ಕಲಬುರಗಿ | ಬಿಸಿಲ ಧಗೆಗೆ ತತ್ತರಿಸಿದ್ದ ಜನರಿಗೆ ತಂಪೆರೆದ ಮಳೆ

Date:

Advertisements

ರಾಜ್ಯದ ಜಿಲ್ಲೆಗಳಲ್ಲಿ ಭಾಗಗಳಲ್ಲಿ ಬಿಸಿಲು ಅಧಿಕವಾಗಿದ್ದು, ಕಲಬುರಗಿ ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಅತೀ ಹೆಚ್ಚಿನ ತಾಪಮಾನ ದಾಖಲಾಗಿತ್ತು. ಬಿಸಿಲನಗರಿಗೆ ಸದ್ಯ ವರುಣನ ಕೃಪೆಯಾಗಿದೆ.

ಏ.11ರಂದು ಗುಡುಗು ಸಿಡಿಲು ಸಹಿತ ಮಳೆಯಾಗಿದ್ದು, ಕಲಬುರಗಿ ಜನರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಕಲಬುರಗಿಯಲ್ಲಿ ಈ ವರ್ಷ ದಾಖಲಾದ ಗರಿಷ್ಠ ತಾಪಮಾನ 43.1 ಡಿಗ್ರಿ ಸೇಲ್ಸಿಯಸ್‌ಗೂ ಅಧಿಕ.

ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ತೆಳುವಾದ ಬಟ್ಟೆ ಧರಿಸಿ, ತಲೆಗೆ ಕ್ಯಾಪ್ ಧರಿಸಿ, ಅಧಿಕವಾಗಿ ನೀರನ್ನು ಸೇವಿಸಿ, ಎಳೆನೀರು, ತಂಪು ಪಾನೀಯ, ಸೇವಿಸಿ, ಬೆಳಿಗ್ಗೆ 11 ಗಂಟೆಯಾದರೆ ಸಾಕು ಬಿಸಿಲಿನ ತಾಪ ಆರಂಭ ಮಧ್ಯಾಹ್ನ 1 ಗಂಟೆಯಾದ್ರೆ ಯಾರು ರಸ್ತೆ ಮೇಲೆ ಅನಗತ್ಯವಾದ ಓಡಾಟ ಬೇಡಾ, ಎಂದು ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಜನರಿಗೆ ಸಲಹೆ ನೀಡಿದ್ದಾರೆ.

Advertisements

ನೀರಿನ ಸಮಸ್ಯೆಯೂ ಉಲ್ಬಣ

ಜಿಲ್ಲೆಯಲ್ಲಿ ಒಂದೆಡೆ ಬಿಸಿಲಿನ ತಾಪ ಹೆಚ್ಚಳವಾಗುತ್ತಿದ್ದು, ಮತ್ತೊಂದೆಡೆ ನೀರಿನ ಸಮಸ್ಯೆಯು ಸಹ ತಲೆದೂರಿದೆ. ಜನ ಜಾನುವಾರುಗಳಿಗೆ ಕುಡಿಯಲು ಸಹ ನೀರಿಲ್ಲದ ಪರಿಸ್ಥಿತಿ ಉದ್ಭವವಾಗಿದ್ದು. ಹಲವೆಡೆ ನೀರಿಗಾಗಿ ಪ್ರತಿಭಟನೆ ಧರಣಿ ನಡೆಸಿರುವುದು ಕಾಣಬಹುದು.

ಮೊನ್ನೆ ಅಷ್ಟೆ ಅಫಜಲಪುರ ತಾಲೂಕಿನ ಗುಡ್ಡೆವಾಡಿ ಗ್ರಾಮದ ಬಂಡೆಪ್ಪಾ ಪೂಜಾರಿ ಎಂಬುವವರ ಗರ್ಭಿಣಿ ಹಸು, ನೀರು ಕುಡಿಯಲು ಸಿಗದೆ ಇರುವುದರಿಂದ ಉಸುಕಿನಲ್ಲಿ ಕಾಲು ತಿಕ್ಕಿ ಕೊನೆಉಸಿರೆಳೆದ ಘಟನೆ ನಡೆದಿದೆ.

ಜಿಲ್ಲೆಯ ಅನೇಕ ಹಳ್ಳಿ, ನಗರ ಗ್ರಾಮಗಳಲ್ಲಿ ಬಿಸಿಲಿನ ತಾಪಮಾನಕ್ಕೆ ಕೆರೆ, ನದಿ ಬೋರ್ವೆಲ್‌ಗಳು ಬತ್ತಿ ಹೋಗಿವೆ. ಕುಡಿಯಲು, ಬಳಸಲು ನೀರು ಇಲ್ಲದೇ ಕಂಗಲಾದ ಜನರು ಮನೆಗಳಿಗೆ ಟ್ಯಾಂಕರ್ ನೀರು ಹಾಕಿಸಿಕೊಳ್ಳುವ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಸದ್ಯ ಕಲಬುರಗಿಯಲ್ಲಿ ಮಳೆಯಾಗಿದ್ದು ನಗರದ ಜನ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X