ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

Date:

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ ಕೊಡುಗೆ ನೀಡಿರುವ ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಕೆಕೆಸಿಸಿಐ)ಯ ವಜ್ರ ಮಹೋತ್ಸವಕ್ಕೆ ಭಾರತೀಯ ಅಂಚೆ ಇಲಾಖೆ ವಿಶೇಷ ಗೌರವ ಸಲ್ಲಿಸಿದೆ.

- Advertisement -

ಸಂಸ್ಥೆಯ 60ನೇ ವರ್ಷದ ಸಂಭ್ರಮದ ಅಂಗವಾಗಿ ಕಲಬುರಗಿ ಅಂಚೆ ವಿಭಾಗ ರೂಪಿಸಿರುವ ವಿಶೇಷ ಅಂಚೆ ಲಕೋಟೆಯನ್ನು ಶನಿವಾರ ಕಲಬುರಗಿ ಪ್ರಧಾನ ಅಂಚೆ ಕಚೇರಿಯಲ್ಲಿ ಬಿಡುಗಡೆ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ವಿಶೇಷ ಅಂಚೆ ಲಕೋಟೆ ಬಿಡುಗಡೆಗೊಳಿಸಿದ ಕೆಕೆಸಿಸಿಐ ಅಧ್ಯಕ್ಷ ಶರಣಬಸಪ್ಪ ಎಂ. ಪಪ್ಪಾ ಮಾತನಾಡಿ, ಸಂಸ್ಥೆಯ ಆರು ದಶಕಗಳ ಸೇವೆ ಮತ್ತು ಸಾಧನೆಯನ್ನು ಸ್ಮರಿಸುವ ಸಂದರ್ಭದಲ್ಲಿ ಅಂಚೆ ಇಲಾಖೆಯಿಂದ ವಿಶೇಷ ಲಕೋಟೆ ಹೊರತಂದಿರುವುದು ಹೆಮ್ಮೆಯ ಸಂಗತಿ. ಸಂಸ್ಥೆಯ ವಜ್ರ ಮಹೋತ್ಸವದ ನೆನಪನ್ನು ಶಾಶ್ವತವಾಗಿಸುವ ದಾಖಲೆಯಾಗಿ ಇದು ಉಳಿಯಲಿದೆ ಎಂದರು.

ವಾಣಿಜ್ಯ, ಕೈಗಾರಿಕೆ ಹಾಗೂ ಉದ್ಯಮ ಕ್ಷೇತ್ರಕ್ಕೆ ಸಂಬಂಧಿಸಿದ ಸಂಸ್ಥೆಯ ಚಟುವಟಿಕೆಗಳು ಕಲ್ಯಾಣ ಕರ್ನಾಟಕದ ಆರ್ಥಿಕ ಬೆಳವಣಿಗೆಯೊಂದಿಗೆ ನಿಕಟವಾಗಿ ಬೆಸೆದುಕೊಂಡಿವೆ. ಇಂತಹ ಸಂಸ್ಥೆಯ ಮಹತ್ವದ ಮೈಲಿಗಲ್ಲನ್ನು ಅಂಚೆ ಇಲಾಖೆಯ ವಿಶೇಷ ಲಕೋಟೆಯ ಮೂಲಕ ದಾಖಲಿಸಿರುವುದು ಈ ಸಂದರ್ಭದ ಮಹತ್ವವನ್ನು ಹೆಚ್ಚಿಸಿದೆ ಎಂದು ಅವರು ಹೇಳಿದರು.

Advertisements
Advertisements

ಕಾರ್ಯಕ್ರಮದಲ್ಲಿ ಕೆಕೆಸಿಐ ಕಾರ್ಯದರ್ಶಿ ಶಿವರಾಜ ಇಂಗಿನಶೆಟ್ಟಿ, ಉಪಾಧ್ಯಕ್ಷ ಕೇದಾರ ರಾಘೋಜಿ, ಪ್ರಭಾರ ಅಂಚೆ ಅಧೀಕ್ಷಕ ವಿ.ಎಲ್. ಚಿಚಕೋಟೆ, ಕಲಬುರಗಿ ಅಂಚೆ ವಿಭಾಗದ ಅಂಚೆ ಅಧೀಕ್ಷಕ ರವೀಂದ್ರ ಬಿ.ಎಲ್. ಹಾಗೂ ಪ್ರಧಾನ ಅಂಚೆ ಕಚೇರಿಯ ಪೋಸ್ಟ್‌ಮಾಸ್ಟರ್ ಇಂದುಮತಿ ಉಪಸ್ಥಿತರಿದ್ದರು.

ಇದನ್ನು ಓದಿದ್ದೀರಾ? ಯಾದಗಿರಿ | ಪ್ರವಾಸೋದ್ಯಮಕ್ಕೆ ಹೊಸ ಒತ್ತು: 21 ತಾಣಗಳ ಅಭಿವೃದ್ಧಿಗೆ ಆದ್ಯತೆ

ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು. ಚಂದ್ರಕಾಂತ ಸಾಲೋಟಗಿ ಸ್ವಾಗತಿಸಿದರು. ಚಂಚಲಾ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | AI, ಡಿಜಿಟಲ್ ತಂತ್ರಜ್ಞಾನ ಬಳಸಿ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು

ಕೃತಕ ಬುದ್ಧಿಮತ್ತೆ (AI) ಹಾಗೂ ಡಿಜಿಟಲ್ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಉತ್ತರ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...

ಮಾನವೀಯತೆ-ಸಮಾನತೆಯ ಬದುಕಿಗೆ ಸೀರತ್ ಸಂದೇಶ: ಸೌಹಾರ್ದದ ಸಮಾಜ ನಿರ್ಮಾಣಕ್ಕೆ ಕರೆ

ಮೈಸೂರು ನಗರದ ಜಗನ್ಮೋಹನ ಅರಮನೆಯಲ್ಲಿ ನಡೆದ ಸಾರ್ವಜನಿಕ ಸೀರತ್ ಸಮಾವೇಶವು ಧರ್ಮ,...

ಕೆನಡಾದಲ್ಲಿ ಬೆಳ್ಳಿ ಪದಕ ಗೆದ್ದ ವಿಜಯಪುರದ ಸಚಿನ್ ತುಕಾರಾಮ್ ಸಾಲೊಂಕೆ

ಕೆನಡಾದ ವಿನ್ನಿಪೆಗ್‌ನಲ್ಲಿ ನಡೆದ ಪ್ರತಿಷ್ಠಿತ 2026 ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ...