ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ಹೊರವಲಯದ ಧಾಬಾವೊಂದರಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.
ಸಿದ್ಧಾರೂಢ (32), ಜಗದೀಶ್ (25) ಮತ್ತು ರಾಮಚಂದ್ರ (35) ಕೊಲೆಯಾದವರು ಎಂದು ಗುರುತಿಸಲಾಗಿದೆ. ಈ ಮೂವರು ಸಂಬಂಧಿಕರಾಗಿದ್ದಾರೆ ಎನ್ನಲಾಗಿದೆ.
ಈ ಮೂವರು ದಾಬಾದಲ್ಲಿ ಕೆಲಸ ಮಾಡುತ್ತಿದ್ದರು. ದಾಬಾಗೆ ನುಗ್ಗಿದ ದುಷ್ಕರ್ಮಿಗಳು ಮೂವರನ್ನು ಕೊಲೆಗೈದು ಪರಾರಿಯಾಗಿದ್ದಾರೆ.
ಇದನ್ನೂ ಓದಿ : ಬೀದರ್ | ಚಲಿಸುತ್ತಿದ್ದ ರೈಲಿನಿಂದ ಬಿದ್ದು ಯುವಕ ಸಾವು
ಕಲಬುರಗಿ ಸಬ್ ಅರ್ಬನ್ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ. ಸಬ್ ಅರ್ಬನ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.