ಟಿಪ್ಪರ್ ಲಾರಿಯೊಂದು ರಾಯಲ್ ಎನ್ಫೀಲ್ಡ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಜಿಲ್ಲೆಯ ಕಮಲಾಪುರ ಪಟ್ಟಣದ ಬಸ್ ನಿಲ್ದಾಣದ ಸಮೀಪ ಬುಧವಾರ ಸಂಭವಿಸಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ಕಲಬುರಗಿ ನಗರದ ಖಮರ್ ಕಾಲೋನಿ ನಿವಾಸಿ ಮಹ್ಮದ್ ಅಹಮದ್ ಎಂದು ಗುರುತಿಸಲಾಗಿದೆ.
ಮಹ್ಮದ್ ಅಹಮದ್ ಅವರು ಕಲಬುರಗಿಯಿಂದ ಹುಮನಾಬಾದ್ ಕಡೆಗೆ ರಾಯಲ್ ಎನ್ಫೀಲ್ಡ್ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ, ಎದುರಿನಿಂದ ಬಂದ ಟಿಪ್ಪರ್ ನಿಯಂತ್ರಣ ತಪ್ಪಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕಮಲಾಪುರ ಸಿಪಿಐ ಶಿವಶಂಕರ ಸಾಹು, ಪಿಎಸ್ಐ ಸುಖಾನಂದ ಸಿಂಗೆ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | SIRಗೆ ಅವಧಿ ವಿಸ್ತರಣೆ ಅಗತ್ಯ
ಈ ಕುರಿತು ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





