ಕಲಬುರಗಿ | ಗಬ್ಬೆದ್ದು ನಾರುತ್ತಿದೆ ಹಡಗಿಲಹಾರುತಿ ಒಳಚರಂಡಿ; ದಲಿತ ಕೇರಿಗೆ ನುಗ್ಗುತ್ತಿದೆ ಕೊಳಚೆ ನೀರು

Date:

ಕಲಬುರಗಿ ದಕ್ಷಿಣ ಕ್ಷೇತ್ರದ ಹಡಗಿಲಹಾರುತಿ ಗ್ರಾಮದಲ್ಲಿನ ಚರಂಡಿಗಳು ಕಸ ಮತ್ತು ಕೊಳಚೆ ನೀರಿನಿಂದ ಕೆಸರಿನ ಮಡುವಿನಂತಾಗಿದ್ದರೂ ಕೂಡ ಹಲವು ವರ್ಷಗಳಿಂದ ಚರಂಡಿಗಳ ದುರಸ್ತಿಯಾಗಿಲ್ಲ. ಚರಂಡಿಯ ಕೊಳಚೆ ನೀರು ಮಳೆಗಾಲದಲ್ಲಿ ಮನೆಗಳಿಗೆ ನುಗ್ಗುತ್ತಿದೆ. ಅಲ್ಲದೇ ಮನೆಗಳ ಮುಂದೆ ಮಡುಗಟ್ಟಿ ನಿಂತಿರುವ ಕೊಳಚೆ ನೀರಿನಿಂದ ಅಲ್ಲಿಯ ಇಡೀ ಪ್ರದೇಶ ಕೆರೆಯಂತೆ ಕಾಣುತ್ತದೆ.

- Advertisement -

“ಗ್ರಾಮದ ಈ ಭಾಗದಲ್ಲಿ ಮೊದಲು 2 ದೊಡ್ಡ ಒಳಚರಂಡಿಗಳಿದ್ದವು. ಇದೀಗ ಅವುಗಳನ್ನು ಮುಚ್ಚಿ ಹಾಕಿದ್ದಾರೆ. ಉಳಿದ ಚರಂಡಿಗಳನ್ನು ನೇರವಾಗಿ ಮಾಡದೇ ಓರೆಯಾಗಿರುವುದರಿಂದ ನೀರು ಹೋಗಲು ಸಂಪರ್ಕ ಕಡಿತಗೊಂಡಿದೆ. ಇಳಿಜಾರು ಪ್ರದೇಶದಲ್ಲಿ ದಲಿತ ಕೇರಿ ಇದೆ. ಚರಂಡಿಯ ನೀರು ಸರಾಗವಾಗಿ ಹರಿಯಲು ಸ್ಥಳಾವಕಾಶ ಇಲ್ಲದ ಕಾರಣ ದಲಿತ ಕೇರಿಯಲ್ಲಿ ನಿಲ್ಲುತ್ತದೆ. ಅಲ್ಲದೆ ಮುಖ್ಯ ರಸ್ತೆಯ ಬದಿಯಲ್ಲಿ ಒಂದು ದೊಡ್ಡ ಚರಂಡಿ ಇದ್ದು, ರಸ್ತೆ ನಿರ್ಮಾಣ ಮಾಡುವಾಗ ಅದನ್ನು ಒಡೆದು ಹಾಕಿದ್ದಾರೆ. ರಸ್ತೆ ನಿರ್ಮಾಣವಾದ ಬಳಿಕ ಒಡೆದ ಚರಂಡಿಯನ್ನು ಹಾಗೆ ಬಿಟ್ಟಿದ್ದಾರೆ. ಇದರಿಂದ ನೀರು ಮನೆಯ ಮುಂದೆ ನಿಲ್ಲುತ್ತದೆ” ಎಂದು ಸ್ಥಳೀಯ ನಿವಾಸಿಗಳು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...
ಚರಂಡಿ ನೀರು

ಸ್ಥಳೀಯ ನಿವಾಸಿ ನಾಗಮ್ಮ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಹಡಿಗಲಹಾರುತಿ ಗ್ರಾಮದಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸಿ ವರ್ಷವೇ ಕಳೆದಿದೆ. ಅವುಗಳು ತುಂಬಿ ಕೊಳಚೆ ನೀರು ರಸ್ತೆಯ ಮೇಲೆ ಹರಿಯುತ್ತದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಕೂಡ ಈವರೆಗೆ ದುರಸ್ತಿ ಕಾರ್ಯ ನಡೆಸಿಲ್ಲ. ಸೂಕ್ತ ಕ್ರಮ ಕೈಗೊಂಡಿಲ್ಲ” ಎಂದು ಆರೋಪಿಸಿದರು.

“ನಮ್ಮ ಮನೆ ರಸ್ತೆ ಪಕ್ಕದ ತಗ್ಗು ಪ್ರದೇಶದಲ್ಲಿದೆ. ರಸ್ತೆ ಎತ್ತರಕ್ಕೆ ಇದೆ. ನಿತ್ಯವೂ ನೀರು ಸಂಗ್ರಹವಾಗಿ ಮನೆ ಮುಂದೆ ನಿಲ್ಲುತ್ತದೆ. ಮಳೆಗಾಲದಲ್ಲಂತೂ ಹಳ್ಳದ ಹಾಗೆ ನೀರು ಹರಿದು ಮನೆಗೆ ನುಗ್ಗಿ ಮನೆಯಲ್ಲಿದ್ದ ದವಸ ಧಾನ್ಯ ಹಾಳಾಗಿ ತಿಪ್ಪೆ ಪಾಲಾದವು. ರಾತ್ರಿಯೆಲ್ಲಾ ನಿದ್ದೆ ಇಲ್ಲದೆ, ಮಲಗಲು ಜಾಗವಿಲ್ಲದೆ ಪರದಾಡಿದ್ದೀವಿ. ಸಾಕಿದ ಕೋಳಿ, ಆಕಳು ನೀರಿನಲ್ಲಿ ಮುಳ್ಳುಗಿ ಸತ್ತು ಹೋಗಿವೆ. 20 ವರ್ಷದಿಂದ ಹೀಗೆ ಈ ಕೊಳಚೆ ನೀರಿನ ವಾಸನೆ ಕುಡಿಯುತ್ತ ಜೀವನ ಮಾಡುತ್ತಿದ್ದೇವೆ. ಕಾಲರಾ, ಮಲೇರಿಯಾದಂತಹ ರೋಗ ರುಜಿನಗಳು ಬಂದರೆ ಯಾರು ಹೊಣೆ?” ಎಂದು ತಮ್ಮ ಅಳಲು ತೋಡಿಕೊಂಡರು.

ಇದನ್ನೂ ಓದಿದ್ದೀರಾ? ಕಲಬುರಗಿ | ಕಾಮಗಾರಿಗಳಲ್ಲಿ ಅಕ್ರಮ; ಮೂವರು ಎಂಜಿನಿಯರ್‌ಗಳ ಅಮಾನತು

“ಅಧಿಕಾರಿಗಳು ಜನಪ್ರತಿನಿಧಿಗಳು ಬರುತ್ತಾರೆ. ಸರಿಪಡಿಸುತ್ತೇವೆಂದು ಆಶ್ವಾಸನೆ ಕೊಟ್ಟು ಹೋಗುತ್ತಾರೆ ಅಷ್ಟೇ. ಈವರೆಗೆ ಯಾರೂ ಕೂಡ ದುರಸ್ತಿಪಡಿಸಿಲ್ಲ” ಎಂದು ಗ್ರಾಮಸ್ಥರು ಆರೋಪಿಸಿದರು.

ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್‌ ಅವರನ್ನು ಈ ದಿನ.ಕಾಮ್‌ ಸಂಪರ್ಕಿಸಿದಾಗ ಅವರು “ನೀವು ಈ ವಿಚಾರ ನನ್ನ ಗಮನಕ್ಕೆ ತಂದಿದ್ದು, ಒಳಿತಾಯಿತು. ನಾನು ಬೆಂಗಳೂರಿಗೆ ಹೋಗುತ್ತಿರುವೆ. ಬಂದ ಕೂಡಲೇ ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುತ್ತೇನೆ” ಎಂದು ಭರವಸೆ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಗೀತಾ ಹೊಸಮನಿ
ಗೀತಾ ಹೊಸಮನಿ
ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾಪುವಿನಲ್ಲಿ ಪ್ರಜಾಸೇವಾ ಆಂದೋಲನ: 75 ಅಹವಾಲು ಸ್ವೀಕಾರ, ಅಧಿಕಾರಿಗಳಿಂದ ಪರಿಹಾರದ ಭರವಸೆ

ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಇದ್ದಲ್ಲಿಯೇ ಮಾಡಿಕೊಡುವ ಉದ್ದೇಶದಿಂದ ಸಚಿವರು, ಜನಪ್ರತಿನಿಧಿಗಳು ಹಾಗೂ...

ವಿಜಯಪುರ | ರೇಬಿಸ್ ತಡೆಗೆ ಜಾಗೃತಿ ಮುಖ್ಯ; ಬೀದಿ ನಾಯಿ ಕಡಿತದ ಬಗ್ಗೆ ಜನರಲ್ಲಿ ಅರಿವು

ರೇಬಿಸ್ ವೈರಾಣು ಹರಡುವಿಕೆ, ನಾಯಿ ಕಡಿತದಿಂದ ಉಂಟಾಗಬಹುದಾದ ಅಪಾಯ ಹಾಗೂ ಮುನ್ನೆಚ್ಚರಿಕಾ...

ಜಮಖಂಡಿ | ಸರ್ವೆ ನಂ.71/4ರಲ್ಲೇ ಸ್ಮಶಾನಕ್ಕೆ ಜಾಗ ನೀಡುವಂತೆ ದಲಿತ ಸಮುದಾಯದ ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಲಬೀಳಗಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿ...

ಸಿದ್ದರಾಮಯ್ಯ ಪ್ರತಿಮೆ ತೆರವು ಖಂಡಿಸಿ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ

ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ, ಸಿದ್ದರಾಮಯ್ಯ...