ಕಲಬುರಗಿ | ನ.15ರಂದು ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನ

Date:

ನಗರದ ಕನ್ನಡ ಭವನದಲ್ಲಿ ನವೆಂಬರ್ 15ರಂದು ಜರುಗಲಿರುವ ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಸಮ್ಮೇಳನದ ಹಿನ್ನೆಲೆಯಲ್ಲಿ ಕನ್ನಡ ಭವನದ ಆವರಣ ಮದುವಣಗಿತ್ತಿಯಂತೆ ಸಿಂಗಾರಗೊಂಡಿದ್ದು, ಕನ್ನಡ ಸಾಹಿತ್ಯಾಸಕ್ತರು, ಸಾಹಿತಿಗಳು ಹಾಗೂ ಕನ್ನಡಾಭಿಮಾನಿಗಳ ಸ್ವಾಗತಕ್ಕೆ ಸಜ್ಜಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದರು.

- Advertisement -

ಸಮ್ಮೇಳನವನ್ನು ಯಶಸ್ವಿಯಾಗಿ ಆಯೋಜಿಸುವ ಉದ್ದೇಶದಿಂದ ಸ್ವಾಗತ ಸಮಿತಿಯನ್ನು ರಚಿಸಲಾಗಿದ್ದು, ಅಧ್ಯಕ್ಷರಾಗಿ ಜೆಸ್ಕಾಂ ಸಹಾಯಕ ಲೆಕ್ಕಾಧಿಕಾರಿ ಮೊಹಮ್ಮದ್ ಖಾಸಿಂ, ಕಾರ್ಯಾಧ್ಯಕ್ಷರಾಗಿ ಉದ್ಯಮಿ ಶರಣಬಸಪ್ಪ ಆರ್. ಪಾಟೀಲ ಹಾಗೂ ಟೆಂಗಳಿಯ ಶ್ರೀ ಭೀಮೇಶ್ವರ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ವೀರೇಂದ್ರ ಬಿ. ವಾಲಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ನೂತನ ಪದಾಧಿಕಾರಿಗಳನ್ನು ಸತ್ಕರಿಸಿ, ಸಮ್ಮೇಳನಕ್ಕೆ ಅಧಿಕೃತವಾಗಿ ಆಹ್ವಾನಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು...

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ನಾವು ನಮ್ಮವರು ಎನ್ನುವ ಭಾವನೆಗಳು ಮರೆಯಾಗುತ್ತಿರುವ ಹೊತ್ತಿನಲ್ಲಿ ನಂಬಿಕೆ, ವಿಶ್ವಾಸ, ಪ್ರೀತಿಯ ತಳಗಹದಿಯ ಮೇಲೆ ಇಂದಿಗೂ ಜಾಲವಾಡಗಿ ಅವಿಭಕ್ತ...

ಈ ಸಂದರ್ಭದಲ್ಲಿ ಮಾತನಾಡಿದ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಕನ್ನಡ ನಾಡು-ನುಡಿ, ನೆಲ-ಜಲ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆ ಮತ್ತು ಬೆಳವಣಿಗೆಗೆ ಸಾಹಿತ್ಯ ಸಮ್ಮೇಳನಗಳು ಮಹತ್ವದ ವೇದಿಕೆಗಳಾಗಿವೆ. ಕನ್ನಡ ಭಾಷೆಯ ಬಳಕೆ ಕೇವಲ ಆಚರಣೆಗಳಿಗೆ ಸೀಮಿತವಾಗದೆ ಪ್ರತಿಯೊಬ್ಬರ ದೈನಂದಿನ ಬದುಕಿನ ಭಾಗವಾಗಬೇಕು. ಮುಂದಿನ ಪೀಳಿಗೆಗೆ ಕನ್ನಡದ ಶ್ರೀಮಂತ ಸಾಹಿತ್ಯ, ಸಂಸ್ಕೃತಿ ಹಾಗೂ ಪರಂಪರೆಯನ್ನು ಪರಿಚಯಿಸುವ ಮೂಲಕ ಭಾಷಾಭಿಮಾನ ಬೆಳೆಸಬೇಕು. ಜನಸಾಮಾನ್ಯರಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಕುರಿತು ಜಾಗೃತಿ ಮೂಡಿಸುವುದೇ ಸಮ್ಮೇಳನದ ಪ್ರಮುಖ ಆಶಯವಾಗಿದೆ ಎಂದು ಹೇಳಿದರು.

Advertisements

ಇದನ್ನು ಓದಿದ್ದೀರಾ? ಕಲಬುರಗಿ | ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ಕಬ್ಬು ಖರೀದಿ ಆರಂಭಕ್ಕೆ ಆಗ್ರಹ; ರೈತರಿಗೆ ₹25 ಸಾವಿರ ಪರಿಹಾರ ನೀಡಲು ಒತ್ತಾಯ

ಈ ಸಂದರ್ಭದಲ್ಲಿ ಕಸಾಪ ಜಿಲ್ಲಾ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್. ಧನ್ನಿ, ಕೇಂದ್ರ ಕಸಾಪ ಪ್ರತಿನಿಧಿ ಸೈಯ್ಯದ್ ನಜಿರುದ್ದಿನ್ ಮುತ್ತವಲ್ಲಿ, ತಾಲೂಕಾಧ್ಯಕ್ಷೆ ಶಿವಲೀಲಾ ಕಲಗುರ್ಕಿ, ಧರ್ಮರಾಜ ಜವಳಿ, ಹಣಮಂತರ ಪ್ರಭು, ರವೀಂದ್ರಕುಮಾರ ಭಂಟನಳ್ಳಿ, ಮಹಾನಂದಾ ಹುಲಿ, ನೀಲಾಂಬಿಕಾ ಚೌಕಿಮಠ, ಚಂದ್ರಕಾಂತ ಸೂರನ್, ಪರಮಾನಂದ ಸರಸಂಬಿ, ಎಚ್.ಎಸ್. ಬರಗಾಲಿ, ರೇವಣಸಿದ್ದಪ್ಪ ಜೀವಣಗಿ, ಭೀಮಾಶಂಕರ ಅಂಕಲಗಿ, ರಾಜೇಂದ್ರ ಮಾಡಬೂಳ, ಪ್ರಭವ ಪಟ್ಟಣಕರ್, ಈರಣ್ಣ ಸೋನಾರ, ಮಲ್ಲಿಕಾರ್ಜುನ ಇಬ್ರಾಹಿಂಪುರ, ಸೋಮಶೇಖರಯ್ಯ ಹೊಸಮಠ, ಶಿವಕುಮಾರ ಸಿ.ಎಚ್., ವಿವೇಕಾನಂದ ಹಾಗೂ ಪದ್ಮಾವತಿ ನಾಯಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts
Advertisements

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ರವಿ ಪೂಜಾರಿಗೆ ಕೋರ್ಟ್ ಅನುಮತಿ

ಕಳೆದ ರಾತ್ರಿ ಮಲ್ಪೆಯ ನೆರ್ಗಿಯಲ್ಲಿ ನಿಧನರಾದ ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿನ...

ಬಾಗೇಪಲ್ಲಿ | ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡದಿದ್ದರೆ ನ.16ರಂದು ಜಿಲ್ಲಾಧಿಕಾರಿ ಕಛೇರಿ ಮುಂದೆ ಬೃಹತ್ ಹೋರಾಟ

ಅಕ್ಷರ ದಾಸೋಹ ಕಾರ್ಯಕರ್ತೆಯರ ಬದುಕಿಗೆ ಮಾರಕವಾಗಿರುವ ಕ್ಲಸ್ಟರ್ ಕಿಚನ್ ಯೋಜನೆಯನ್ನು ರಾಜ್ಯ...

ಉಡುಪಿ | 101.9 ಎಫ್‌ಎಂ ಸೇವೆಗೆ ಚಾಲನೆ; ಕರಾವಳಿಯಲ್ಲಿ ಆಕಾಶವಾಣಿ ಪ್ರಸಾರ ವ್ಯವಸ್ಥೆ ಬಲವರ್ಧನೆ : ಸಚಿವ ಅಶ್ವಿನಿ ವೈಷ್ಣವ್

ಕರಾವಳಿ ಪ್ರದೇಶದಲ್ಲಿ ಸಾರ್ವಜನಿಕ ಪ್ರಸಾರ ಮೂಲಸೌಕರ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಉಡುಪಿಯಲ್ಲಿ ಆರಂಭಗೊಂಡಿರುವ...