ಕಲಬುರಗಿ | ಬೈಕ್‌ಗಳ ಮುಖಾಮುಖಿ ಡಿಕ್ಕಿಯಿಂದ ಬೆಂಕಿ : ಓರ್ವ ಸವಾರ ಸಜೀವ ದಹನ

Date:

ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ಕಾಳಗಿ–ಕೊಡದೂರ ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ.

- Advertisement -

ಕಾಳಗಿ ತಾಲ್ಲೂಕಿನ ಮಂಗಲಗಿ ಗ್ರಾಮದ ದಶರಥ ಪೀರಪ್ಪ ಮಡಿವಾಳ (28) ಮೃತಪಟ್ಟ ಸವಾರ. ಅವರ ದೇಹ ಬೆಂಕಿಗೆ ಸುಟ್ಟು ಕರಕಲಾಗಿದೆ. ಸಾಸರಗಾಂವ ಗ್ರಾಮದ ಮಲ್ಲಪ್ಪ ಅಣ್ಣಪ್ಪ ಪೂಜಾರಿ (35), ಅವಿನಾಶ ಮಲ್ಲಪ್ಪ (2) ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಿಜೆಐ ವಿರುದ್ಧ ವಕೀಲರ ಆಕ್ರೋಶ: ನ್ಯಾಯಾಂಗದ ಘನತೆಗೆ ಧಕ್ಕೆ...

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ವಿರುದ್ಧ ನ್ಯಾಯಾಲಯದಲ್ಲೇ ವಕೀಲರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ನ್ಯಾಯಾಂಗದ ಘನತೆ, ನ್ಯಾಯಾಧೀಶರ ನಿಷ್ಪಕ್ಷಪಾತತೆ ಹಾಗೂ ಜನಸಾಮಾನ್ಯರಿಗೆ ನ್ಯಾಯಾಂಗದ ಮೇಲಿರುವ ವಿಶ್ವಾಸದ ಕುರಿತು ಮಹತ್ವದ ಚರ್ಚೆಗೆ...

ಷೇರುದಾರರ ಇಂದಿನ ಜಾಗತಿಕ ಮಂತ್ರ- ‘ಅಮೆರಿಕವನ್ನು ನಂಬಿ ಹಣ...

ಅಮೆರಿಕನ್ನರು ಮಾತ್ರವಲ್ಲ, ವಿದೇಶಗಳ ಸಾಮಾನ್ಯ ಜನರೂ ಮುಗಿಬಿದ್ದು ಅಮೆರಿಕದ ಷೇರುಗಳನ್ನು ಕೊಳ್ಳುತ್ತಿದ್ದಾರೆ. ಅಮೆರಿಕದ ರಾಜಕೀಯ ನಾಯಕತ್ವದ ಬಗ್ಗೆ ಅವರಿಗೆ ಅಸಮಾಧಾನವಿದ್ದಿರಬಹುದು. ಆದರೆ ಅಮೆರಿಕನ್ ಕಂಪನಿಗಳ ಷೇರುಗಳ ಮೇಲೆ ಮಾತ್ರ ಅವರೆಲ್ಲರಿಗೂ ವಿಪರೀತ ವ್ಯಾಮೋಹ...

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಮೃತ ದಶರಥ ಅವರ ಬೈಕ್ ಕಾಳಗಿ ಕಡೆಯಿಂದ ಮಂಗಲಗಿ ಕಡೆಗೆ ಹಾಗೂ ಮಲ್ಲಪ್ಪ ಅವರ ಬೈಕ್ ಕೊಡದೂರ ಕಡೆಯಿಂದ ಕಾಳಗಿ ಕಡೆಗೆ ಬರುತ್ತಿತ್ತು. ಮಾರ್ಗಮಧ್ಯೆ ಡಿಕ್ಕಿ ಸಂಭವಿಸಿ ಬೆಂಕಿ ಹೊತ್ತಿಕೊಂಡಿದೆ. ದಶರಥ ಸಾವನ್ನಪ್ಪಿದರೆ, ಇನ್ನೊಂದು ಬೈಕಿನಲ್ಲಿದ್ದ ಅವಿನಾಶ ಮತ್ತು ಮಲ್ಲಪ್ಪ ಗಾಯಗೊಂಡಿದ್ದಾರೆ.

ಗಾಯಾಳುಗಳಿಗೆ ಕಾಳಗಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಕಲಬುರಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಕಾಳಗಿ ಸಿಪಿಐ ಜಗದೇವಪ್ಪ ಪಾಳಾ, ಪಿಎಸ್ಐ ತಿಮ್ಮಯ್ಯ ಬಿ.ಕೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕಾಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂಓದಿ : ಎಸ್‍ಎಸ್‍ಎಲ್‍ಸಿ ಪತ್ರಿಕೆ ಮರು ಮೌಲ್ಯಮಾಪನ : ರಾಜ್ಯಕ್ಕೆ ಮೂರನೇ ರ‍್ಯಾಂಕ್ ಪಡೆದ ವಿದ್ಯಾರ್ಥಿನಿ

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಒಕ್ಕಲಿಗ ಸಂಘದಲ್ಲಿ ಬದಲಾವಣೆ ಆಗಬೇಕಿದೆ, ಆಡಳಿತದಲ್ಲಿ ಪಾರದರ್ಶಕತೆ ಬೇಕಿದೆ: ಹರೀಶ್‌ ರೆಡ್ಡಿ ಆರೋಪ

ಜಿಲ್ಲೆಯ ಹೆಮ್ಮೆಯಾದ ಚಿಕ್ಕಬಳಾಪುರ ತಾಲೂಕು ಒಕ್ಕಲಿಗರ ಸಂಘವು ಕೆಲವೇ ಬಲಾಢ್ಯರ ಕಪಿಮುಷ್ಟಿಗೆ...

ಉಡುಪಿ | ಕಿನ್ನಿಮೂಲ್ಕಿಯಲ್ಲಿ ಮಾನಸಿಕ ಅಸ್ವಸ್ಥ ಯುವಕನಿಂದ ತಡರಾತ್ರಿ ದಾಂಧಲೆ: ಸ್ಥಳೀಯರಲ್ಲಿ ಆತಂಕ

ಮಾನಸಿಕ ಅಸ್ವಸ್ಥ ಯುವಕನೊಬ್ಬ ತಡರಾತ್ರಿ ಉಗ್ರವಾಗಿ ವರ್ತಿಸಿ ದಾಂಧಲೆ ನಡೆಸಿದ ಪರಿಣಾಮ...

‘ಕನ್ನಡದೂರು’ ಜಾತ್ರೆಗೆ ಮುಖ್ಯಮಂತ್ರಿಗಳಿಗೆ ಆಹ್ವಾನ

ನಾಡಿನ ಏಕೀಕರಣದ ಆಶಯವನ್ನು ಸಾರುವ ಉದ್ದೇಶದಿಂದ 'ನಾವು ದ್ರಾವಿಡ ಕನ್ನಡಿಗರು' ಚಳುವಳಿಯ...

ಒಂದು ವಾರದೊಳಗೆ ರೈತರಿಗೆ ಸಾಲ ಮಂಜೂರು ಮಾಡದಿದ್ದರೆ ಹೋರಾಟ: ಹೊಸೂರ್ ಕುಮಾರ್

ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ...