ಕಲಬುರಗಿ | ವಚನ ಸಾಹಿತ್ಯ, ಸಂವಿಧಾನ ಒಂದೇ ನಾಣ್ಯದ ಎರಡು ಮುಖಗಳು: ಡಾ. ಶಿವರಂಜನ್ ಸತ್ಯಂಪೇಟೆ

Date:

ವಚನ ಸಾಹಿತ್ಯ ಮತ್ತು ಭಾರತದ ಸಂವಿಧಾನ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು, ಎರಡರಲ್ಲೂ ಸಮಾನತೆ, ಭ್ರಾತೃತ್ವ, ಲಿಂಗ ಸಮಾನತೆ, ಶಿಕ್ಷಣ ಹಾಗೂ ಸೌಹಾರ್ದತೆಯ ಮೌಲ್ಯಗಳು ಅಡಕವಾಗಿವೆ ಎಂದು ಡಾ. ಶಿವರಂಜನ್ ಸತ್ಯಂಪೇಟೆ ಹೇಳಿದರು.

- Advertisement -

ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಕಲಬುರಗಿ ವಿಭಾಗದ ಪ್ರಥಮ ವಚನ ಸಾಹಿತ್ಯ ಸಮ್ಮೇಳನ ಮತ್ತು ‘ವಚನಪ್ರಿಯರ ಸಮಾಗಮ’ ಕಾರ್ಯಕ್ರಮವನ್ನು ಭಾನುವಾರ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಭಾರತದ ಸಂವಿಧಾನ ನಮ್ಮ ಪವಿತ್ರ ಗ್ರಂಥವಾಗಿದೆ. ವಚನಗಳು ಬದುಕಿನ ಸಾರ್ಥಕತೆಯ ಸಾರವಾಗಿದ್ದು, ಸಂವಿಧಾನ ಜಾರಿಗೆ ಬರುವುದಕ್ಕೂ ಹಲವು ಶತಮಾನಗಳ ಹಿಂದೆಯೇ ಬಸವಣ್ಣನವರು ಎಲ್ಲರೂ ಸಮಾನರು ಎಂಬ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಪ್ರತಿಪಾದಿಸಿದ್ದರು” ಎಂದು ಹೇಳಿದರು.

“ಅನುಭವ ಮಂಟಪವನ್ನು ಪ್ರಜಾಪ್ರಭುತ್ವದ ಮಾದರಿಯ ವೇದಿಕೆಯನ್ನಾಗಿ ರೂಪಿಸಿದ್ದ ಬಸವಣ್ಣನವರ ವಚನಗಳಲ್ಲಿ ಸಂವಿಧಾನದ ಆಶಯಗಳು ಅಡಕವಾಗಿವೆ. ಬಸವಧರ್ಮವು ಪ್ರಗತಿಪರ ಧರ್ಮವಾಗಿದ್ದು, ಲಿಂಗ ಸಮಾನತೆ ಸೇರಿದಂತೆ ಸಮಾನತೆಯ ಮೌಲ್ಯಗಳನ್ನು ಪ್ರತಿಪಾದಿಸಿದೆ” ಎಂದರು.

“ವಚನ ಸಾಹಿತ್ಯದಲ್ಲಿ 31ಕ್ಕೂ ಹೆಚ್ಚು ಮಹಿಳಾ ವಚನಕಾರರ ಕೊಡುಗೆ ಇದೆ. ಕಾಯಕವನ್ನು ಎಲ್ಲರೂ ಮಾಡಬೇಕು ಎಂಬ ಸಂದೇಶವನ್ನು ಬಸವಣ್ಣನವರು ನೀಡಿದ್ದರು. ಶಿಕ್ಷಣವು ಅಭ್ಯಾಸಿಯ ಕೈವಶವಾಗಿದ್ದು, ದೇಶದ ಮಹಾನ್ ಶಿಕ್ಷಣ ತಜ್ಞರಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಪ್ರಮುಖರು” ಎಂದು ತಿಳಿಸಿದರು.

“ವಚನ ಸಾಹಿತ್ಯ ಮತ್ತು ಮಹಿಳಾ ಸಂವೇದನೆ’ ವಿಷಯ ಮಂಡಿಸಿದ ಡಾ. ವಿದ್ಯಾವತಿ ಬಲ್ಲೂರ ಅವರು, ಹೊಸಗನ್ನಡ ಸಾಹಿತ್ಯದಲ್ಲಿ ದಲಿತ, ಮಹಿಳಾ ಹಾಗೂ ಮುಸ್ಲಿಂ ಸಂವೇದನೆಗಳು ಪ್ರಮುಖ ಸ್ಥಾನ ಪಡೆದಿವೆ” ಎಂದು ಹೇಳಿದರು.

“ಮಹಿಳೆಯರು ತಮ್ಮ ಜೀವನದಲ್ಲಿ ಅನುಭವಿಸುವ ನೋವು, ಹಿಂಸೆ, ಅತ್ಯಾಚಾರ ಹಾಗೂ ದೌರ್ಜನ್ಯವನ್ನು ಬರವಣಿಗೆಯ ಮೂಲಕ ಅಭಿವ್ಯಕ್ತಪಡಿಸುವುದೇ ಮಹಿಳಾ ಸಂವೇದನೆಯಾಗಿದೆ. 12ನೇ ಶತಮಾನದಲ್ಲಿಯೇ ಶರಣರು ಮಹಿಳಾ ಸಂವೇದನೆ ಕುರಿತು ಗಂಭೀರವಾಗಿ ಚಿಂತಿಸಿದ್ದರು” ಎಂದು ಹೇಳಿದರು.

“ತಳಮಟ್ಟದ ಮಹಿಳೆಯರೂ ತಮ್ಮ ಅನುಭವಗಳನ್ನು ಅತ್ಯಂತ ಮಾರ್ಮಿಕವಾಗಿ ಅಭಿವ್ಯಕ್ತಪಡಿಸಿದ್ದಾರೆ. ಶರಣರು ತಮ್ಮ ವಚನಗಳ ಮೂಲಕ ಮಹಿಳಾ ಸಮಾನತೆಯನ್ನು ಪ್ರತಿಪಾದಿಸಿದ್ದು, ಲಿಂಗ ಸಮಾನತೆಯ ಸಂದೇಶವನ್ನು ವಚನ ಸಾಹಿತ್ಯದ ಮೂಲಕ ಸಮಾಜಕ್ಕೆ ನೀಡಿದ್ದಾರೆ” ಎಂದು ತಿಳಿಸಿದರು.

“ಅಲ್ಲಮಪ್ರಭುಗಳು ತಮ್ಮ ವಚನಗಳಲ್ಲಿ ಹೆಣ್ಣೇ ಮಾಯೆಯಲ್ಲ, ಮನುಷ್ಯನ ಮನಸ್ಸಿನ ಆಸೆಗಳೇ ಮಾಯೆ ಎಂಬ ತಾತ್ವಿಕ ಚಿಂತನೆಯನ್ನು ವ್ಯಕ್ತಪಡಿಸಿದ್ದಾರೆ. ಅನುಭವ ಮಂಟಪದಲ್ಲಿ ಮಹಿಳೆಯರಿಗೆ ಸಮಾನವಾಗಿ ಮಾತನಾಡಲು ಹಾಗೂ ತಮ್ಮ ವಿಚಾರಗಳನ್ನು ವ್ಯಕ್ತಪಡಿಸಲು ಅವಕಾಶ ಕಲ್ಪಿಸಲಾಗಿತ್ತು. ಹೆಣ್ಣು ಅಬಲೆಯಲ್ಲ ಎಂಬ ಸಂದೇಶವನ್ನು ಬಸವಾದಿ ಶರಣರು ಸಮಾಜಕ್ಕೆ ನೀಡಿದ್ದಾರೆ” ಎಂದರು.

“ವಚನ ಸಾಹಿತ್ಯದಲ್ಲಿ ಮಹಿಳೆಯರ ಕೊಡುಗೆ ಅಪಾರವಾಗಿದೆ. ಸಮಾಜದ ಕಟ್ಟುಪಾಡುಗಳನ್ನು ಮೀರಿ ದಿಟ್ಟ ಹೆಜ್ಜೆ ಇಟ್ಟವರಲ್ಲಿ ಅಕ್ಕಮಹಾದೇವಿ ಪ್ರಮುಖರಾಗಿದ್ದು, ಮಹಿಳೆಯರು ಆತ್ಮಸ್ಥೈರ್ಯ ಬೆಳೆಸಿಕೊಳ್ಳಬೇಕು” ಎಂದು ಡಾ. ವಿದ್ಯಾವತಿ ಬಲ್ಲೂರ ಹೇಳಿದರು.

“ಅಧ್ಯಕ್ಷೀಯ ನುಡಿಗಳನ್ನಾಡಿದ ಮರಿಯಪ್ಪ ಹಳ್ಳಿ ಅವರು, ಇಡೀ ದೇಶದಲ್ಲಿ ಬುದ್ಧ, ಬಸವ ಹಾಗೂ ಅಂಬೇಡ್ಕರ್ ಅವರ ವಿಚಾರಧಾರೆಗಳು ಮತ್ತು ಸಂವಿಧಾನದ ಮೌಲ್ಯಗಳು ಪ್ರಚಲಿತದಲ್ಲಿವೆ” ಎಂದು ಹೇಳಿದರು.

“ಸುಮಾರು 900 ವರ್ಷಗಳ ಹಿಂದೆಯೇ ಬಸವಾದಿ ಶರಣರು ಅಂತರ್ಜಾತಿ ವಿವಾಹಗಳ ಮೂಲಕ ಜಾತಿ ನಿರ್ಮೂಲನೆಗೆ ಪ್ರಯತ್ನಿಸಿದ್ದರು. 21ನೇ ಶತಮಾನದಲ್ಲಿ ಪ್ರತಿಯೊಬ್ಬರೂ ಸಮಾನತೆ ಮತ್ತು ಗೌರವದಿಂದ ಬದುಕಲು ಕಾನೂನುಬದ್ಧ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಕಲ್ಪಿಸಿಕೊಟ್ಟಿದ್ದಾರೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ ಪಾಲಿಕೆ ಕಾಂಗ್ರೆಸ್ ತೆಕ್ಕೆಗೆ: ಅಜ್ಮಲ್ ಅಹಮದ್ ಗೋಳಾ ಮೇಯರ್, ಫರ್ಹಾನಾಜ್ ಜಹಗೀರ್ದಾರ್ ಉಪ ಮೇಯರ್

“ಮನೆ ಮನೆಗಳಲ್ಲಿ ಮಕ್ಕಳು ವಚನಗಳನ್ನು ಓದುವ ವಾತಾವರಣ ನಿರ್ಮಾಣವಾದಾಗ ಮಾತ್ರ ಜಾತಿ ನಿರ್ಮೂಲನೆ ಸಾಧ್ಯ. ಬಸವಣ್ಣನವರು ಮಹಿಳೆಯರಿಗೆ ಸಮಾನತೆಯನ್ನು ಪ್ರತಿಪಾದಿಸಿದರೆ, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಹಿಂದೂ ಕೋಡ್ ಬಿಲ್ ಮೂಲಕ ಮಹಿಳೆಯರ ಸಮಾನ ಹಕ್ಕುಗಳಿಗೆ ಕಾನೂನುಬದ್ಧ ನೆಲೆ ಒದಗಿಸಿದರು. ಇದರಿಂದ ಮಹಿಳೆಯರು ಸ್ವಾಭಿಮಾನದಿಂದ ಬದುಕಲು ಅವಕಾಶ ದೊರಕಿತು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...