃತ್ತ ಯೋಧ ಸಿದ್ದರಾಮ ಅವರಿಗೆ ಅಭಿನಂದನೆ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ನಿಯಮ ಮೀರಿ ಪ್ಲಾಸ್ಟಿಕ್ ಬಳಸಿದರೆ ಅಂಗಡಿಗಳ ಪರವಾನಗಿ ರದ್ದು: ಸುಭಾಷ್ ಆಡಿ ಎಚ್ಚರಿಕೆ

ಮನೆಯಲ್ಲಿ ಅದೆಷ್ಟೇ ಕಷ್ಟ ಇದ್ದರೂ ಸಹ ದೇಶಸೇವೆಯೇ ಮುಖ್ಯವೆಂದು ಯೋಧ ಸಿದ್ದರಾಮ ಅವರು ಛಲ ಬಿಡದೆ 40 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ, ದೇಶದ ನಾನಾ ಭಾಗಗಳಲ್ಲಿ ಕರ್ತವ್ಯ ನಿರ್ವಹಿಸಿ, ರಾಷ್ಟ್ರಪತಿ ಪದಕವನ್ನು ಪಡೆದು ಸೈ ಎನಿಸಿಕೊಳ್ಳುವ ಮೂಲಕ ಯುವಕರಿಗೆ ಮಾದರಿಯಾಗಿದ್ದಾರೆ.

ವರದಿ: ಸಿಟಿಜನ್ ಜರ್ನಲಿಸ್ಟ್ ರಾಜೇಂದ್ರ ರಾಜವಾಳ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...

ದಸರಾ, ಅಭಿಮನ್ಯು ಬೀಳ್ಕೊಡುಗೆಗೆ ಗಾಯನದ ಸ್ಪರ್ಶ

ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ...