ಕಲಬುರಗಿ | ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ಮಾದರಿ ವೇತನ ನೀಡಬೇಕು: ಷಡಾಕ್ಷರಿ

Date:

ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ಸರ್ಕಾರಿ ನೌಕರರ ಮಾದರಿಯಲ್ಲಿ ವೇತನ ನೀಡಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಸರ್ಕಾರವನ್ನು ಒತ್ತಾಯಿಸಿದರು.

- Advertisement -

ನಗರದ ಎಂಆರ್‌ಎಂಸಿ ಸ್ಯಾಕ್ ಸಭಾಂಗಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಕಲಬುರಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳ ಸರ್ಕಾರಿ ನೌಕರರ ಮಕ್ಕಳಿಗೆ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ದೇಶದ 22 ರಾಜ್ಯಗಳಲ್ಲಿ ಕೇಂದ್ರ ಮಾದರಿಯ ವೇತನ ಜಾರಿಯಲ್ಲಿದೆ. ಹಿಂದುಳಿದ ಬಿಹಾರದಲ್ಲಿಯೂ ಈ ವ್ಯವಸ್ಥೆ ಜಾರಿಯಲ್ಲಿದೆ. ಎಲ್ಲ ಕ್ಷೇತ್ರಗಳಲ್ಲಿಯೂ ಮುಂದುವರಿದಿರುವ ಕರ್ನಾಟಕದಲ್ಲಿ ಇನ್ನೂ ಕೇಂದ್ರ ಮಾದರಿ ವೇತನ ಜಾರಿಯಾಗಿಲ್ಲ. ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದರು.

“ರಾಜ್ಯದಲ್ಲಿ 2.93 ಲಕ್ಷ ಎನ್‌ಪಿಎಸ್ ನೌಕರರಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೊಳಿಸುವ ಭರವಸೆ ನೀಡಿದ್ದಾರೆ. ಅದನ್ನು ಈಡೇರಿಸುವ ವಿಶ್ವಾಸವಿದೆ” ಎಂದು ಹೇಳಿದರು.

“ನೌಕರರು ಸೇವಾ ಸುಧಾರಣೆ ವಿಚಾರದಲ್ಲಿ ರಾಜಿ ಮಾಡಿಕೊಳ್ಳಬಾರದು. ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ಹೊಸತನಕ್ಕೆ ತೆರೆದುಕೊಳ್ಳಬೇಕು. ಕೃತಕ ಬುದ್ಧಿಮತ್ತೆ (ಎಐ) ಬಳಕೆಯಿಂದಾಗಿ ಸಾಕಷ್ಟು ಜನರು ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ಪ್ರತಿವರ್ಷ ದೇಶದಲ್ಲಿ 1.20 ಕೋಟಿ ವಿದ್ಯಾರ್ಥಿಗಳು ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದು ಹೊರಬರುತ್ತಿದ್ದು, ನಿರುದ್ಯೋಗ ಪ್ರಮಾಣ ಹೆಚ್ಚುತ್ತಿದೆ. ಜನಸಂಖ್ಯೆ ನಿಯಂತ್ರಣ ಮಾಡದಿದ್ದರೆ ದೇಶದ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ” ಎಂದರು.

371ಜೆ ಸಮರ್ಪಕ ಅನುಷ್ಠಾನಕ್ಕೆ ಆಗ್ರಹ

“ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ ಮಾತನಾಡಿ, ರಾಜ್ಯದ ಜನಸಂಖ್ಯೆಯಲ್ಲಿ ಶೇ.19ರಷ್ಟು ಪಾಲು ಹೊಂದಿರುವ ಕಲ್ಯಾಣ ಕರ್ನಾಟಕದ ಸರ್ಕಾರಿ ನೌಕರರ ಸಂಖ್ಯೆ ಕೇವಲ ಶೇ.4ರಷ್ಟಿದೆ. ಈ ಅಂತರಕ್ಕೆ 371ಜೆ ಮೀಸಲಾತಿಯ ಅಸಮರ್ಪಕ ಅನುಷ್ಠಾನವೇ ಪ್ರಮುಖ ಕಾರಣ” ಎಂದು ಆರೋಪಿಸಿದರು.

“ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ನೌಕರರಿಗೆ ಬಡ್ತಿಯಲ್ಲಿಯೂ ಅನ್ಯಾಯವಾಗುತ್ತಿದೆ. ಈ ಭಾಗದಲ್ಲಿ 1997ರಲ್ಲಿ ಶಿಕ್ಷಕರಾಗಿ ನೇಮಕಗೊಂಡ ಕೆಲವರಿಗೆ ಇನ್ನೂ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ದೊರೆತಿಲ್ಲ. ಆದರೆ ಬೇರೆ ಭಾಗದಲ್ಲಿ 2000ರಲ್ಲಿ ಶಿಕ್ಷಕರಾದವರು ಈಗಾಗಲೇ ಮುಖ್ಯ ಶಿಕ್ಷಕರಾಗಿದ್ದಾರೆ. ಈ ತಾರತಮ್ಯವನ್ನು ಸರಿಪಡಿಸಬೇಕು” ಎಂದು ಆಗ್ರಹಿಸಿದರು.

“ಸರ್ಕಾರಿ ನೌಕರರ ಜವಾಬ್ದಾರಿ ಹಾಗೂ ಸಮಸ್ಯೆಗಳು ಹೆಚ್ಚಾಗಿವೆ. ಹಾಜರಾತಿ ನಿರ್ವಹಣಾ ವ್ಯವಸ್ಥೆ (ಕಾಮ್ಸ್‌) ಜಾರಿಯಾಗಿರುವ ಹಿನ್ನೆಲೆಯಲ್ಲಿ ಶೇ.60–70ರಷ್ಟು ಮಹಿಳಾ ನೌಕರರು ಬಡ್ತಿ ಬೇಡ ಎಂಬ ಮನೋಭಾವ ಹೊಂದಿದ್ದಾರೆ. ನೌಕರರು ಜವಾಬ್ದಾರಿ ತೆಗೆದುಕೊಳ್ಳಲು ಮುಂದೆ ಬರಬೇಕು” ಎಂದರು.

“ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ರಮೇಶ ಸಂಗಾ ಮಾತನಾಡಿ, ಸರ್ಕಾರಿ ನೌಕರರದ್ದು ನಿರ್ಬಂಧಿತ ಬದುಕಾಗಿದೆ. ಕೇಂದ್ರ ಸ್ಥಾನವನ್ನು ಬಿಡುವಂತಿಲ್ಲ. ಕೆಲವು ವಸ್ತುಗಳನ್ನು ಖರೀದಿಸುವುದಕ್ಕೂ ಅನುಮತಿ ಪಡೆಯಬೇಕಾದ ಪರಿಸ್ಥಿತಿಯಿದೆ. ಆದ್ದರಿಂದ ಮಕ್ಕಳು ಸರ್ಕಾರಿ ನೌಕರಿಯನ್ನು ಕೊನೆಯ ಆಯ್ಕೆಯಾಗಿ ಪರಿಗಣಿಸಬೇಕು” ಎಂದು ಹೇಳಿದರು.

“ಗ್ರೂಪ್‌ ‘ಬಿ’ಗಿಂತ ಕೆಳಗಿನ ಹುದ್ದೆಗಳಲ್ಲಿರುವ ನೌಕರರು ಹೆಚ್ಚಿನ ಶೋಷಣೆಗೆ ಒಳಗಾಗುತ್ತಿದ್ದಾರೆ. ಸರ್ಕಾರಿ ನೌಕರಿ ಕನಸು ಕಾಣುವವರು ಗ್ರೂಪ್‌ ‘ಸಿ’ ಹುದ್ದೆಯನ್ನು ಮೊದಲ ಆಯ್ಕೆಯಾಗಿ ಇಟ್ಟುಕೊಳ್ಳಬಾರದು” ಎಂದು ಸಲಹೆ ನೀಡಿದರು.

ಸಂಘದ ಕಲಬುರಗಿ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಚಿತ್ತಾಪುರ ಕಂಬಳೇಶ್ವರ ಸಂಸ್ಥಾನ ಮಠದ ಸೋಮಶೇಖರ ಶಿವಾಚಾರ್ಯರು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಶಾಸಕ ಅಲ್ಲಮಪ್ರಭು ಪಾಟೀಲ ಹಾಗೂ ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ. ಮಾತನಾಡಿದರು.

2025–26ನೇ ಸಾಲಿನಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿದ ಸರ್ಕಾರಿ ನೌಕರರ ಮಕ್ಕಳಿಗೆ ಇದೇ ಸಂದರ್ಭದಲ್ಲಿ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಇದನ್ನು ಓದಿದ್ದೀರಾ? ಕಲಬುರಗಿ | ಖರ್ಗೆ ಜೀವನ, ಹೋರಾಟ ಯುವಜನತೆಗೆ ಪ್ರೇರಣೆ: ಬಿ.ಕೆ. ಹರಿಪ್ರಸಾದ್

ಕಾರ್ಯಕ್ರಮದಲ್ಲಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ಬಸವರಾಜು, ಗೌರವಾಧ್ಯಕ್ಷ ಮಲ್ಲಿಕಾರ್ಜುನ ಬಿ. ಬಳ್ಳಾರಿ, ಹಿರಿಯ ಉಪಾಧ್ಯಕ್ಷ ಸೋಮಶೇಖರಯ್ಯ, ಬೀದರ್ ಜಿಲ್ಲಾಧ್ಯಕ್ಷ ಸೋಮಶೇಖರ ಬಿರಾದಾರ ಚಿದ್ರಿ, ಯಾದಗಿರಿ ಜಿಲ್ಲಾಧ್ಯಕ್ಷ ರಾಯಪ್ಪಗೌಡ ಜಿ. ಹುಡೇದ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನಂದಿನಿ ಸನಬಾಳ್, ಜಿಲ್ಲಾ ಕಾರ್ಯದರ್ಶಿ ಚಂದ್ರಕಾಂತ ಏರಿ, ಜಿಲ್ಲಾ ಖಜಾಂಚಿ ಶ್ರೀಮಂತ ಪಟ್ಟದಾರ ಸೇರಿದಂತೆ ಕಲಬುರಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳ ಸಂಘದ ಪದಾಧಿಕಾರಿಗಳು, ನಿರ್ದೇಶಕರು, ತಾಲೂಕು ಘಟಕಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳು, ಪಾಲಕರು ಹಾಗೂ ಪ್ರಶಸ್ತಿ ಪುರಸ್ಕೃತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...