ಕಲಬುರಗಿ | ‘ರಾತ್ರಿ ಎಚ್ಚರವಿರಿ, ದೇಶವನ್ನು ಎಚ್ಚರಿಸಿ’ ಸಾಂಸ್ಕೃತಿಕ ಪ್ರತಿರೋಧ; ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ

Date:

ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದಾಳಿಯನ್ನು ಖಂಡಿಸಿ ಹಾಗೂ ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳಿಗೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಪ್ರಜಾಸತ್ತಾತ್ಮಕ ಚಿಂತನ ವೇದಿಕೆ, ಕಲಬುರಗಿ ವತಿಯಿಂದ ನಗರದ ಜಗತ್ ವೃತ್ತದಲ್ಲಿ ಶುಕ್ರವಾರ ರಾತ್ರಿ ‘ರಾತ್ರಿ ಎಚ್ಚರವಿರಿ, ದೇಶವನ್ನು ಎಚ್ಚರಿಸಿ’ ಎಂಬ ಘೋಷಣೆಯಡಿ ಸಾಂಸ್ಕೃತಿಕ ಪ್ರತಿರೋಧ ಧರಣಿ ನಡೆಸಲಾಯಿತು.

- Advertisement -

ಧರಣಿಯಲ್ಲಿ ಕ್ರಾಂತಿಗೀತೆ, ಬೀದಿ ನಾಟಕ ಹಾಗೂ ಸಂಗೀತ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿ-ಯುವಜನರ ಹೋರಾಟಕ್ಕೆ ಬೆಂಬಲ ಸೂಚಿಸಲಾಯಿತು. ಪ್ರತಿಭಟನಾಕಾರರು ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮವನ್ನು ಖಂಡಿಸಿ, ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹಾಗೂ ನ್ಯಾಯಸಮ್ಮತ ಪರೀಕ್ಷಾ ವ್ಯವಸ್ಥೆ ಜಾರಿಯಾಗಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...
2483403

ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟ ನಡೆಸುವವರನ್ನು ರಕ್ಷಿಸಬಾರದು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ದೆಹಲಿ ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ವಿರುದ್ಧ ಬೀದಿಗಿಳಿದ ಪ್ರಜಾಸತ್ತಾತ್ಮಕ ಚಿಂತನ ವೇದಿಕೆ

ಧರಣಿಯಲ್ಲಿ ಪ್ರಜಾಸತ್ತಾತ್ಮಕ ಚಿಂತನ ವೇದಿಕೆಯ ಪದಾಧಿಕಾರಿಗಳು, ವಿದ್ಯಾರ್ಥಿಗಳು, ಯುವಜನರು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಶೇ.86.97ರಷ್ಟು ದಾಖಲೆ ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯು ಶುಕ್ರವಾರ ಶಾಂತಿಯುತವಾಗಿ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...