ಕಲಬುರಗಿ | ಕೈಗೆ ಕಪ್ಪುಪಟ್ಟಿ‌ ಧರಿಸಿ ರಾಜ್ಯ ಸರ್ಕಾರಿ ನೌಕರರ ಸಂಘ ಪ್ರತಿಭಟನೆ

Date:

Advertisements

ಸರ್ಕಾರಿ ಅಧಿಕಾರಿಗಳಿಬ್ಬರ ಮುಖಕ್ಕೆ ಕಪ್ಪು ಮಸಿ ಬಳಿದು ಕೃತ್ಯ ಎಸಗಿ ಅವಮಾನಿಸಿರುವ ಘಟನೆ ಖಂಡಿಸಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನೇತೃತ್ವದೊಂದಿಗೆ ಶುಕ್ರವಾರ ಕಲಬುರಗಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮುಖಂಡರು ಪ್ರತಿಭಟನಾ ಪ್ರದರ್ಶನ ಮಾಡಿದರು.

ನಗರದ ಎಂಎಸ್‌ಕೆ ಮಿಲ್ ಸಮೀಪ ನಿರ್ಮಿಸಿದ ತರಕಾರಿ ಮಾರ್ಕೆಟ್ ನಾಮಫಲಕದ ವಿಚಾರವಾಗಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಹಾಗೂ ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಅಭಿಯಂತರರ ಕರ್ತವ್ಯಕ್ಕೆ ಅಡ್ಡಿಪಡಿಸಿ ಪೊಲೀಸರ ಸಮ್ಮುಖದಲ್ಲಿಯೇ ಅವರ ಮೇಲೆ ಕೆಲ ಸಂಘಟನೆ ಕಾರ್ಯಕರ್ತರು ಮುಖಕ್ಕೆ ಮಸಿ ಬಳಿದಿರುವುದನ್ನು ಖಂಡಿಸಿ ನೌಕರರ ಸಂಘದವರು ಕೈಗೆ ಕಪ್ಪುಪಟ್ಟಿ ಕಟ್ಟಿಕೊಂಡು ಪ್ರತಿಭಟಿಸಿದರು.

ಲೋಕೋಪಯೋಗಿ ಇಲಾಖೆಯಿಂದ ಸಾಗಿದ ಮೆರವಣಿಗೆ ಹಳೆಯ ಜೇವರ್ಗಿ ರಸ್ತೆ, ಸರ್ದಾರ್ ಪಟೇಲ್ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತಲುಪಿ ಪ್ರತಿಭಟನೆ ನಡೆಸಿತು.

ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಬಸವರಾಜ ಬಳೂಂಡಗಿ ಮಾತನಾಡಿ, “ಅಧಿಕಾರಿಗಳ ಮೇಲೆ ಮಸಿ ಬಳಿದಿರುವುದು ಖಂಡನೀಯ. ಅಧಿಕಾರಿಗಳಿಗೆ ಮುಕ್ತವಾಗಿ ಕೆಲಸ ಮಾಡುವ ಪರಿಸರವೇ ಇಲ್ಲದಂತಾಗಿದೆ. ಇಂತಹ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು, ನೌಕರಸ್ಥರಿಗೆ ರಕ್ಷಣೆಯನ್ನು ಒದಗಿಸಬೇಕಂದು” ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಚುಕ್ಕನಕಲ್ಲು ಗ್ರಾಮದ ದಲಿತ ಕಾಲೋನಿಗೆ ಮೂಲಸೌಕರ್ಯ ಕಲ್ಪಿಸಲು ದಸಂಸ ಆಗ್ರಹ

ಜಿಲ್ಲಾಧಿಕಾರಿ ಕಚೇರಿ ಶಿಷ್ಟಾಚಾರ ತಹಶಿಲ್ದಾರರ ತಹಶೀಲ್ದಾರ್ ಮನವಿ ಸ್ವೀಕರಿಸಲು ಬಂದರು. ಆದರೆ ಜಿಲ್ಲಾಧಿಕಾರಿಗಳ ಮನವಿ ಸ್ವೀಕರಿಸಲು ಬರಬೇಕೆಂದು ಪಟ್ಟು ಹಿಡಿದಿದ್ದು, ಕುಳಿತುಕೊಂಡ ಹಿನ್ನೆಲೆ ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಫೌಜಿಯಾ ತರನ್ನೂಮ್ ಮತ್ತು ನಗರ ಪೊಲೀಸ್ ಕಮಿಷನರ್ ಶರಣಪ್ಪ ಎಸ್ ಡಿ ರವರು ಮನವಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಮಹೇಶ ಹೂಗಾರ, ನೌಕರರ ಸಂಘದ ಮುಖಂಡರು ಸೇರಿದಂತೆ ಅನೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

Download Eedina App Android / iOS

X