ಕಲಬುರಗಿ | ಬಿ.ಎಡ್. ಫಲಿತಾಂಶ ಪ್ರಕಟಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ

Date:

2024–25ನೇ ಸಾಲಿನ ಬಿ.ಎಡ್. ಎರಡನೇ ಹಾಗೂ ನಾಲ್ಕನೇ ಸೆಮಿಸ್ಟರ್ ಫಲಿತಾಂಶ ಪ್ರಕಟಿಸಿ ಮೂಲ ಅಂಕಪಟ್ಟಿ ನೀಡಬೇಕೆಂದು ಆಗ್ರಹಿಸಿ ಗುಲಬರ್ಗಾ ವಿಶ್ವವಿದ್ಯಾಲಯ ಬಿ.ಎಡ್. ವಿದ್ಯಾರ್ಥಿಗಳ ಹೋರಾಟ ಸಮಿತಿ ಗುರುವಾರ ನಗರದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.

- Advertisement -

ಕಲಬುರಗಿಯ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಸಾಗಿದ್ದು, ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮನವಿ ಸಲ್ಲಿಸಿ ಹೋರಾಟ ಸಮಿತಿ ಸಂಚಾಲಕ ತೇಜಸ್ ಆರ್. ಇಬ್ರಾಹಿಂಪುರ ಮಾತನಾಡಿ, “ಗುಲಬರ್ಗಾ ವಿಶ್ವವಿದ್ಯಾಲಯದ ಅಡಿಯಲ್ಲಿ ಅನೇಕ ಬಿ.ಎಡ್. ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಸಾವಿರಾರು ಪ್ರಶಿಕ್ಷಣಾರ್ಥಿಗಳು ಕಳೆದ ಹಲವು ತಿಂಗಳಿಂದ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಯಾವುದೇ ವೃತ್ತಿಪರ ಪದವಿ ಪರೀಕ್ಷೆಯ ಫಲಿತಾಂಶವನ್ನು 45 ದಿನಗಳಲ್ಲಿ ಪ್ರಕಟಿಸಬೇಕೆಂಬ ನಿಯಮವಿದ್ದರೂ ವಿಶ್ವವಿದ್ಯಾಲಯವು ನಿಯಮ ಉಲ್ಲಂಘಿಸಿದೆ,” ಎಂದು ಆರೋಪಿಸಿದರು.

501878

ಅವರು ಮುಂದುವರಿದು, ‘ಜೂನ್ 13ರಂದು ವಿಶ್ವವಿದ್ಯಾಲಯದ ಮುಂದೆ ಪ್ರತಿಭಟನೆ ನಡೆಸಿದಾಗ ಕುಲಪತಿ ಮತ್ತು ಕುಲಸಚಿವರು ಒಂದು ತಿಂಗಳೊಳಗೆ ಫಲಿತಾಂಶ ಪ್ರಕಟಿಸುವ ಭರವಸೆ ನೀಡಿದ್ದರು. ಆದರೆ ಐದು ತಿಂಗಳು ಕಳೆದರೂ ಪ್ರಕಟವಾಗಿಲ್ಲ. ಈ ವಿಳಂಬದಿಂದ ವಿದ್ಯಾರ್ಥಿಗಳು ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ, ಒಂದು ವೇಳೆ ಫಲಿತಾಂಶ ಬಾರದಿದ್ದರೆ ಬಿ.ಎಡ್ ವಿದ್ಯಾರ್ಥಿಗಳು ಶಿಕ್ಷಕರಾಗುವ ಕನಸು ಹುಸಿಯಾಗುತ್ತದೆ,’ ಎಂದು ಅವರು ವಿಷಾದ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಮದುವೆಯಾಗುವುದಾಗಿ ನಂಬಿಸಿ ಬಾಲಕಿ ಮೇಲೆ ಅತ್ಯಾಚಾರ : ಪ್ರಕರಣ ದಾಖಲು

ಜಗನಾಥ್ ಎಸ್‌.ಎಚ್. ಮಾತನಾಡಿ, “ಬಿ.ಎಡ್. 2ನೇ ಹಾಗೂ 4ನೇ ಸೆಮಿಸ್ಟರ್ ಫಲಿತಾಂಶ ತಕ್ಷಣ ಪ್ರಕಟಿಸಬೇಕು, ಎಲ್ಲ ಸೆಮಿಸ್ಟರ್‌ಗಳ ಮೂಲ ಅಂಕಪಟ್ಟಿ ಹಾಗೂ ಘಟಿಕೋತ್ಸವ ಪ್ರಮಾಣಪತ್ರ ನೀಡಬೇಕು, ಪರೀಕ್ಷಾ ಅರ್ಹತಾ ಶುಲ್ಕ ಕಡಿಮೆ ಮಾಡಬೇಕು,” ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂತೋಷಕುಮಾರ ಎಸ್‌.ಪಿ., ರಮೇಶ ದೇವಕರ್, ಪ್ರಭಾಕರ ಚಿಂಚೋಳಿ, ಅಣವೀರ ಗೌಡ ಬಿರಾದಾರ, ಪೂಜಾ, ವಿವೇಕ ಹಿರೇಮಠ, ಸಚೀನ್, ವಿರೇಶ್, ಖಾಶಿಂ, ಗಣೇಶ್ ಜಾದವ್, ರವಿಚಂದ್ರ ಹಾಗೂ ರಕ್ಷಿತಾ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...