ಅತ್ತೆ ಸಾಯಬೇಕೆಂಬ ಹರಕೆಹೊತ್ತ ಚಿತ್ರ ಇತ್ತೀಚೆಗೆ ವೈರಲ್ ಆಗಿತ್ತು. ಈಗ ಪಿಯುಸಿ ವಿದ್ಯಾರ್ಥಿಯೊಬ್ಬರು ಪರೀಕ್ಷೆಯಲ್ಲಿ ಪಾಸ್ ಮಾಡುವಂತೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ನಾಗಾವಿ ಯಲ್ಲಮ್ಮ ದೇವಿಗೆ ಹರಕೆ ಹೊತ್ತು ಹುಂಡಿಗೆ ಹಣ ಹಾಕಿದ ಘಟನೆ ಬೆಳಕಿಗೆ ಬಂದಿದೆ.
ಇತ್ತಿಚೆಗೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸುಕ್ಷೇತ್ರ ಗಾಣಗಾಪುರ ದತ್ತಾತ್ರೇಯ ದೇವಸ್ಥಾನದಲ್ಲಿ ʼಅತ್ತೆ ಸಾಯಲಿʼ ಎಂದು ಹರಕೆ ಹೊತ್ತು ಸೊಸೆಯೊಬ್ಬರು ನೋಟಿನ ಮೇಲೆ ಬರೆದು ಹುಂಡಿಗೆ ಹಣ ಹಾಕಿರುವ ಘಟನೆ ಭಾರೀ ವೈರಲ್ ಆಗಿತ್ತು.
ಈ ಸುದ್ದಿ ಓದಿದ್ದೀರಾ? ತುಮಕೂರು | ಶಿಕ್ಷಣದಿಂದ ಮಾತ್ರ ಸರ್ವತೋಮುಖ ಅಭಿವೃದ್ಧಿ ಸಾಧ್ಯ: ಬಿ ನಂಜುಂಡಪ್ಪ
ಈಗ ಚಿತ್ತಾಪುರ ತಾಲೂಕಿನ ರಾಷ್ಟ್ರಕೂಟರ ಕುಲದೇವತೆ ನಾಗಾವಿ ಯಲ್ಲಮ್ಮ ದೇವಸ್ಥಾನದಲ್ಲಿ ಪಿಯುಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಯೊಬ್ಬರು ಪರೀಕ್ಷೆಯಲ್ಲಿ ಪಾಸು ಮಾಡುವಂತೆ ಇಪ್ಪತ್ತು ರೂಪಾಯಿಯ ನೋಟಿನ ಮೇಲೆ ಬರೆದು ಹುಂಡಿಗೆ ಹಾಕಿದ್ದು, ಇಂದು ದೇವಸ್ಥಾನದಲ್ಲಿರುವ ಹುಂಡಿಯ ಹಣ ಎಣಿಕೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಸಿಬ್ಬಂದಿಯ ಕೈಗೆ ದೊರಕಿದೆ.
ಮಾಹಿತಿ :ಅನಂತ