ಕಲಬುರಗಿ | ವಿದ್ಯಾರ್ಥಿಯಿಂದ ಪ್ರಯಾಣಿಕರಿಗೆ ಟಿಕೆಟ್ ವಿತರಣೆ: ಕಂಡಕ್ಟರ್ ಅಮಾನತು

Date:

ಕಾಳಗಿ ತಾಲೂಕಿನ ಕಲಬುರಗಿ, ಕಾಳಗಿ ಮಾರ್ಗದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ವಿದ್ಯಾರ್ಥಿಯೊಬ್ಬನಿಂದ ಪ್ರಯಾಣಿಕರಿಗೆ ಟಿಕೆಟ್ ವಿತರಣೆ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಡಕ್ಟರ್ ಸಿದ್ದಪ್ಪ ಅವರನ್ನು ಅಮಾನತುಗೊಳಿಸಲಾಗಿದೆ.

- Advertisement -

ಆ.18ರಂದು ಬಸ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಕಂಡಕ್ಟರ್ ಸಿದ್ದಪ್ಪ ಅವರು ವಿದ್ಯಾರ್ಥಿಯೊಬ್ಬನಿಗೆ ETM ಯಂತ್ರ ನೀಡಿ ಪ್ರಯಾಣಿಕರಿಗೆ ಟಿಕೆಟ್ ವಿತರಣೆ ಮಾಡಿಸಿದ್ದರು ಎನ್ನಲಾಗಿದೆ. ವಿದ್ಯಾರ್ಥಿ ಟಿಕೆಟ್ ನೀಡುತ್ತಿದ್ದ ದೃಶ್ಯವನ್ನು ಕೆಲವರು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆ ಘಟನೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಕರ್ತವ್ಯ ಲೋಪದ ಆರೋಪದಡಿ ಕಲಬುರಗಿ ವಿಭಾಗ–1ರ ವಿಭಾಗೀಯ ನಿಯಂತ್ರಣಾಧಿಕಾರಿ (ಡಿಸಿ) ಅವರು ಸಿದ್ದಪ್ಪ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಇದನ್ನು ಓದಿದ್ದೀರಾ? ಯಾದಗಿರಿ | ಲೈಂಗಿಕ ಕಿರುಕುಳ ಆರೋಪ: ಭಾಗ್ಯವಂತಿ ಮಠದ ಪೂಜಾರಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಕರ್ತವ್ಯದ ವೇಳೆ ಇಲಾಖೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಿಬ್ಬಂದಿಗೆ ಸೂಚಿಸಲಾಗಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಇಲಾಖೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...