ಕಲಬುರಗಿ | ಮೂರು ವರ್ಷದ ಬಾಲಕನ ಬಲಿ ಪಡೆದ ಲಾರಿ, ಪಂಚಾಯಿತಿ ವಿರುದ್ಧ ಜನರ ಆಕ್ರೋಶ

Date:

ಮೂರು ವರ್ಷದ ಬಾಲಕನ ಮೇಲೆ ಲಾರಿ ಹರಿದು ಮೃತಪಟ್ಟ ಘಟನೆ ಚಿಂಚೋಳಿ ತಾಲೂಕಿನ ಕಲ್ಲೂರು ರೋಡ್ ಗ್ರಾಮದಲ್ಲಿ ಸಂಭವಿಸಿದ್ದು, ಗ್ರಾಮ ಪಂಚಾಯಿತಿ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎಂದು ಆರೋಪಿಸಿ ಗ್ರಾಮಸ್ಥರು ಸೋಮವಾರ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

- Advertisement -

ಗ್ರಾಮದ ಪ್ರಕಾಶ್ ಅವರ ಪುತ್ರ ಓಂಕಾರ (3) ಮೃತಪಟ್ಟ ಬಾಲಕ. ಶನಿವಾರ ಸಂಜೆ ಮನೆಯ ಮುಂದಿನ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕನ ಮೇಲೆ ವೇಗವಾಗಿ ಬಂದ ಲಾರಿ ಹರಿದಿದೆ. ಲಾರಿಯ ಚಕ್ರಗಳು ಬಾಲಕನ ಎರಡೂ ಕಾಲುಗಳ ಮೇಲೆ ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಕಲಬುರಗಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‌ಗೆ ಕರೆದೊಯ್ಯುವ ಪ್ರಯತ್ನ ನಡೆಸಿದರೂ ಮಾರ್ಗಮಧ್ಯೆಯೇ ಬಾಲಕ ಮೃತಪಟ್ಟಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮನಿಗೆ ₹150 ಕೋಟಿ, ಸೀತೆಗೆ ₹12 ಕೋಟಿ! ಬಿಗ್...

₹4,000 ಕೋಟಿಯ ಬೃಹತ್ ಬಜೆಟ್‌ನ 'ರಾಮಾಯಣ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಹೊತ್ತಿನಲ್ಲಿ ಚಿತ್ರರಂಗದ ಅದೇ ಹಳೆ ಹಣೆಬರಹವೊಂದು ಚರ್ಚೆಗೆ ಸಿಕ್ಕಿದೆ. ರಾಮನ ಪಾತ್ರಕ್ಕೆ ₹150 ಕೋಟಿ, ರಾವಣನಿಗೆ ₹100 ಕೋಟಿ ಸಂಭಾವನೆ!...

ರಾಮಲೀಲಾ ಮೈದಾನದಲ್ಲಿ ವಿಪಕ್ಷಗಳ ಬಲಪ್ರದರ್ಶನ; ಬೀದಿ ಹೋರಾಟ ಬೇರುಮಟ್ಟದ...

ನವಂಬರ್ 1ರಂದು ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಪ್ರತಿಭಟನಾ ಸಮಾವೇಶವು ಭಾರತೀಯ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ರಾಜಕೀಯ ಮೈಲಿಗಲ್ಲಾಗಿ ದಾಖಲಾಗಿದೆ. ಚುನಾವಣಾ ಆಕ್ರಮ, ಎಸ್‌ಐಆರ್ ಷಡ್ಯಂತ್ರದ ವಿರುದ್ಧ ಮತ್ತು ಮುಖ್ಯ ಚುನಾವಣಾ...

ಮಣಿಪುರವನ್ನು ಜನಾಂಗೀಯ ಘರ್ಷಣೆಯ ದಳ್ಳುರಿಗೆ ತಳ್ಳಿ ಕೈಚೆಲ್ಲಿದೆ ಮೋ-ಶಾ...

ಮ್ಯಾನ್ಮಾರ್‌ನೊಂದಿಗೆ ಸುಮಾರು 400 ಕಿಲೋಮೀಟರ್ ಗಡಿ ಹಂಚಿಕೊಳ್ಳುವ ಈಶಾನ್ಯ ಭಾರತದ ಗಡಿ ರಾಜ್ಯ ಮಣಿಪುರದಲ್ಲಿ ಶತಮಾನಗಳಿಂದ ಬೆಳೆದು ಬಂದಿದ್ದ ಸೌಹಾರ್ದತೆಯ ಬೇರುಗಳನ್ನು ಸಂಪೂರ್ಣವಾಗಿ ಕೊಳೆತು ಹೋಗಲು ಕೇಂದ್ರ ಸರ್ಕಾರ ಬಿಟ್ಟಂತಿದೆ. 2023ರಿಂದ ನಡೆಯುತ್ತಿರುವ...

ಗ್ರಾಮದಲ್ಲಿ ಕುಡಿಯುವ ನೀರಿನ ಕಾಮಗಾರಿಗಾಗಿ ಗ್ರಾಮ ಪಂಚಾಯಿತಿ ವತಿಯಿಂದ ರಸ್ತೆ ಬದಿಯಲ್ಲಿ ಗುಂಡಿ ಅಗೆದು ಮುಚ್ಚದೆ ಹಾಗೆಯೇ ಬಿಡಲಾಗಿತ್ತು. ಕಾಮಗಾರಿಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ಪಂಚಾಯಿತಿ ನಿರ್ಲಕ್ಷ್ಯದಿಂದಲೇ ಬಾಲಕನ ಸಾವಾಗಿದೆ ಎಂದು ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆರೋಪಿಸಿದ್ದಾರೆ.

ಮಗುವಿನ ಸಾವಿನಿಂದ ಆಕ್ರೋಶಗೊಂಡ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಅವರನ್ನು ತಕ್ಷಣ ವರ್ಗಾವಣೆ ಮಾಡಬೇಕು ಹಾಗೂ ಕಾಮಗಾರಿಯಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಿಂದ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಸಾರ್ವಜನಿಕ ಸುರಕ್ಷತೆಯನ್ನು ನಿರ್ಲಕ್ಷಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಗೆ ಆಗ್ರಹ: ಚೌಡಾಪುರ ಹೆದ್ದಾರಿಯಲ್ಲಿ ರೈತರ ಅನಿರ್ದಿಷ್ಟಾವಧಿ ಧರಣಿ

ಅಭಿವೃದ್ಧಿ ಕಾಮಗಾರಿಗಳ ನಿರ್ವಹಣೆಯಲ್ಲಿ ಸುರಕ್ಷತಾ ಕ್ರಮಗಳ ಕೊರತೆಯಿಂದ ಅಮಾಯಕ ಬಾಲಕನ ಜೀವ ಬಲಿಯಾಗಿರುವುದು ಗ್ರಾಮಸ್ಥರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಜನರ ಸಮಸ್ಯೆಗಳಿಗೆ ಪ್ರಜಾಸೇವಾ ಆಂದೋಲನ ಆಯೋಜನೆ: ಸಚಿವ ಸಂತೋಷ ಎಸ್. ಲಾಡ್

"ಪ್ರಜಾಸೇವಾ ಕಾರ್ಯಕ್ರಮಗಳ ಮೂಲಕ ಜಿಲ್ಲಾಡಳಿತದ ಎಲ್ಲಾ ಇಲಾಖೆಗಳ ಅಧಿಕಾರಿಗಳನ್ನು ಗ್ರಾಮ ಪಂಚಾಯತಿ...

ವಿಜಯಪುರ |ಹಾಲಿನ ದರ ಏರಿಕೆ ಹಿಂಪಡೆಯಿರಿ, ಬಸ್ ದರ ಹೆಚ್ಚಳ ಕೈಬಿಡಿ: ಎಎಪಿ ಆಗ್ರಹ

ಹಾಲಿನ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು ಹಾಗೂ ರಾಜ್ಯದ ಸಾರಿಗೆ ಸಂಸ್ಥೆಗಳ...

ಹಾವೇರಿ | ಕಾನೂನು ಪದವೀಧರರ ತರಬೇತಿಗಾಗಿ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹಾವೇರಿ ಜಿಲ್ಲೆಯ ಹಿಂದುಳಿದ ವರ್ಗಗಳ ಕಾನೂನು...

ವಿಜಯಪುರ | ಗಾಂಧಿ ಚಿಂತನೆಗಳು ಇಂದಿಗೂ ಪ್ರಸ್ತುತ: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ ಮತ್ತು ಮಾನವೀಯ ಮೌಲ್ಯಗಳ ಮೂಲಕ ಜಗತ್ತಿಗೆ ಶಾಂತಿ ಹಾಗೂ...