ಕಲಬುರಗಿ | ಹಿರಿಯ ಹೋರಾಟಗಾರ ವಿಷ್ಣು ಸಭಾಹಿತ್ ನಿಧನ; ಎಐಡಿವೈಒ ಸಂತಾಪ

Date:

ಕರ್ನಾಟಕದಲ್ಲಿ ಎಐಡಿವೈಒ ಸಂಘಟನೆಯ  ಪ್ರಾರಂಭದ ದಿನಗಳಲ್ಲಿ ಸಂಘಟನೆಯನ್ನು ಬೆಳೆಸುವಲ್ಲಿ ಸಕ್ರಿಯ ಪಾತ್ರ ವಹಿಸಿದ್ದ ಮತ್ತು ಸಂಘಟನೆಯ ಹಿಂದಿನ ರಾಜ್ಯ ಸಮಿತಿಯ ಹಿರಿಯ ಉಪಾಧ್ಯಕ್ಷರಲ್ಲಿ ಒಬ್ಬರಾಗಿದ್ದ ಡಾ. ವಿಷ್ಣು ಸಭಾಹಿತ್ ಅವರ ನಿಧನ ಸಂಘಟನೆಗೆ ತೀವ್ರ ನಷ್ಟ ಉಂಟಾಗಿದೆ ಎಂದು ಎಐಡಿವೈಒ ಕಾರ್ಯದರ್ಶಿ ಜವಣ್ಣ ಸಂತಾಪ ವ್ಯಕ್ತಪಡಿಸಿದ್ದಾರೆ.

- Advertisement -

ಕಲಬುರಗಿಯಲ್ಲಿ ಪತ್ರಿಕೆ ಹೇಳಿಕೆ ನೀಡಿದ್ದು, “ಅನೇಕ ತರುಣರನ್ನು ಸಾಮಾಜಿಕ ಸೇವೆಗೆ ಮತ್ತು ಹೋರಾಟಗಳಿಗೆ ಆಕರ್ಷಿಸಿದ್ದ ಡಾ.ವಿಷ್ಣು ಸಭಾಹಿತ್ ಅವರು ಬೆಂಗಳೂರಿನ ಕೆಂಗೇರಿ ಬಡಾವಣೆಗೆ ಕಾವೇರಿ ನಾಲ್ಕನೇ ಹಂತದ ಕುಡಿಯುವ ನೀರಿನ ಯೋಜನೆಗಾಗಿ ಸಕ್ರಿಯ ಹೋರಾಟ ಕಟ್ಟಿದ್ದರು. ಆನಂತರವೂ ಕೂಡಾ ಜನಜಾಗೃತಿ ಹೋರಾಟ ಸಮಿತಿಯ ಮೂಲಕ ನಾಗರಿಕ ಸೌಲಭ್ಯಗಳಿಗಾಗಿ, ಮದ್ಯಪಾನದ ವಿರುದ್ಧ ಹೋರಾಟ, ಹೀಗೆ ಹಲವು ಯಶಸ್ವಿ ಹೋರಾಟಗಳನ್ನು ಕಟ್ಟಿದ್ದರು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಅವರ ಹುಟ್ಟೂರಾದ ಹೊನ್ನಾವರಕ್ಕೆ ಸ್ಥಳಾಂತರಗೊಂಡು ತಮ್ಮ ಜನಪರ ವೈದ್ಯಕೀಯ ವೃತ್ತಿಯ ಮೂಲಕ ಬಡಜನರ ಮತ್ತು ಹೊನ್ನಾವರದ ಸುತ್ತಮುತ್ತಲಿನ ಆದಿವಾಸಿ ಜನರಿಗೆ ಆರೋಗ್ಯ ಸೇವೆ ಒದಗಿಸುತ್ತಿದ್ದರು. ಅವರ ಸಾಮಾಜಿಕ ಕಾರ್ಯಗಳು ಮಾದರಿಯಾಗಿವೆ. ಇತ್ತೀಚೆಗೆ ಅನಾರೋಗ್ಯ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಸೋಮವಾರ ಬೆಳಗಿನ ಜಾವ ಅಸುನೀಗಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮೋದಿ ಸುಳ್ಳಿನ ಕಂತೆ ಹೊತ್ತು ತರುತ್ತಿದ್ದಾರೆ: ಎಎಪಿ

“ಎಐಡಿವೈಒ ಕರ್ನಾಟಕ ರಾಜ್ಯ ಸಮಿತಿಯು ಈ ಸಂದರ್ಭದಲ್ಲಿ ಅವರ ಸಕ್ರಿಯ ಸಾಮಾಜಿಕ ಚಟುವಟಿಕೆಗಳನ್ನು ಗೌರವದಿಂದ ನೆನೆಯುತ್ತಾ, ಅವರ ಅಗಲಿಕೆಗೆ ತೀವ್ರ ಸಂತಾಪದೊಂದಿಗೆ ಹೃತ್ಪೂರ್ವಕ ಶ್ರದ್ದಾಂಜಲಿ ಸಲ್ಲಿಸುತ್ತದೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...