ಕಲಬುರಗಿ | ಬೆಳೆ ವಿಮೆ ತಾರತಮ್ಯ ಖಂಡಿಸಿ ಸುಲೇಪೇಟ ರೈತರ ಪ್ರತಿಭಟನೆ; ಬರ ಘೋಷಣೆ, ಸಾಲಮನ್ನಾಕ್ಕೆ ಆಗ್ರಹ

Date:

ಚಿಂಚೋಳಿ ತಾಲೂಕಿನ ಸುಲೇಪೇಟ ಹೋಬಳಿ ವ್ಯಾಪ್ತಿಯ ರೈತರಿಗೆ ಬೆಳೆ ವಿಮೆ ಪರಿಹಾರ ವಿತರಣೆಯಲ್ಲಿ ತಾರತಮ್ಯ ನಡೆದಿದೆ ಎಂದು ಆರೋಪಿಸಿ, ಸುಲೇಪೇಟ ನಾಗರೀಕರ ಹಿತರಕ್ಷಣಾ ಸಮಿತಿಯ ನೇತೃತ್ವದಲ್ಲಿ ರೈತರು ಶುಕ್ರವಾರ ಸುಲೇಪೇಟ ಗ್ರಾಮದ ಬಸವೇಶ್ವರ ವೃತ್ತದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿ ಅವರಿಗೆ ಕೃಷಿ ಜಂಟಿ ನಿರ್ದೇಶಕರ ಮೂಲಕ ಮನವಿ ಸಲ್ಲಿಸಿದರು.

- Advertisement -

ಮನವಿ ಸಲ್ಲಿಸಿ ಮಾತನಾಡಿದ ಮುಖಂಡರು, ‘ಸುಲೇಪೇಟ ಹೋಬಳಿ ವ್ಯಾಪ್ತಿಯ ಸುಮಾರು 40 ಗ್ರಾಮಗಳ ರೈತರು ಸಾವಿರಾರು ರೂಪಾಯಿ ವಿಮಾ ಕಂತು ಪಾವತಿಸಿದ್ದರೂ, ಪರಿಹಾರವಾಗಿ ಕೇವಲ ₹100ರಿಂದ ₹200ರವರೆಗೆ ಮಾತ್ರ ರೈತರ ಖಾತೆಗಳಿಗೆ ಜಮೆಯಾಗಿದ್ದು, ಇದು ರೈತರಿಗೆ ತೀವ್ರ ಅನ್ಯಾಯವಾಗಿದೆ’ ಎಂದು ದೂರಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

‘ಕಳೆದ ವರ್ಷದ ಅತಿವೃಷ್ಟಿಯಿಂದ ಈ ಭಾಗದಲ್ಲಿ ಶೇ.70ರಿಂದ 80ರಷ್ಟು ಬೆಳೆ ಹಾನಿಯಾಗಿದ್ದರೂ, ಅಧಿಕಾರಿಗಳು ವಿಮಾ ಕಂಪನಿಗೆ ಕೇವಲ ಶೇ.14ರಿಂದ 18ರಷ್ಟು ಹಾನಿಯಾಗಿದೆ ಎಂಬ ತಪ್ಪು ವರದಿ ಸಲ್ಲಿಸಿರುವುದರಿಂದ ರೈತರಿಗೆ ಸಮರ್ಪಕ ವಿಮೆ ಪರಿಹಾರ ದೊರೆಯಲಿಲ್ಲ ಎಂದು ಆರೋಪಿಸಲಾಗಿದೆ. ಹೀಗಾಗಿ ಸರ್ಕಾರ ವಿಮಾ ಕಂಪನಿಯೊಂದಿಗೆ ಸಮನ್ವಯ ಸಾಧಿಸಿ ನೈಜ ಹಾನಿಯ ಆಧಾರದ ಮೇಲೆ ಹೆಚ್ಚುವರಿ ವಿಮೆ ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಲಾಗಿದೆ.

‘ರೈತರು ತಮ್ಮ ಬೇಡಿಕೆಗಳಲ್ಲಿ 2025-26ನೇ ಸಾಲಿನ ಬೆಳೆ ವಿಮೆ ಮೊತ್ತವನ್ನು ಸುಲೇಪೇಟ ಹಾಗೂ ಸುತ್ತಮುತ್ತಲಿನ ಸುಮಾರು 40 ಗ್ರಾಮಗಳ ರೈತರ ಖಾತೆಗಳಿಗೆ ಕೂಡಲೇ ಜಮಾ ಮಾಡಬೇಕು, ಬೆಳೆ ಹಾನಿಯ ಪ್ರಮಾಣವನ್ನು ಮರುಪರಿಶೀಲಿಸಿ ಶೇ.70ರಿಂದ 80ರಷ್ಟು ಹಾನಿಗೆ ಅನುಗುಣವಾಗಿ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದ್ದಾರೆ.

ಇದೇ ವೇಳೆ, ಪ್ರಸಕ್ತ ವರ್ಷ ಚಿಂಚೋಳಿ ತಾಲೂಕಿನಲ್ಲಿ ಅತಿ ಕಡಿಮೆ ಮಳೆಯಾಗಿರುವ ಕಾರಣ ಬಿತ್ತಿದ ಬೆಳೆಗಳು ನಾಟಿಯಾಗದೇ ಸಂಪೂರ್ಣ ಹಾನಿಗೊಳಗಾಗಿವೆ. ಆದ್ದರಿಂದ ಚಿಂಚೋಳಿ ತಾಲೂಕನ್ನು ಬರಪೀಡಿತ ತಾಲೂಕು ಎಂದು ಸರ್ಕಾರ ಘೋಷಿಸಬೇಕು. ಕಳೆದ ಎರಡು-ಮೂರು ವರ್ಷಗಳಿಂದ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಸಂಕಷ್ಟದಲ್ಲಿರುವ ರೈತರ ಕೃಷಿ ಸಾಲವನ್ನು ಸರ್ಕಾರ ಮನ್ನಾ ಮಾಡಬೇಕು’ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ʼನಗರದಲ್ಲಿದ್ದರೂ 12 ವರ್ಷಗಳಿಂದ ಮೂಲಸೌಲಭ್ಯವಿಲ್ಲʼ: ಕಲಬುರಗಿ ಬುಡ್ಗ ಜಂಗಮರ ಕಣ್ಣೀರಿನ ಕಥೆ

ಈ ಸಂದರ್ಭದಲ್ಲಿ ಮುರುಗಪ್ಪ ಕುಕುಡಿ, ಕೆಪಿಆರ್‌ಎಸ್ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಶರಣು, ವೀರಭದ್ರಪ್ಪ ತಾರಾಪುರ, ಮಲ್ಲಿಕಾರ್ಜುನ್ ರುದನೂರು, ಚೇತನ್ ಅನ್ವರ್ ಸುಲೇಪೇಟ್, ಮೋಹನ್ ಐನಾಪುರ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ವಿದ್ಯಾರ್ಥಿಗಳು ಪಾಠದ ಜೊತೆಗೆ ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು: ಎಂ.ಎಂ.ಮೈದೂರ

"ವಿದ್ಯಾರ್ಥಿಗಳು ಪಾಠದ ಜೊತೆಗೆ ಕ್ರೀಡೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ದೈಹಿಕ ಹಾಗೂ ಮಾನಸಿಕ...

ಹಾವೇರಿ | ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ ವೇಳಾಪಟ್ಟಿ ಪ್ರಕಟ

"ಭಾರತ ಚುನಾವಣಾ ಆಯೋಗ ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆ ವೇಳಾಪಟ್ಟಿ...

ಹುಬ್ಬಳ್ಳಿ | ಎಸ್‌ಐಆರ್‌ ಪ್ರಕ್ರಿಯೆ ಪ್ರಜಾಪ್ರಭುತ್ವದ ಬುನಾದಿಗೆ ಧಕ್ಕೆ: ನೂರ್ ಶ್ರೀಧರ್ ಆರೋಪ

"ಎಸ್‌ಐಆರ್‌ ಪ್ರಕ್ರಿಯೆ ಪ್ರಜಾಪ್ರಭುತ್ವದ ಬುನಾದಿಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇದೆ ಎಂದು...