ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲರು ಮತ್ತು ಎಚ್‌ಒಡಿಗಳಿಂದ ಅತಿಥಿ ಉಪನ್ಯಾಸಕರ ಮೇಲೆ ನಡೆಯುತ್ತಿರುವ ಶೋಷಣೆಯನ್ನು ವನಕೆ ಹಿಡಿದು ಅಣಕು ಪ್ರದರ್ಶನ ಮಾಡುವ ಮೂಲಕ ಪ್ರತಿಭಟನೆ ಮಾಡಿದ್ದಾರೆ.
ಕಾಲೇಜು ಶಿಕ್ಷಣ ಇಲಾಖಾ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿರುವ ಸದ್ಯದ ಕಾರ್ಯನಿರತ ಹುದ್ದೆಗಳಿಗೆ ವಿರುದ್ಧವಾಗಿ, ಹೊಸ ಹುದ್ದೆಗಳನ್ನು ಸೃಜಿಸಿ, ಸೇರ್ಪಡೆ ಮತ್ತು ಕಾನೂನು ತಿದ್ದುಪಡಿ ಮಾಡಿಕೊಂಡು ಅನುಮೋದನೆ ನೀಡಿ, ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಸೃಜಿಸಿದ ಹುದ್ದೆಗಳಲ್ಲಿ ವಿಲೀನಗೊಳಿಸಿ, ಸಕ್ರಮಾತಿ ಮಾಡಲು ಅತಿಥಿ ಉಪನ್ಯಾಸಕರು ಒತ್ತಾಯಿಸಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ.
ಅತಿಥಿ ಉಪನ್ಯಾಸಕರ ಧರಣಿ 22ನೇ ದಿನಕ್ಕೆ ಕಾಲಿಟ್ಟಿದ್ದು ಉಪನ್ಯಾಸಕರು ಇಂದು(ಡಿ.14) ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲರು ಮತ್ತು ಎಚ್‌ಒಡಿಗಳಿಂದ ಅತಿಥಿ ಉಪನ್ಯಾಸಕರ ಮೇಲೆ ನಡೆಯುತ್ತಿರುವ ಶೋಷಣೆಯನ್ನು ವನಕೆ ಹಿಡಿದು ಅಣಕು ಪ್ರದರ್ಶನ ಮಾಡುವ ಮೂಲಕ ಉಪನ್ಯಾಸಕರ ಸಂಘ ವಿನೂತನವಾಗಿ ಪ್ರತಿಭಟನೆ ನಡಿಸಿದೆ.