ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ಹಾಗೂ ಹನಿಟ್ರ್ಯಾಪ್ ದಂತಹ ಪ್ರಕರಣಗಳು ಜತೆಗೆ ಕೈದಿಗಳ ಹೊಡೆದಾಟದ ಹಿನ್ನೆಲೆಯಲ್ಲಿ ಜೈಲಿನ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಕಲಬುರಗಿ ಸೆಂಟ್ರಲ್ ಜೈಲಿನ ಇಬ್ಬರು ಅಧಿಕಾರಿಗಳಾದ ಸೈನಾಜ್ ನೀಗೆವಾನ್ ಮತ್ತು ಪಾಂಡುರಂಗ ಹರವಾಳ ಅಮಾನತ್ತುಗೊಂಡಿದ್ದಾರೆ. ಕರ್ತವ್ಯ ಲೋಪದಡಿ ಕಾರಾಗೃಹ ಇಲಾಖೆಯ ಎಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶಿಸಿದ್ದಾರೆ.
ಕಾರಾಗೃಹದಲ್ಲಿ ಮೊಬೈಲ್ ಬಳಕೆ ಹಾಗೂ ಐಷಾರಾಮಿ ಜೀವನ ಬಗ್ಗೆ ಜತೆಗೆ ಹನಿಟ್ಯ್ರಾಪ್ ಕುರಿತಾದ ವರದಿಗಳು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಬಳಿಕ ಎಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆಗೆ ಆದೇಶಿಸಿದ್ದರು. ಎಸ್ಪಿ ಯಶೋಧಾ ವಂಟಗೋಡಿ ಸಹ ಭೇಡಿ ನೀಡಿದ್ದರು.
ಈ ಸುದ್ದಿ ಓದಿದ್ದೀರಾ? ಬೀದರ್ | ʼವಚನ ದರ್ಶನʼ ಕೃತಿಯಿಂದ ವಚನ ಸಾಹಿತ್ಯ ನಿರ್ನಾಮಕ್ಕೆ ಯತ್ನ : ಆರ್.ಕೆ.ಹುಡಗಿ
ಕರ್ತವ್ಯ ಲೋಪಕ್ಕೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವುದಿಲ್ಲ ಎಂದು ಹೇಳಿದ್ದರು. ಅವರ ಹೇಳಿಕೆಯಂತೆ ಇಬ್ಬರು ಜೈಲಾಧಿಕಾರಿಗಳ ತಲೆದಂಡವಾಗಿದೆ. ಜೈಲಿನಲ್ಲಿ ನಡೆದ ಸರಣಿ ಪ್ರಕರಣ ಕುರಿತು ತನಿಖೆ ನಡೆಯುತ್ತಿದ್ದು, ಇನ್ನಷ್ಟು ಅಧಿಕಾರಿಗಳ ತಲೆದಂಡ ಆಗುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದು ಬಂದಿದೆ.