ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ಕಾಳಗಿ–ಕೊಡದೂರ ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ.
ಕಾಳಗಿ ತಾಲ್ಲೂಕಿನ ಮಂಗಲಗಿ ಗ್ರಾಮದ ದಶರಥ ಪೀರಪ್ಪ ಮಡಿವಾಳ (28) ಮೃತಪಟ್ಟ ಸವಾರ. ಅವರ ದೇಹ ಬೆಂಕಿಗೆ ಸುಟ್ಟು ಕರಕಲಾಗಿದೆ. ಸಾಸರಗಾಂವ ಗ್ರಾಮದ ಮಲ್ಲಪ್ಪ ಅಣ್ಣಪ್ಪ ಪೂಜಾರಿ (35), ಅವಿನಾಶ ಮಲ್ಲಪ್ಪ (2) ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.
ಮೃತ ದಶರಥ ಅವರ ಬೈಕ್ ಕಾಳಗಿ ಕಡೆಯಿಂದ ಮಂಗಲಗಿ ಕಡೆಗೆ ಹಾಗೂ ಮಲ್ಲಪ್ಪ ಅವರ ಬೈಕ್ ಕೊಡದೂರ ಕಡೆಯಿಂದ ಕಾಳಗಿ ಕಡೆಗೆ ಬರುತ್ತಿತ್ತು. ಮಾರ್ಗಮಧ್ಯೆ ಡಿಕ್ಕಿ ಸಂಭವಿಸಿ ಬೆಂಕಿ ಹೊತ್ತಿಕೊಂಡಿದೆ. ದಶರಥ ಸಾವನ್ನಪ್ಪಿದರೆ, ಇನ್ನೊಂದು ಬೈಕಿನಲ್ಲಿದ್ದ ಅವಿನಾಶ ಮತ್ತು ಮಲ್ಲಪ್ಪ ಗಾಯಗೊಂಡಿದ್ದಾರೆ.
ಗಾಯಾಳುಗಳಿಗೆ ಕಾಳಗಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಕಲಬುರಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಕಾಳಗಿ ಸಿಪಿಐ ಜಗದೇವಪ್ಪ ಪಾಳಾ, ಪಿಎಸ್ಐ ತಿಮ್ಮಯ್ಯ ಬಿ.ಕೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕಾಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂಓದಿ : ಎಸ್‍ಎಸ್‍ಎಲ್‍ಸಿ ಪತ್ರಿಕೆ ಮರು ಮೌಲ್ಯಮಾಪನ : ರಾಜ್ಯಕ್ಕೆ ಮೂರನೇ ರ‍್ಯಾಂಕ್ ಪಡೆದ ವಿದ್ಯಾರ್ಥಿನಿ