ಕಲಬುರಗಿ | ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಭಾರತಕ್ಕೆ ಭೇಟಿ; ಕೆಪಿಆರ್‌ಎಸ್‌ ವಿರೋಧ

Date:

ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಭಾರತ ಭೇಟಿಯನ್ನು ವಿರೋಧಿಸಿ, ಭಾರತವು ಮಾರಾಟಕ್ಕಿಲ್ಲ ಎಂಬ ಬಲವಾದ ಸಂದೇಶ ರವಾನಿಸಲು ಕರ್ನಾಟಕ ಪ್ರಾಂತ ರೈತ ಸಂಘ(KPRS) ಕಲಬುರಗಿ ಜಿಲ್ಲಾ ಸಮಿತಿಯಿಂದ ಏಪ್ರಿಲ್ 21ರಂದು ಗ್ರಾಮ, ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿದರು.

- Advertisement -

ಡೊನಾಲ್ಡ್ ಟ್ರಂಪ್ ಭಾರತದ ವಿರುದ್ಧ ಸಾರಿರುವ ಸುಂಕ ಸಮರದ ಬೆದರಿಕೆ ಮೂಲಕ ಭಾರತದ ಕೃಷಿ, ಹೈನುಗಾರಿಕೆ, ಮೀನುಗಾರಿಕೆ ಮಾರುಕಟ್ಟೆಯನ್ನು ಅಮೆರಿಕ ದೇಶದ ಉತ್ಪನ್ನಗಳಿಗೆ ಸುಂಕ ರಹಿತವಾಗಿ ಮುಕ್ತಗೊಳಿಸುವಂತೆ ಒತ್ತಡ ಹಾಕುತ್ತಿದೆ. ಈ ಹಿನ್ನೆಲೆಯಲ್ಲಿ ಅಮೆರಿಕ ಉಪಾಧ್ಯಕ್ಷ ಭೇಟಿ ಮತ್ತು ವಾಣಿಜ್ಯ ಮಾತುಕತೆ ಭಾರತದ ಕೋಟ್ಯಂತರ ರೈತಾಪಿ ಸಮುದಾಯಕ್ಕೆ ಮರಣ ಶಾಸನವಾಗಲಿದೆ. ಅದ್ದರಿಂದ ಈ ಭೇಟಿಗೆ ತೀವ್ರ ವಿರೋಧ ವ್ಯಕ್ತಪಡಿಸಿ ಟ್ರಂಪ್-ವ್ಯಾನ್ಸ್ ಪ್ರತಿಕೃತಿ ದಹಿಸಿ ತೀವ್ರ ಪ್ರತಿಭಟನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ದೇಶದಲ್ಲೇ ಎರಡನೆ ಅತಿ ದೊಡ್ಡ ಹಾಲು ಉತ್ಪಾದಕ ರಾಜ್ಯವಾಗಿರುವ ಕರ್ನಾಟಕದ ಸುಮಾರು ಹತ್ತಕ್ಕೂ ಹೆಚ್ಚು ಜಿಲ್ಲೆಗಳ ರೈತ ಕುಟುಂಬಗಳು ತಮ್ಮ ಜೀವನಾಧಾರಕ್ಕಾಗಿ ಹೈನುಗಾರಿಕೆಯನ್ನು ಅವಲಂಬಿಸಿವೆ. ತೊಗರಿ, ಸೋಯಾಬೀನ್, ಹೆಸರು, ಉದ್ದು, ಎಳ್ಳು, ಕಡಲೆ, ಬಟಾಣಿ ಸೇರಿಸಂತೆ ಮುಂತಾದ ದ್ವಿದಳ ಧಾನ್ಯಗಳು ಹಾಗೂ ಮೆಕ್ಕೆಜೋಳ, ಎಥೆನಾಲ್ ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಪ್ರಮುಖ ಬೆಳೆಗಳಾಗಿವೆ. ಅದೇ ರೀತಿ ಕರಾವಳಿ ಕರ್ನಾಟಕದ ಪ್ರಮುಖ ಜೀವನೋಪಾಯ ಮೀನುಗಾರಿಕೆ ಕೃಷಿಯನ್ನು ಅವಲಂಬಿಸಿದೆ” ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರು ಹೇಳಿದರು.

“ಈ ಎಲ್ಲ ಕೃಷಿ ಉತ್ಪನ್ನಗಳು ಈಗಾಗಲೇ ಬೆಂಬಲ ಬೆಲೆ ಅಭಾವ ಮತ್ತು ಉತ್ಪಾದನಾ ವೆಚ್ಚದ ಹೆಚ್ಚಳದಿಂದ ಕಷ್ಟ ಹಾಗೂ ನಷ್ಟವನ್ನು ಅನುಭವಿಸುತ್ತಿವೆ. ಇಂತಹ ಸಂದರ್ಭದಲ್ಲಿ ಈ ವಲಯಗಳು ಸೇರಿದಂತೆ ವಿವಿಧ ರೀತಿಯ ತೋಟಾಗಾರಿಕೆ ಉತ್ಪನ್ನಗಳ ಸುಂಕರಹಿತ ಅಮದು ಈ ಎಲ್ಲ ರೈತರನ್ನು ಸಂಪೂರ್ಣವಾಗಿ ದಿವಾಳಿಯೆಬ್ಬಿಸಿ ರಾಜ್ಯದ ರೈತರನ್ನು ನಿರುದ್ಯೋಗ ಮತ್ತು ಸಾಲಬಾಧೆಗೆ ಸಿಲುಕಿಸಲಿದೆ. ವಿಶೇಷವಾಗಿ ರಾಜ್ಯದ ಹೈನುಗಾರಿಕೆಗೆ ಮತ್ತು ಕರ್ನಾಟಕ ಹಾಲು ಒಕ್ಕೂಟ(KMF)ಕ್ಕೆ ಈ ಅಮದು ಸುಂಕ ನಿರ್ಧಾರ ಶವಪಟ್ಟಿಗೆಗೆ ಹೊಡೆಯುವ ಕೊನೆ ಮೊಳೆಯಂತಾಗಲಿದೆ. ಹಾಗಾಗಿ ಯಾವುದೇ ಒತ್ತಡಕ್ಕೂ ಮಣಿಯದೆ ಹೈನುಗಾರಿಕೆ, ಮೀನುಗಾರಿಕೆ, ತೋಟಗಾರಿಕೆ ಸೇರಿದಂತೆ ಒಟ್ಟಾರೆ ಕೃಷಿಯನ್ನು ವಾಣಿಜ್ಯ ಮಾತುಕತೆಗಳಿಂದ ಹೊರಗಿಡಬೇಕು” ಎಂದು ನರೇಂದ್ರ ಮೋದಿ ಸರ್ಕಾರವನ್ನು ಆಗ್ರಹಿಸಿದರು.

ಅಮೆರಿಕದಲ್ಲಿ ಶೇ.70ರಷ್ಟು ಮಾರುಕಟ್ಟೆ ಹೊಂದಿದ್ದ ಚೀನಾ, ಕೆನಡಾ, ಮೆಕ್ಸಿಕೋ ಮುಂತಾದ ದೇಶಗಳು ಅಮೆರಿಕದ ಸುಂಕ ಸಮರದ ಬೆದರಿಕೆಗೆ ಯಾವುದೇ ರೀತಿಯಲ್ಲಿ ಮಣಿಯದೇ ತಿರುಗೇಟು ನೀಡಿದೆ. ಆದರೆ ಅಮೆರಿಕದ ಜತೆ ವ್ಯಾಪಾರದ ಕೊರತೆ ಇರುವ ಭಾರತ ಇಂತಹ ದಿಟ್ಟ ನಿಲುವು ತೆಗೆದುಕೊಳ್ಳುವಲ್ಲಿ ವಿಫಲವಾಗಿದೆ. ಸ್ವತಃ ನರೇಂದ್ರ ಮೋದಿರವರ ಸಮ್ಮುಖದಲ್ಲೇ ಭಾರತವನ್ನು ಸುಂಕ ರಾಜ ಎಂದು ಡೋನಾಲ್ಡ್ ಟ್ರಂಪ್ ಅಣಕಿಸಿ ಸ್ವಾಭಿಮಾನಕ್ಕೆ ಧಕ್ಕೆ ತಂದಾಗಲೂ, ಭಾರತದ ವಲಸೆ ಕಾರ್ಮಿಕರಿಗೆ ಕೋಳ ತೊಡಿಸಿ ಅಮಾನವೀಯವಾಗಿ ನಡೆಸಿಕೊಂಡಾಗಲೂ ಸೂಕ್ತ ಪ್ರತಿಭಟನೆ ವ್ಯಕ್ತಪಡಿಸಿಲ್ಲ. ಕೆಲವೇ ಕೆಲವು ದೊಡ್ಡ ಉದ್ಯಮಿಗಳ ರಪ್ತು ವ್ಯವಹಾರಕ್ಕಾಗಿ, ಬಹುರಾಷ್ಟ್ರೀಯ ಕಂಪೆನಿಗಳ ಹಿತಾಸಕ್ತಿಗಾಗಿ ಕೋಟ್ಯಂತರ ರೈತರ ಜೀವನೋಪಾಯವನ್ನು ಸರ್ವನಾಶ ಮಾಡುವ ಮಾತುಕತೆಗಳು ಆಹಾರ ಭದ್ರತೆ, ಆಹಾರ ಸ್ವಾವಲಂಬನೆ ಅಂತಿಮವಾಗಿ ದೇಶದ ಸಾರ್ವಭೌಮತ್ವವನ್ನು ಅಪಾಯಕಾರಿ ಪರಿಸ್ಥಿತಿಗೆ ಕೊಂಡೊಯ್ಯಲಿವೆ” ಎಂದು ತಿಳಿಸಿದರು.

ವ್ಯಾನ್ಸ್ ಭೇಟಿ ಹಿನ್ನೆಲೆಯಲ್ಲಿ ಅಮೆರಿಕ ವಾಣಿಜ್ಯ ಕಾರ್ಯದರ್ಶಿ ಹೋವರ್ಡ್ ಲುಟ್ನಿಕ್ ಅವರು ಕೃಷಿ ಮಾರುಕಟ್ಟೆ ಮುಕ್ತಗೊಳಿಸುವುದೇ ಭಾರತದ ಮಾತುಕತೆಯಲ್ಲಿ ಪ್ರಮುಖ ಅಧ್ಯತಾ ವಿಷಯವಾಗಿದ್ದು ಯಾವುದೇ ಸುಂಕ ಹಾಗೂ ಇತರೆ ತಡೆಗಳನ್ನು ನಿವಾರಿಸಬೇಕೆಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಅದ್ದರಿಂದ ಅಮೆರಿಕ ಉಪಾಧ್ಯಕ್ಷರ ಜತೆ ವಾಣಿಜ್ಯ ಮಾತುಕತೆಗಳನ್ನು ರದ್ದುಪಡಿಸಬೇಕು. ಅಮೆರಿಕದ ಸುಂಕ ಸಮರದಿಂದ ಉಂಟಾಗುವ ಪರಿಸ್ಥಿತಿಯನ್ನು ನಿಭಾಯಿಸಲು ಕೂಡಲೇ ಸಂಸತ್ತು ಹಾಗೂ ಶಾಸನ ಸಭೆಗಳಲ್ಲಿ ಚರ್ಚಿಸಿ ಸೂಕ್ತ ಮಾರ್ಗೋಪಾಯಗಳನ್ನು ಕೈಗೊಳ್ಳಬೇಕು” ಎಂದು ಕರ್ನಾಟಕ ಪ್ರಾಂತ ರೈತ ಸಂಘ(KPRS) ಕಲಬುರಗಿ ಜಿಲ್ಲಾ ಸಮಿತಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಆಗ್ರಹಿಸಿದೆ.

ಕಲಬುರಗಿಯಲ್ಲಿ ಮೇ 20ರಂದು ಕರ್ನಾಟಕ ಪ್ರಾಂತ ರೈತ ಸಂಘ, ಕರ್ನಾಟಕ ರಾಜ್ಯ ರೈತ ಸಂಘ, ಅಖಿಲ ಭಾರತ ಕಿಸಾನ್ ಸಭಾ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ, ದಲಿತ ಸಂಘಟನೆಗಳು, ಕಾರ್ಮಿಕ ಸಂಘಗಳು, ಸಂಯುಕ್ತ-ಹೋರಾಟ ಕರ್ನಾಟಕ
ಜಂಟಿಯಾಗಿ ಮುಷ್ಕರ ನಡೆಸಲಿವೆ.

ಈ ಸುದ್ದಿ ಓದಿದ್ದೀರಾ? ಹವಾಮಾನ ವೈಪರೀತ್ಯ | ರಾಜ್ಯದ ಹಲವೆಡೆ ಭಾರೀ ಮಳೆ; ಬೆಳೆಹಾನಿಯಿಂದ ಕಂಗಾಲಾದ ರೈತರು

ರೈತರ ಸಾಲ ಮನ್ನ, ರೈತರ ಬೆಳೆಗಳಿಗೆ ಬೆಂಬಲ ಬೆಲೆ(MSP) ಕಾನೂನು ಜಾರಿ, ರೈತರ ಆತ್ಮಹತ್ಯೆಯ ತಡೆಗೆ ಕ್ರಮ, ವಿದ್ಯುತ್ ಖಾಸಗೀಕರಣಕ್ಕೆ ವಿರೋಧ, ವಿದ್ಯುತ್ ದರ ಏರಿಕೆ ತಡೆ, ಪೆಟ್ರೋಲ್, ಡೀಸೆಲ್‌, ಅಡುಗೆ ಅನಿಲ, ಹಾಲಿನ ದರ, ಟೋಲ್ ನಾಕ್ ದರ ಏರಿಕೆ ಖಂಡಿಸಿ ಅಖಿಲ ಭಾರತ ಮಹಾ ಮುಷ್ಕರ ನಡೆಯಲಿದೆ.

ಕೋರ್ ಗ್ರೀನ್ ಸಕ್ಕರೆ ಕಾರ್ಖಾನೆ, NSK ಭೂಸನೂರು ಸಕ್ಕರೆ ಕಾರ್ಖಾನೆ, ನಾರಂಜಾ ಸಕ್ಕರೆ ಕಾರ್ಖಾನೆ, ಕಬ್ಬು ಬೆಳೆಗಾರರ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ನುರಿಸಿದ ಕಬ್ಬು ಬೆಳೆಗಾರರ ಬಾಕಿ ಹಣ ಕೊಡಬೇಕು. ಖಾಸಗೀಕರಣ ವಿರೋಧಿಸಿ ಕಾರ್ಮಿಕರ ಕನಿಷ್ಠ ವೇತನ ಜಾರಿಗಾಗಿ ಕಾರ್ಮಿಕರ ಕಾಯಮಾತಿಗಾಗಿ ಆಗ್ರಹಿಸಲಾಗುವುದೆಂದು KPRS ಕಲಬುರಗಿ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಕಲಬುರಗಿಯಲ್ಲಿ ಅ.30ರಿಂದ ನ.1ರವರೆಗೆ ಎಸ್‌ಎಫ್‌ಐ ರಾಜ್ಯ ಸಮ್ಮೇಳನ

ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಸಮ್ಮೇಳನವು...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...