ಕಲಬುರಗಿ | ಅತ್ತೆ ಮನೆಯಲ್ಲಿ ₹11 ಲಕ್ಷ ಕಳವು ಮಾಡಿದ ಅಳಿಯನ ಬಂಧನ

Date:

ಅತ್ತೆಯ ಮನೆಯಲ್ಲಿ ಇಟ್ಟಿದ್ದ ಹಣವನ್ನು ಕದ್ದು ಪರರ ಮೇಲೆ ಕಳ್ಳತನದ ಕೃತ್ಯವನ್ನು ಹೊರಿಸಲು ಯತ್ನಸಿದ್ದ ಆರೋಪಿಯನ್ನು ಕಲಬುರಗಿ ಜಿಲ್ಲೆಯ ಕಾಳಗಿ ಠಾಣೆಯ ಪೊಲೀಸರು ಬಂಧಿಸಿ, ಆತನಿಂದ ₹9 ಲಕ್ಷ ವಶಕ್ಕೆ ಪಡೆದಿದ್ದಾರೆ.

- Advertisement -

ಕಾಳಗಿ ತಾಲ್ಲೂಕಿನ ಇವಣಿ ಗ್ರಾಮದ ಮೀನಪ್ಪ ರೇವಣಸಿದ್ದಪ್ಪ ಬೆನ್ನೂರ (38) ಬಂಧಿತ ಆರೋಪಿ. ಸಿದ್ದಮ್ಮ ಮಲ್ಲೇಶಪ್ಪ ರಟಕಲ್ ಅವರ ಮನೆಯ ಕಬ್ಬಿಣ ಪೆಟ್ಟಿಗೆಯಲ್ಲಿಟ್ಟಿದ್ದ ₹11 ಲಕ್ಷ ಕಳತನ ಮಾಡಿದ್ದ ಆರೋಪಿಯು, ಆಕೆಯ ತಮ್ಮನ ಮಗನಾಗಿದ್ದ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ₹1.70 ಲಕ್ಷ ಪಡೆದ ಮೀನಪ್ಪನ ತಮ್ಮ ಅನಿಲ್‌ನನ್ನು ಬಂಧಿಸಬೇಕಿದೆʼ ಎಂದು ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ʼಪೊಲೀಸರು ಮೀನಪ್ಪನನ್ನು ಟೆಂಗಳಿ ಕ್ರಾಸ್‌ನಲ್ಲಿ ಹಿಡಿದು ವಿಚಾರಣೆಗೆ ಒಳಪಡಿಸಿದಾಗ, ಹಣದ ಆಸೆಗಾಗಿ ತಾನೇ ಕದ್ದಿದ್ದಾಗಿ ಒಪ್ಪಿಕೊಂಡಿದ್ದಾನೆ. ₹1.70 ಲಕ್ಷ ತನ್ನ ತಮ್ಮನಿಗೆ ನೀಡಿದ್ದಾಗಿ ಹೇಳಿದ್ದು, ಆತನನ್ನು ಸಹ ವಶಕ್ಕೆ ಪಡೆಯಬೇಕಿದೆ’ ಎಂದು ಮಾಹಿತಿ ನೀಡಿದರು.

ಮಾರ್ಚ್‌ 28ರಂದು ಸಿದ್ದಮ್ಮ (ಅತ್ತೆ) ಅವರೊಂದಿಗೆ ಹೊಲಕ್ಕೆ ಹೋದ ಮೀನಪ್ಪ, ಮಧ್ಯಾಹ್ನ ಹೊಲದಲ್ಲಿನ ಪೈಪ್‌ ಒಡೆದಿದೆ ಕಾಳಗಿ ಪಟ್ಟಣಕ್ಕೆ ತೆರಳಿ ತರುತ್ತೇನೆ ಎಂದು ಹೇಳಿ ಮನೆಗೆ ಬಂದಿದ್ದ. ಮಧ್ಯಾಹ್ನ 2ಗಂಟೆ ಸುಮಾರಿಗೆ ಮನೆಯ ಟ್ರಂಕ್‌ನಲ್ಲಿ ಇರಿಸಿದ್ದ ₹11 ಲಕ್ಷ ಕಳವು ಮಾಡಿದ್ದನು. ಬಳಿಕ ಆ ಹಣವನ್ನು ಇವಣಿ ಗ್ರಾಮದ ತನ್ನ ಮನೆಯಲ್ಲಿ ಇರಿಸಿದ್ದಾನೆʼ ಎಂದು ಹೇಳಿದರು.

ಡಿವೈಎಸ್‌ಪಿ ಶಂಕರಗೌಡ ಪಾಟೀಲ ಅವರ ಮಾರ್ಗದರ್ಶನದಲ್ಲಿ ಸಿಪಿಐ ಜಗದೇವಪ್ಪ ಪಾಳಾ ನೇತೃತ್ವದಲ್ಲಿ ಪಿಎಸ್‌ಐ ತಿಮ್ಮಯ್ಯ, ಸಿಬ್ಬಂದಿ ಗುಂಡಪ್ಪ, ಉಪ್ಪಳೇಪ್ಪ, ನಸೀರ್, ಹುಸೇನ್, ಆನಂದ, ಬಾಬುರಾವ್, ಸುರೇಶ, ಅರ್ಜುನರಾವ್, ಅಂಬರೀಷ್, ಸಂಗಮೇಶ, ಶಿವರಾಜ, ಬಸಪ್ಪ, ಮಂಜು ಅವರಿದ್ದ ತಂಡ ಆರೋಪಿಯನ್ನು ಬಂಧಿಸಿದೆ ಎಂದರು. ಅಧಿಕಾರಿ ಮತ್ತು ಸಿಬ್ಬಂದಿಗೆ ಪ್ರಶಂಸೆ ಪತ್ರಗಳನ್ನು ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಹೆಚ್ಚುವರಿ ಎಸ್‌ಪಿ ಮಹೇಶ ಮೇಘಣ್ಣವರ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...