ಕಲಬುರಗಿ | ತ್ಯಾಗಮಯಿ ರಮಾಬಾಯಿಯನ್ನು ಸ್ಮರಿಸಿಕೊಳ್ಳಬೇಕು: ಡಾ. ಹಣಮಂತರಾವ್ ದೊಡ್ಡಮನಿ

Date:

ಧಮ್ಮ ಮೈತ್ರಿ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾತೆ ರಮಾಬಾಯಿ ಅಂಬೇಡ್ಕರ್ ಅವರ 127ನೇ ಜಯಂತ್ಯುತ್ಸವ ಕಾರ್ಯಕ್ರಮವು ಕಲಬುರಗಿ ಜಿಲ್ಲೆಯ ಶರಣ ಸಿರಸಗಿ ಗ್ರಾಮದ ಅಂಬೇಡ್ಕರ್ ನಗರದಲ್ಲಿ ಆಚರಿಸಲಾಯಿತು.

- Advertisement -

ಕಾರ್ಯಕ್ರಮದ ಉದ್ಘಾಟಿಸಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ. ಹಣಮಂತರಾವ ದೊಡ್ಡಮನಿ ಮಾತನಾಡಿ,
“ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಬೆಳವಣಿಗೆಯ ಹಿಂದೆ ಮಾತೆ ರಮಾಬಾಯಿ ಅವರ ಶ್ರಮ, ತ್ಯಾಗ ತುಂಬಾ ಇದೆ. ಅಂಬೇಡ್ಕರ್ ಅವರು ವಿದೇಶದಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿರುವಾಗ ತಮ್ಮ ಎರಡು ಮಕ್ಕಳು ತೀರಿಕೊಂಡರು ಸಹ ಸಹಿಸಿಕೊಂಡು ಅವರ ಓದಿಗೆ ಸಮಸ್ಯೆಯಾಬಾರದಂತೆ ನೋಡಿಕೊಂಡರು. ರಮಾಬಾಯಿ ಅಂಬೇಡ್ಕರ್ ಅವರು ಆ ನಂತರ ಪತ್ರದ ಮೂಲಕ ಮಕ್ಕಳು ತೀರಿಕೊಂಡ ವಿಷಯವನ್ನು ಅಂಬೇಡ್ಕರ್ ಅವರಿಗೆ ತಿಳಿಸುತ್ತಾರೆ. ಅಂತಹ ಮಹಾನ ತ್ಯಾಗಮಯಿ ರಮಾತಾಯಿಯನ್ನು ನಾವು ಇಂದು ಸ್ಮರಿಸಿಕೊಳ್ಳುವ ಅವಶ್ಯಕತೆ ಇದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಸರಕಾರಿ ಅಭಿಯೋಜಕರಾದ ರಾಜಮಹೇಂದ್ರ ಮಾತನಾಡಿ, ನಮ್ಮ ಮಕ್ಕಳ ಬೆಳವಣಿಗೆಯ ಕಡೆಗೆ ಹಾಗೂ ವಿದ್ಯಾಭ್ಯಾಸದ ಕಡೆಗೆ ನಾವು ಪಾಲಕರು ಗಮನ ಹರಿಸಬೇಕಿದೆ. ಬರೀ ವಿದ್ಯಾವಂತರಾದರೆ ಸಾಲದು ಜೊತೆಗೆ ಅವರಿಗೆ ಒಳ್ಳೆಯ ಸಂಸ್ಕಾರ ನೀಡಬೇಕಾಗಿದೆ. ಇಂತಹ ಟ್ರಸ್ಟ್‌ಗಳ ವತಿಯಿಂದ ಶಿಬಿರಗಳು ಹಾಗೂ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ಹಮ್ಮಿಕೊಳ್ಳಬೇಕು ಮತ್ತು ಯುವ ಜನತೆಗೆ ಹೋರಾಟಗಾರರ ಜೀವನ ಚರಿತ್ರೆ ಹಾಗೂ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ ಕಂಡ ಕಷ್ಟದ ದಿನಗಳು ಅರಿವು ಮೂಡಿಸಬೇಕು ಎಂದು ಮಾತೆ ರಮಾತಾಯಿಯ ಕಷ್ಟದ ದಿನಗಳನ್ನು ವಿವರಿಸಿದರು.

ಇದನ್ನು ಓದಿದ್ದೀರಾ? ದುಷ್ಟ ಶಕ್ತಿಗಳ ನಿವಾರಣೆಗೆ ‘ಗಣಹೋಮ’ದ ಮೊರೆಹೋದ ಉಡುಪಿ ವಕೀಲರ ಸಂಘ!

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸರಕಾರಿ ಅಭಿಯೋಜಕರಾದ ರಾಜಮಹೇಂದ್ರ, ನಗರದ ಮುಖಂಡರಾದ ಶಿವಮೂರ್ತಿ ನಡಗೇರಿ, ಶ್ರೀಮತಿ ಭಾರತಬಾಯಿ ಬಬಲಾದ, ಪ್ರೊಫೆಸರ್ ಶಾಂತಪ್ಪ ಹಾದಿಮನಿ ಅವರು ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧಮ್ಮ ಮೈತ್ರಿ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಸಿದ್ದರಾಮ ನಡಗೇರಿ ವಹಿಸಿದ್ದರು.

ಇದೇ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ. ಹಣಮಂತರಾವ ದೊಡ್ಡಮನಿ ಹಾಗೂ ಸರಕಾರಿ ಅಭಿಯೋಜಕರಾದ ರಾಜಮಹೇಂದ್ರ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ನಗರದ ಗಣ್ಯರು, ಮಹಿಳೆಯರು, ಮಕ್ಕಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...