ಕಲಬುರಗಿ | ಸಾಲಗಾರನ ಮನೆ ಮೇಲೆ ʼಈ ಮನೆ ಮಾರಾಟಕ್ಕೆ ಇದೆʼ ಬರಹ : ಮೈಕ್ರೊ ಫೈನಾನ್ಸ್ ಕಿರುಕುಳದಿಂದ ವ್ಯಕ್ತಿ ಆತ್ಮಹತ್ಯೆ

Date:

ಮೈಕ್ರೊ ಫೈನಾನ್ಸ್ ಕಂಪನಿಯ ಸಿಬ್ಬಂದಿಯ ಕಿರುಕುಳ ಮುಂದುವರೆದಿದ್ದು, ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಯಾತನೂರ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಮೈಕ್ರೊ ಫೈನಾನ್ಸ್ ಕಿರುಕುಳದಿಂದ ನೊಂದು ನಿದ್ರೆ ಮಾತ್ರೆ ಸೇವಿಸಿ ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

- Advertisement -

ನಾಗೇಶ ರಾಮಣ್ಣ ರೂಗಿ (50) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎನ್ನಲಾಗಿದೆ. ನಾಗೇಶ ಅವರು ಕಲಬುರಗಿ ನಗರದ ಹಿಂದೂಜಾ ಹಣಕಾಸು ಸಂಸ್ಥೆಯಲ್ಲಿ ಒಟ್ಟು ₹5 ಲಕ್ಷ ಸಾಲ ಪಡೆದುಕೊಂಡಿದ್ದರು. ಅದರಲ್ಲಿ ₹3.5 ಲಕ್ಷ ಮರುಪಾವತಿಸಿದರು. ಉಳಿದ ₹1.5 ಲಕ್ಷ ಸಾಲದ ಹಣ ಕಟ್ಟುವಂತೆ ಹಿಂದೂಜಾ ಹಣಕಾಸು ಸಂಸ್ಥೆಯ ಸಿಬ್ಬಂದಿ ಯಾತನೂರ ಗ್ರಾಮದ ಮನೆಗೆ ಬಂದು ಕಿರುಕುಳ ನೀಡುತ್ತಿದ್ದರುʼ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸಾಲಗಾರ ನಾಗೇಶ ಅವರ ಮನೆಯ ಗೋಡೆ ಮೇಲೆ ʼಹಿಂದೂಜಾ ಫೈನಾನ್ಸ್‌ಗೆ ಅಡಮಾನ ಮಾಡಲಾಗಿದೆʼ, ʼಈ ಮನೆ ಮಾರಾಟಕ್ಕೆ ಇದೆʼ ಎಂದು ಫೈನಾನ್ಸ್ ಸಿಬ್ಬಂದಿ ಬರೆದಿದ್ದರು. ಫೈನಾನ್ಸ್‌ ಸಿಬ್ಬಂದಿ ಕಿರುಕುಳ ನೀಡಿದ ಕಾರಣಕ್ಕೆ ಮನೆಯಲ್ಲಿ ನಿದ್ರೆ ಮಾತ್ರೆ ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ನಾಗೇಶ ಪತ್ನಿ ಸುನಂದಾ ರೂಗಿ ನೆಲೋಗಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಹಳೆ ವೈಷಮ್ಯ : ಸ್ನೇಹಿತರಿಂದಲೇ ಯುವಕನ ಕೊಲೆ

ʼಫೈನಾನ್ಸ್‌ನ ಅಧಿಕಾರಿ ಹಾಗೂ ಸಿಬ್ಬಂದಿ ಪದೇ ಪದೇ ಮನೆಗೆ ಬಂದು ಸಾಲ ಮರು ಪಾವತಿಸುವಂತೆ ಕಿರುಕುಳ ನೀಡುತ್ತಿದ್ದರು. ಸಾಲ ಮರುಪಾವತಿಸದೇ ಇದ್ದರೆ ಮನೆಗೆ ಕೀಲಿ ಹಾಕುತ್ತೇವೆ ಎಂದು ಮಾನಸಿಕ ಹಿಂಸೆ ಕೊಡುತ್ತಿದ್ದರುʼ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...