ಕಲಬುರಗಿ | ರಾಜಶ್ರೀ ಸಿಮೆಂಟ್ ಕಾರ್ಖಾನೆಯಿಂದ ವಿಷಪೂರಿತ ಹೊಗೆ; ಹಲವು ರೋಗಗಳಿಗೆ ತುತ್ತಾಗುವ ಭೀತಿ

Date:

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಾಮದಲ್ಲಿರುವ ರಾಜಶ್ರೀ ಸಿಮೆಂಟ್ ಕಾರ್ಖಾನೆಯಿಂದ ನಿತ್ಯವೂ ವಿಷಪೂರಿತ ಕೆಮಿಕಲ್ ಹೊರಸೂಸುತ್ತಿದ್ದು, ಬಿಳಿ ಧೂಳಿನಿಂದ ಅಸ್ತಮಾ, ಬಿಪಿ, ಚರ್ಮರೋಗ, ಹೃದಯಘಾತ, ಕ್ಯಾನ್ಸರ್ ಸೇರಿದಂತೆ ಹಲವು ರೀತಿಯ ರೋಗಗಳಿಗೆ ತುತ್ತಾಗುವ ಭೀತಿ ಉಂಟಾಗುತ್ತಿದೆ ಎಂದು ಮಳಖೇಡ ಗ್ರಾಮ ಪಂಚಾಯಿತಿ ಸದಸ್ಯ ಉಮೇಶ್ ಪಾಂಡುಸಿಂಗ್ ಚೌವ್ಹಾಣ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

- Advertisement -

“ಪ್ರತಿ ಮುಂಜಾನೆ ಸಿಮೆಂಟ್‌ ಕಾರ್ಖಾನೆಯಿಂದ ವಿಷಪೂರಿತ ಕೆಮಿಕಲ್ ಧೂಳು, ಕಲುಷಿತ ಹೊಗೆ ಬೂದಿ ಹೊರಗಡೆ ಬಿಡುತ್ತಿರುವುದರಿಂದ ರೈತರು ಬೆಳೆದ ಬೆಳೆಗಳು ಸಂಪೂರ್ಣ ಹಾಳಾಗುತ್ತಿವೆ. ವೃದ್ದರು, ಮಕ್ಕಳು ಹಾಗೂ ಸಾರ್ವಜನಿಕರು ಹಲವು ರೋಗಗಳಿಗೆ ಬಲಿಯಾಗುವ ಪರಿಸ್ಥಿತಿ ಎದುರಾಗುತ್ತಿದೆಯೆಂದು ಕಲಬುರಗಿ ಜಿಲ್ಲೆಯ ಕರ್ನಾಟಕ ಮಾಲಿನ್ಯ ನಿಯಂತ್ರಣ ಆಡಳಿತ ಮಂಡಳಿ ಅಧಿಕಾರಿಗಳ ಗಮನಕ್ಕೆ ತಂದರೂ ಕೂಡಾ ಯಾವುದೇ ಪ್ರಯೋಜನವಾಗಿಲ್ಲ” ಎಂದು ಕಳವಳ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಸೇಡಂ ತಾಲೂಕಿನಲ್ಲಿ ಬರುವ ಹಲವು ಸಿಮೆಂಟ್ ಕಾರ್ಖಾನೆಯ ವಿಷಪೂರಿತ ಕೆಮಿಕಲ್ ಹೊಗೆ ಹಾಗೂ ಕಲುಷಿತ ಧೂಳು ಹೆಚ್ಚಾಗಿರುವುದರಿಂದ ಹೊರಗಡೆ ತೆರಳುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಮುಖಕ್ಕೆ ಮಾಸ್ಕ್ ಧರಿಸಿ ತೆರಳಬೇಕೆಂದು ಆಸ್ಪತ್ರೆಯ ವೈದ್ಯರು ಚಿಕಿತ್ಸೆ ಪಡೆಯುವ ಪ್ರತಿಯೊಬ್ಬ ರೋಗಿಗೂ ಸಲಹೆ, ಸೂಚನೆ ನೀಡುತ್ತಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಸರ್ಕಾರದ ನೋಟಿಸ್‌ಗೆ ಬೆಲೆ ನೀಡಲ್ಲ, ಭೂ ಕಬಳಿಕೆ ವಿರುದ್ಧ ನಿಲ್ಲದು: ಆರ್ ಅಶೋಕ್

“ಸಿಮೆಂಟ್ ಕಾರ್ಖಾನೆಯಿಂದ ಸಾರ್ವಜನಿಕರಿಗೆ ನಿತ್ಯ ಉಸಿರಾಟದ ತೊಂದರೆಯಿಂದ ಬದುಕುವುದು ಕಷ್ಟಕಾರಿಯಾಗಿದೆ. ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಸಂಬಂಧಪಟ್ಟ ಮೇಲಧಿಕಾರಿಗಳ ಗಮನಕ್ಕೆ ತಂದು ಬೇಸತ್ತು ಹೋಗಿದ್ದೇವೆ” ಎಂದು ನೋವಿನಿಂದ ಹೇಳಿಕೊಂಡರು.

“ರಾಜಶ್ರೀ ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆ ಆಡಳಿತ ಮಂಡಳಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳೀಯ ಜನರ ಜೀವದ ಜತೆ ಚೆಲ್ಲಾಟವಾಡುತ್ತಿದ್ದಾರೆ” ಎಂದು ಕಿಡಿ ಕಾರಿದರು,

ವರದಿ: ಸುನೀಲ್ ರಾಣಿವಾಲ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಕಲಬುರಗಿಯಲ್ಲಿ ಅ.30ರಿಂದ ನ.1ರವರೆಗೆ ಎಸ್‌ಎಫ್‌ಐ ರಾಜ್ಯ ಸಮ್ಮೇಳನ

ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಸಮ್ಮೇಳನವು...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...