ಕಲಬುರಗಿ | ಮತದಾರರಿಗೆ ಹಣ ಹಂಚುತ್ತಿದ್ದ ‘ಬಿಜೆಪಿ’ಗರ ಬೆನ್ನಟ್ಟಿ ಹಿಡಿದ ಜಿಲ್ಲಾಧಿಕಾರಿ

Date:

ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಸಂಗಮೇಶ್ವರ ಕಾಲೊನಿಯಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಹಣ ಹಂಚಲು‌ ಮುಂದಾಗಿದ್ದ ಇಬ್ಬರು ವ್ಯಕ್ತಿಗಳನ್ನು ‌ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಯಶವಂತ ‌ವಿ. ಗುರುಕರ್ ಬೆನ್ನಟ್ಟಿ ಹಿಡಿದಿದ್ದಾರೆ.

ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಬೆಂಬಲಿಗರು ಎನ್ನಲಾದ ಇಬ್ಬರು ಸೋಮವಾರ-ಮಂಗಳವಾರ ನಡುವಿನ ರಾತ್ರಿ 1 ಗಂಟೆಯ ಸಮಯದಲ್ಲಿ ಬೀದಿ ದೀಪ ಬಂದ್ ಮಾಡಿ ಹಣ ಹಂಚುತ್ತಿದ್ದಾರೆ ಎಂದು ಕಾಂಗ್ರೆಸ್ ‌ಕಾರ್ಯಕರ್ತರು ಜಿಲ್ಲಾಧಿಕಾರಿ ಅವರಿಗೆ ದೂರು ನೀಡಿದ್ದರು. ಪೊಲೀಸರ‌ ಗಮನಕ್ಕೂ ತರದೇ ಜಿಲ್ಲಾಧಿಕಾರಿ ಸ್ಥಳಕ್ಕೆ ಧಾವಿಸಿ, ಇಬ್ಬರನ್ನೂ ಹಿಡಿದಿದ್ದಾರೆ.

ಜಿಲ್ಲಾಧಿಕಾರಿಯನ್ನು ಕಂಡ ಇಬ್ಬರೂ ಕಕ್ಕಾಬಿಕ್ಕಿಯಾಗಿ ಕಾರಿನಲ್ಲಿ ಪರಾರಿಯಾಗಿದ್ದಾರೆ. ಅವರ ಬೆನ್ನಟ್ಟಿದ ಜಿಲ್ಲಾಧಿಕಾರಿ ‌ಕೇಂದ್ರ ಬಸ್ ನಿಲ್ದಾಣದ ಹತ್ತಿರ ವಿದ್ಯಾನಗರದ ಬಳಿ ಕಾರನ್ನು ತಡೆದು, ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್‌ಗೆ ಅಧಿಕಾರ ನೀಡಿ, ನೆಮ್ಮದಿ ಜೀವನ ಕಳೆಯಿರಿ: ಪ್ರಿಯಾಂಕಾ ಗಾಂಧಿ

ಕಾರನ್ನು ನಿಲ್ಲಿಸು ಎಂದರೂ ಕೇಳದೇ ವೇಗವಾಗಿ ಚಲಾಯಿಸಿದ ಕಾರು ಚಾಲಕನನ್ನು ಜಿಲ್ಲಾಧಿಕಾರಿ ‌ಗುರುಕರ್ ತರಾಟೆಗೆ ತೆಗೆದುಕೊಂಡಿದ್ದಾರೆ.

ಘಟನೆ ಕುರಿತು ಪೊಲೀಸ್ ಕಮಿಷನರ್ ಚೇತನ್ ಆರ್. ಪ್ರತಿಕ್ರಿಯಿಸಿದ್ದು, “ರಾತ್ರಿ ಕೆಲವರು ಹಣ ಹಂಚುತ್ತಿರುವ ಬಗ್ಗೆ ಮಾಹಿತಿ ಬಂದ ಬಳಿಕ ಸ್ಥಳಕ್ಕೆ ಜಿಲ್ಲಾಧಿಕಾರಿ ತೆರಳಿದ್ದಾರೆ. ಈ ಕುರಿತು ಕಾಂಗ್ರೆಸ್ ಮುಖಂಡರು ದೂರು ನೀಡಿದ್ದು, ನ್ಯಾಯಾಲಯದ ಅನುಮತಿ ಪಡೆದು ಎಫ್ಐಆರ್ ದಾಖಲಿಸಲಾಗುತ್ತಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಮಹಿಳೆಯರ ಸ್ವಾವಲಂಬನೆಗಾಗಿ ಕಸೂತಿ ಕಾರ್ಯಗಾರ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ವೈಷ್ಣವಿ ಸಭಾಂಗಣ್ಣ ದಿ.18 ಮಾರ್ಚ್ 2024ರಂದು...

ಗದಗ | ಸರ್ಕಾರಿ ಜಾಗ ಒತ್ತುವರಿ ಪ್ರಶ್ನಿಸಿದ್ದಕ್ಕೆ ಜಾತಿ ನಿಂದನೆ

ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಬಸವರಾಜ ಮುಳ್ಳಾಳ ಮತ್ತು ನಾಗಮ್ಮ ಹಾಲಿನವರ...

ತುಮಕೂರಿನಲ್ಲಿ ಕೊಲೆಗೀಡಾಗಿದ್ದ ಬೆಳ್ತಂಗಡಿಯ ಮೂವರ ಅಂತ್ಯಕ್ರಿಯೆ

ತುಮಕೂರಿನಲ್ಲಿ ಇತ್ತೀಚೆಗೆ ಬೆಳ್ತಂಗಡಿಯ ಮೂವರನ್ನು ಕೊಲೆಗೈದು ಕಾರು ಸಹಿತ ಬೆಂಕಿ ಹಚ್ಚಿ...

ಬೆಂಗಳೂರು | ಗಾಳಿಯ ಗುಣಮಟ್ಟದಲ್ಲಿ ಸುಧಾರಣೆ; ಆದರೆ, ತಜ್ಞರ ಯೋಚನೆಯೇನು?

ಕಳೆದ ಕೆಲವು ವರ್ಷಗಳಿಗೆ ಹೋಲಿಕೆ ಮಾಡಿದರೇ, 2023ರಲ್ಲಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ...