ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂದು ಅಪರಿಚಿತ ವ್ಯಕ್ತಿಯೋರ್ವ ಕರೆ ಮಾಡಿ ತಿಳಿಸಿದ ಹಿನ್ನೆಲೆಯಲ್ಲಿ ಪೊಲೀಸರು ಕಲಬುರಗಿ ರೈಲ್ವೆ ನಿಲ್ದಾಣದತ್ತ ಧಾವಿಸಿದ್ದು, ಪರಿಶೀಲನೆ ನಡೆಸಿದರು.
ಮಂಗಳವಾರ ‘ಅಪರಿಚಿತ ವ್ಯಕ್ತಿಯೋರ್ವನು ಬೆಂಗಳೂರಿನ 112ಕ್ಕೆ ಕರೆ ಮಾಡಿ ಕಲಬುರಗಿ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಹೇಳಿದ್ದು, ಬೆಂಗಳೂರಿನ 112 ಪೊಲೀಸ್ ಅಧಿಕಾರಿಗಳು ಕಲಬುರಗಿ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದ ಬೆನ್ನೆಲ್ಲೆ ಸ್ಟೇಷನ್ ಬಜಾರ್ ಠಾಣೆಯ ಪೊಲೀಸರು ಹಾಗೂ ಶ್ವಾನ ದಳ, ಬಾಂಬ್ ಪತ್ತೆ ಹಾಗೂ ನಿಷ್ಕ್ರಿಯ ದಳ(BDDS) ಮತ್ತು ವಿದ್ವಂಸಕ ಕೃತ್ಯ ತಪಾಸಣೆ ದಳ(ASC) ತಂಡವು ಕಲಬುರಗಿ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶಿಲೀಸಿದೆ.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ದಂಡೋತಿ ಗ್ರಾಮದಲ್ಲಿ ಮಂಗಗಳ ದಾಳಿ: ನಾಲ್ವರಿಗೆ ಗಂಭೀರ ಗಾಯ, ಗ್ರಾಮಸ್ಥರಲ್ಲಿ ಆತಂಕ
“ರೈಲ್ವೆ ನಿಲ್ದಾಣದಲ್ಲಿ ಯಾವುದೇ ರೀತಿಯ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿರುವುದಿಲ್ಲ. ಇದೊಂದು ಹುಸಿ ಬಾಂಬ್ ಕರೆಯಾಗಿತ್ತು. ಕರೆ ಮಾಡಿರುವ ವ್ಯಕ್ತಿಯ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ” ಎಂದು ನಗರ ಪೊಲೀಸ್ ಆಯುಕ್ತಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
https://shorturl.fm/Hs8Iw