ಕಲಬುರಗಿ | ಓಂನಗರ ಬಳಿ ದುರಂತ; ಬಸ್ ಹತ್ತುತ್ತಿದ್ದ ವ್ಯಕ್ತಿ ಸಾವಿನ ಬಲೆಗೆ

Date:

ನಗರದ ಸೇಡಂ ರಸ್ತೆಯ ಓಂನಗರ ಗೇಟ್ ಬಳಿ ಕೆಕೆಆರ್‌ಟಿಸಿ ಬಸ್ ಹತ್ತುವ ವೇಳೆ ಸಂಭವಿಸಿದ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪ್ರಯಾಣಿಕರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅಶೋಕ ನಗರದ ನಿವಾಸಿ ಪ್ರತಾಪ್ ವಗ್ಗನ್ ಮೃತ ದುರ್ದೈವಿ.

- Advertisement -

ಜೂನ್ 15ರಂದು ಮಧ್ಯಾಹ್ನ ಸೇಡಂ ಕಡೆಗೆ ತೆರಳುತ್ತಿದ್ದ ಕೆಕೆಆರ್‌ಟಿಸಿ ಬಸ್‌ವೊಂದು ತಾಂತ್ರಿಕ ದೋಷದಿಂದ ಓಂನಗರ ಗೇಟ್ ಬಳಿ ನಿಂತಿತ್ತು. ಆ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಹಿಂದಿನಿಂದ ಬಂದ ಮತ್ತೊಂದು ಕೆಕೆಆರ್‌ಟಿಸಿ ಬಸ್‌ಗೆ ಹತ್ತಿಸಿಕೊಳ್ಳುವ ಕಾರ್ಯ ನಡೆಯುತ್ತಿತ್ತು. ಈ ವೇಳೆ ಪ್ರತಾಪ್ ವಗ್ಗನ್ ಹಿಂಬದಿ ಬಾಗಿಲಿನಿಂದ ಬಸ್ ಹತ್ತುತ್ತಿದ್ದಾಗ ಚಾಲಕ ಬಸ್ ಚಲಾಯಿಸಿದ್ದಾನೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಬಸ್ ಚಲಿಸಿದ ಪರಿಣಾಮ ಪ್ರತಾಪ್ ಎರಡು ಬಸ್‌ಗಳ ಮಧ್ಯೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತಾದರೂ, ಅದೇ ದಿನ ರಾತ್ರಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಬಸ್, ಟಂಟಂ ನಡುವೆ ಭೀಕರ ಅಪಘಾತ; ನಾಲ್ವರಿಗೆ ಗಾಯ

ಈ ಕುರಿತು ಮೃತನ ಸಹೋದರ ಸಿದ್ದಣ್ಣ ವಗ್ಗನ್ ನೀಡಿದ ದೂರಿನ ಆಧಾರದ ಮೇಲೆ ಕಲಬುರಗಿ ಸಂಚಾರ ಪೊಲೀಸ್ ಠಾಣೆ-2ರಲ್ಲಿ ಕೆಕೆಆರ್‌ಟಿಸಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

ಹೆಸರಾಯಿತು ಕಲ್ಯಾಣ ಕರ್ನಾಟಕ; ಬದಲಾಗದ ಜನರ ಬದುಕು!

ಕಲ್ಯಾಣ ಕರ್ನಾಟಕ ಪ್ರದೇಶದ ಜನರಿಗೆ ಎರಡು ಸ್ವಾತಂತ್ರ್ಯ ಸಂಭ್ರಮದ ದಿನ. ಒಂದು...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...