ಕಲಬುರಗಿ | ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ

Date:

ಶಿವಾಜಿ ಜಯಂತಿಯ ಅಂಗವಾಗಿ ಮೆರವಣಿಗೆ ನಡೆಸುವಾಗ ಡಿಜೆ ಸೌಂಡ್‌ ವಿಚಾರವಾಗಿ ಎರಡು ಗುಂಪುಗಳ ಮಧ್ಯೆ ಘರ್ಷಣೆ ನಡೆದಿದ್ದು, ಕಲ್ಲು ತೂರಾಟ ನಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

- Advertisement -

ರಾವೂರ್ ಗ್ರಾಮದ ಗಣೇಶ ಕಟ್ಟೆ ಬಳಿ ಡಿಜೆಯಲ್ಲಿ ‘ಬನಾಯೇಂಗೆ ಮಂದಿರ್’ ಹಾಡು ಹಾಕಿಕೊಂಡು ಹಿಂದುತ್ವವಾದಿ ಕೋಮು ಕಾರ್ಯಕರ್ತರು ಡ್ಯಾನ್ಸ್ ಮಾಡುತ್ತಿದ್ದರು. ಈ ವೇಳೆ, ಕೆಲವು ಮುಸ್ಲಿಂ ಮುಖಂಡರು ಡಿಜೆ ಶಬ್ದವನ್ನು ಕಡಿಮೆ ಮಾಡುವಂತೆ ಕೇಳಿದ್ದಾರೆ. ಈ ಕ್ಷುಲ್ಲಕ ಕಾರಣಕ್ಕೆ ಹಿಂದುತ್ವವಾದಿಗಳು ಗಲಾಟೆ ಆರಂಭಿಸಿದ್ದಾರೆ. ಬಳಿಕ, ಗಲಾಟೆಯು ವಿಕೋಪಕ್ಕೆ ತಿರುಗಿದ್ದು ಎರಡೂ ಸಮಯದಾಯಗಳ ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ನಾಲ್ಕೈದು ಮಂದಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗ್ಯಾನೇಶ್ ಕುಮಾರ್ ವಿರುದ್ಧದ 20 ವರ್ಷಗಳ ಪ್ರಕರಣಕ್ಕೆ ಮರುಜೀವ;...

ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಕೇರಳ ಸರ್ಕಾರ ಈಗ ಮರುಜೀವ ನೀಡಿದೆ. ಪ್ರಕರಣವನ್ನು ವಿಜಿಲೆನ್ಸ್ ತನಿಖೆಗೆ ಆದೇಶ ಹೊರಡಿಸಿದೆ....

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ಘಟನೆ ಸಂಬಂಧ ಎರಡೂ ಗುಂಪುಗಳು ಪೊಲೀಸ್‌ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಿಸಿದ್ದಾರೆ. ವಾಡಿ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಸೆಕ್ಷನ್ 126 ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸುಮಾರು 8 ಮಂದಿಯನ್ನು ಆರೋಪಿಗಳನ್ನಾಗಿ ಪೊಲೀಸರು ಹೆಸರಿದ್ದಾರೆ.

ಪ್ರಕರಣದ ಬಗ್ಗೆ ಮಾಹಿತಿ ನೀಡಿರುವ ಕಲಬುರಗಿ ಎಸ್‌​​ಪಿ ಅಡ್ಡೂರು ಶ್ರೀನಿವಾಸಲು, “ಶಿವಾಜಿ ಜಯಂತ್ಯೋತ್ಸವ ಮೆರವಣಿಗೆ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯಗಳಾಗಿವೆ.ಪೊಲೀಸರು ಪ್ರಕರಣ ದಾಖಲಿಸಿದ್ದಾರೆ” ಎಂದು ತಿಳಿಸಿದ್ದಾರೆ.

ಗ್ರಾಮದಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ‘ಬೆಂಕಿ ಹಚ್ಚುತ್ತೇನೆ’ ಹೇಳಿಕೆ ಶಾಸಕರ ಘನತೆಗೆ ತಕ್ಕುದಲ್ಲ: ಮಂಜುನಾಥ ಮೇತ್ರಿ

ಅಕ್ರಮ ಮರಳು ಸಾಗಾಟ ಹಾಗೂ ಓವರ್‌ಲೋಡ್ ಟಿಪ್ಪರ್‌ಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸುವುದು...

ಯಾದಗಿರಿ | ಯುವಜನರಲ್ಲಿ ಸಂವಿಧಾನ ಪ್ರಜ್ಞೆ ಬೆಳೆಸಲು ಅ.17ರಿಂದ ತರಬೇತಿ ಶಿಬಿರ

ಯುವಜನರಲ್ಲಿ ಸಂವಿಧಾನಾತ್ಮಕ ಅರಿವು, ಸಾಮಾಜಿಕ ಪ್ರಜ್ಞೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ...

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...