ಹಳೆಯ ವೈಷಮ್ಯದ ಹಿನ್ನೆಲೆ ಕಲ್ಲಿನಿಂದ ಜಜ್ಜಿ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿಯಲ್ಲಿ ನಡೆದಿದೆ. ಮೃತರನ್ನು ಗ್ರಾಮದ ಶ್ರೀಮಂತರಾಯ (32) ಎಂದು ಗುರುತಿಸಲಾಗಿದೆ.
ಹಳೆಯ ವೈಷಮ್ಯ ಹಿನ್ನೆಲೆ ಪಾರ್ಟಿ ನೆಪದಲ್ಲಿ ಮದ್ಯಪಾನ ಮಾಡಿಸಿ ಶ್ರೀಮಂತರಾಯ ಅವರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಇದನ್ನೂ ಓದಿ: ಕಲಬುರಗಿ | ಹಂದಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
ಘಟನೆ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್ಡಿ, ಎಸಿಪಿ, ಪಿಐ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಿಂದ ಸಾಕ್ಷ್ಯಗಳನ್ನು ಸಂಗ್ರಹಿಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಮಾಹಿತಿ ದೊರೆತಿದೆ.