ಕಲಬುರಗಿ | ರೈತರ ಆತ್ಮಹತ್ಯೆ ತಡೆಯಲು ತುರ್ತು ಕ್ರಮ ಕೈಗೊಳ್ಳಿ : ಕೆ.ಬಿ.ವಾಸು

Date:

ತೊಗರಿ ಬೆಳೆ ಹಾನಿ ಮತ್ತು ರೈತರ ಆತ್ಮಹತ್ಯೆ ತಡೆಯಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ರಾಜ್ಯ ಉಪಾಧ್ಯಕ್ಷ ಕೆ.ಬಿ.ವಾಸು ಆಗ್ರಹಿಸಿದರು.

- Advertisement -

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ʼಕಲಬುರಗಿ ಜಿಲ್ಲೆಯಲ್ಲಿ ತೊಗರಿ ಬೆಳೆ ಹಾನಿ ಹಾಗೂ ಆರ್ಥಿಕ ಸಂಕಷ್ಟದಿಂದಾಗಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಳವಾಗುತ್ತಿದೆ. ಕಳೆದ ಒಂದು ತಿಂಗಳಲ್ಲಿ ಆರು ಜನ ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ಈ ಸ್ಥಿತಿ ರಾಜ್ಯದ ಕೃಷಿ ಸಮುದಾಯದ ಭವಿಷ್ಯಕ್ಕೆ ಅಪಾಯವನ್ನು ಉಂಟುಮಾಡುತ್ತಿದೆʼ ಎಂದು ಕಳವಳ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ʼಕಲಬುರಗಿ ಜಿಲ್ಲೆ ತೊಗರಿಯ ನಾಡುʼ ಎಂದು ಕರೆಯಲಾಗುತ್ತಿದೆ. ಇಲ್ಲಿನ ರೈತರ ಜೀವನಾಧಾರ ಈ ಬೆಳೆಯೇ ಆಗಿದೆ. ಆದರೆ, ಈ ವರ್ಷ ಹಿಂಗಾರು ಹಂಗಾಮಿನಲ್ಲಿ ಶೇ50ರಷ್ಟು ಬೆಳೆ ಹಾನಿಯಾಗಿದ್ದು, ಮಾರುಕಟ್ಟೆಯಲ್ಲಿ ತೊಗರಿಗೆ ಸೂಕ್ತ ಬೆಲೆ ದೊರೆಯದ ಕಾರಣಕ್ಕೆ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ನಿರ್ಲಕ್ಷ್ಯದಿಂದ ರೈತರು ತಮ್ಮ ಜೀವನವನ್ನು ಕೊನೆಗಾಣಿಸುವಂತಾಗುತ್ತಿದೆʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ʼಈ ಬಗ್ಗೆ ರೈತ ಸಂಘಟನೆಗಳು ಹಲವು ಬಾರಿ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ ಸರ್ಕಾರದ ಸ್ಪಂದನೆ ಸಿಗುತ್ತಿಲ್ಲ. ಬೆಳೆ ಹಾನಿಗೆ ಸೂಕ್ತ ಪರಿಹಾರ, ಬೆಂಬಲ ಬೆಲೆ, ಸಾಲಮನ್ನಾ, ಬೆಳೆ ವಿಮೆ ಪರಿಹಾರ ಹಾಗೂ ತೊಗರಿ ಆಮದು ನಿಲ್ಲಿಸುವಂತೆ ಸರ್ಕಾರ ತಕ್ಷಣದ ಕ್ರಮ ಕೈಗೊಳ್ಳಬೇಕುʼ ಎಂದು ಒತ್ತಾಯಿಸಿದರು.

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಸಿ) ಖಚಿತಪಡಿಸಿ ತೊಗರಿ ಬೆಳೆಗಾರರಿಗೆ ಗರಿಷ್ಠ ಬೆಂಬಲ ಬೆಲೆ ನಿಗದಿಪಡಿಸಬೇಕು. ತೊಗರಿ ಬೆಳೆ ಹಾನಿಯ ಹಿನ್ನೆಲೆಯಲ್ಲಿ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ಬೆಳೆ ಹಾನಿಯಾದ ರೈತರ ವಿಮೆ ಮೊತ್ತವನ್ನು ತಕ್ಷಣ ಬಿಡುಗಡೆ ಮಾಡಬೇಕು. ರೈತರು ತಮ್ಮ ಉತ್ಪನ್ನವನ್ನು ನೇರವಾಗಿ ಮಾರಾಟ ಮಾಡಬಹುದಾದ ವ್ಯವಸ್ಥೆ ಕಲ್ಪಿಸಬೇಕು. ದೇಶೀಯ ಬೆಲೆ ಕುಸಿಯದಂತೆ ತೊಗರಿ ಆಮದು ತಕ್ಷಣ ನಿಲ್ಲಿಸಬೇಕು. ತೊಗರಿ ಬೆಳೆ ಹಾನಿಯನ್ನು ಹೀಗೆಯೇ ಬಿಟ್ಟುಬಿಡದೆ, ಸರ್ಕಾರದಿಂದ ತಕ್ಷಣ ಪರಿಹಾರ ಘೋಷಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...

ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ ...

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...