ಆಟವಾಡುತ್ತಿದ್ದಾಗ ನೀರಿನ ಸಂಪ್‌ನಲ್ಲಿ ಬಿದ್ದು ಇಬ್ಬರು ಮಕ್ಕಳು ಸಾವನಪ್ಪಿರುವ ಘಟನೆ ಜೇವರ್ಗಿ ತಾಲ್ಲೂಕಿನ ಕೋಳಕೂರ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.
ಗಿರೀಶ್ ತಿಪ್ಪಣ್ಣ (3) ಹಾಗೂ ತಿಪ್ಪಣ್ಣ ಅವರ ಸಹೋದರಿಯ ಮಗಳು ಶ್ರೇಷ್ಠಾ ಮಹೇಶ್ (2) ಮೃತಪಟ್ಟವರು.
ಬೆಳಿಗ್ಗೆ ಉಪಹಾರ ಸೇವಿಸಿ ಆಟವಾಡುತ್ತಿದ್ದ ಇಬ್ಬರೂ ಮಕ್ಕಳು ಕಣ್ಮರೆಯಾಗಿಯಾಗಿದ್ದರು. ಪೋಷಕರು ಎಷ್ಟೇ ಹುಡುಕಿದರೂ ಸಿಕ್ಕಿರಲಿಲ್ಲ. ಗಾಬರಿಗೊಂಡ ಪೋಷಕರು ಗ್ರಾಮದ ಸಿದ್ದಬಸವೇಶ್ವರ ದೇವಸ್ಥಾನದ ಮೈಕ್ ಮೂಲಕ ಮಕ್ಕಳು ಕಾಣೆಯಾಗಿರುವ ಬಗ್ಗೆ ಗ್ರಾಮಸ್ಥರಿಗೆ ವಿಷಯ ಮುಟ್ಟಿಸಿದರು. ಕೊನೆಗೆ ಪೊಲೀಸರು ಸಂಪ್ ತೆರೆದು ನೋಡಿದಾಗ ಮಕ್ಕಳು ಬಿದ್ದಿರುವುದು ಗೊತ್ತಾಗಿದೆ.
ಘಟನಾ ಸ್ಥಳಕ್ಕೆ ಪಿಎಸ್ಐ ಗಜಾನಂದ ಬಿರಾದಾರ, ಎಎಸ್ಐ ತಿಮ್ಮಣ್ಣ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು. ಈ ಸಂಬಂಧ ಜೇವರ್ಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.