ಕಲಬುರಗಿ | ಅನುದಾನ ಮಂಜೂರಾದರೂ ಅಂಗನವಾಡಿ ಕಟ್ಟಡಕ್ಕಿಲ್ಲ ನಿರ್ಮಾಣ ಭಾಗ್ಯ

Date:

ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರ ನಡೆಸುತ್ತಿದ್ದು, ಬಾಡಿಗೆ ಹಣವನ್ನು ಕೊಡದೇ ಇರುವುದರಿಂದ ಖಾಲಿ ಮಾಡಿಸಿದ್ದಾರೆ. ಅಂಗನವಾಡಿ ಕೇಂದ್ರಕ್ಕೆ ಅನುದಾನ ಮಂಜೂರಿಯಾಗಿದೆ. ಹಾಗಾಗಿ ಹೊಸದಾಗಿ ಅಂಗನವಾಡಿ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿ ಮಾಡಿಸಬೇಕು ಎಂದು ಒತ್ತಾಯಿಸಿ ದಲಿತ ಸೇನೆ ಕಾರ್ಯಕರ್ತರು ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

- Advertisement -

“ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಬಿದರಚೆಡ್‌ ಗ್ರಾಮದಲ್ಲಿ ಅಂಗನವಾಡಿ ಕೇಂದ್ರವಿದ್ದು, ಅದರಲ್ಲಿ ಮುಳ್ಳುಗಿಡಗಂಟಿ ಬೆಳೆದಿರುವುದರಿಂದ ಕಳೆದ 2 ವರ್ಷಗಳಿಂದ ಖಾಸಗಿ ಕಟ್ಟಡದಲ್ಲಿ ಅಂಗನವಾಡಿ ನಡೆಸುತ್ತಿದ್ದರು. ಬಾಡಿಗೆ ನೀಡದಿರುವ ಕಾರಣ ಮಾಲೀಕರು ಅಂಗನವಾಡಿ ಕೇಂದ್ರ ನಡೆಸದಂತೆ ಖಾಲಿ ಮಾಡಿಸಿದ್ದಾರೆ. ಇದರಿಂದ ಅಂಗನವಾಡಿ ಮಕ್ಕಳು ಬೀದಿಗೆ ಬಂದಿದ್ದಾರೆ. ಹಾಗಾಗಿ ಅಂಗನವಾಡಿ ಕೇಂದ್ರಕ್ಕೆ ಮಿಸಲಾಗಿರುವ ಸ್ಥಳದಲ್ಲಿ ಸ್ವಚ್ಚಗೊಳಿಸಿ, ಹಳೇ ಕಟ್ಟಡವನ್ನು ಕೆಡವಿ ಹೊಸದಾಗಿ ಕಟ್ಟಡ ನಿರ್ಮಾಣ ಮಾಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಈ ಸುದ್ದಿ ಓದಿದ್ದೀರಾ? ರಾಯಚೂರು | ಕುಡಿಯುವ ನೀರು ಒದಗಿಸುವಂತೆ ಸಂಘಟನೆಗಳ ಆಗ್ರಹ

‌”ಅಂಗನವಾಡಿ ನಿರ್ಮಾಣಕ್ಕೆ ಈಗಾಗಲೇ ಸರ್ಕಾರದಿಂದ ಅನುದಾನ ಮಂಜೂರಾಗಿದ್ದು, ಸದರಿ ಅಂಗನವಾಡಿ ಕೇಂದ್ರಕ್ಕೆ ಮಂಜೂರಾದ ಅನುದಾನದಿಂದ ಹೊಸದಾಗಿ ಕಟ್ಟಡ ನಿರ್ಮಾಣ ಮಾಡಬೇಕು” ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮೈಲಾರಿ ಎಚ್ ಕಾಸ್ಕರ್, ದಶರಥ ಮಾಧವಾರ, ನರಸಿಂಹ, ಪರಮೇಶ್ವರ್, ಲಕ್ಷ್ಮಣ, ಸಾಯಪ್ಪ, ನೆರಲ್ ಮಾಧವರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾಪುವಿನಲ್ಲಿ ಪ್ರಜಾಸೇವಾ ಆಂದೋಲನ: 75 ಅಹವಾಲು ಸ್ವೀಕಾರ, ಅಧಿಕಾರಿಗಳಿಂದ ಪರಿಹಾರದ ಭರವಸೆ

ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಇದ್ದಲ್ಲಿಯೇ ಮಾಡಿಕೊಡುವ ಉದ್ದೇಶದಿಂದ ಸಚಿವರು, ಜನಪ್ರತಿನಿಧಿಗಳು ಹಾಗೂ...

ವಿಜಯಪುರ | ರೇಬಿಸ್ ತಡೆಗೆ ಜಾಗೃತಿ ಮುಖ್ಯ; ಬೀದಿ ನಾಯಿ ಕಡಿತದ ಬಗ್ಗೆ ಜನರಲ್ಲಿ ಅರಿವು

ರೇಬಿಸ್ ವೈರಾಣು ಹರಡುವಿಕೆ, ನಾಯಿ ಕಡಿತದಿಂದ ಉಂಟಾಗಬಹುದಾದ ಅಪಾಯ ಹಾಗೂ ಮುನ್ನೆಚ್ಚರಿಕಾ...

ಜಮಖಂಡಿ | ಸರ್ವೆ ನಂ.71/4ರಲ್ಲೇ ಸ್ಮಶಾನಕ್ಕೆ ಜಾಗ ನೀಡುವಂತೆ ದಲಿತ ಸಮುದಾಯದ ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಲಬೀಳಗಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿ...

ಸಿದ್ದರಾಮಯ್ಯ ಪ್ರತಿಮೆ ತೆರವು ಖಂಡಿಸಿ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ

ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ, ಸಿದ್ದರಾಮಯ್ಯ...