ಕಲಬುರಗಿ | ಬುರ್ಖಾ ಧರಿಸಿಲ್ಲವೆಂದ ವಿದ್ಯಾರ್ಥಿನಿಗೆ ಗದರಿದ್ದ ಚಾಲಕ ಅಮಾನತು

Date:

Advertisements

ಬುರ್ಖಾ ಯಾಕೆ ಧರಿಸಿಲ್ಲವೆಂದು ಗದರಿ, ಮುಸ್ಲಿಂ ವಿದ್ಯಾರ್ಥಿಯನಿಯನ್ನು ಬಸ್‌ನಿಂದ ಕೆಳಗೆ ಎಳೆದಿದ್ದ ಸಾರಿಗೆ ಬಸ್‌ ಚಾಲಕನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬೀದರ್ ವಿಭಾಗೀಯ ನಿಯಂತ್ರಣಾಧಿಕಾರಿ ಸಿ.ಎಸ್. ಫುಲೇಕರ್ ಅಮಾನತು ಆದೇಶ ಹೊರಡಿಸಿದ್ದಾರೆ.

ಕಮಲಾಪುರ ಬಸ್‌ ನಿಲ್ದಾಣದಲ್ಲಿ ಹಿಜಾಬ್‌ ಧರಿಸಿದ್ದ ಮುಸ್ಲಿಂ ವಿದ್ಯಾರ್ಥಿನಿ ತನ್ನೂರಿಗೆ ಮರಳಲು ಬಸ್‌ ಹತ್ತುತ್ತಿದ್ದರು. ಈ ವೇಳೆ, ಆಕೆಯನ್ನು ತಡೆದ ಚಾಲಕ ಮಹಿಬೂಬ್ ಪಾಟೀಲ್, ‘ಬುರ್ಖಾ ಯಾಕೆ ಹಾಕಿಕೊಂಡಿಲ್ಲ’ ಎಂದು ಗದರಿ, ಬಸ್‌ನಿಂದ ಹೊರಗೆ ಇಳಿಸಿದ್ದರು.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ನೆಟ್ಟಿಗರು ಆಕ್ಷೇಪ ವ್ಯಕ್ತಪಡಿಸಿದ್ದು, ಚಾಲಕ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.

Advertisements

ಬಸವ ಕಲ್ಯಾಣ ಬಸ್‌ ಡಿಪೋದಲ್ಲಿ ಸೇವೆ ಸಲ್ಲಿಸುತ್ತಿದ್ದ ಮಹಿಬೂಬ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ, ಆದೇಶ ಹೊರಡಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X