ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿದರು.
ಪಟ್ಟಣದ ತಹಶೀಲ್ದಾರ್ ಕಛೇರಿಯ ಎದುರುಗಡೆ ತಾಲೂಕು ಅಧ್ಯಕ್ಷ ಸುನೀಲ್ ಚೌಹಾಣ್ ಅವರ ನೇತೃತ್ವದಲ್ಲಿ ನಡೆದ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ(ರಿ)ತಾಲ್ಲೂಕ ಘಟಕ ಚಿತ್ತಾಪುರ ವತಿಯಿಂದ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ.

ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು, ಸೇವಾ ಸೌಲಭ್ಯಗಳನ್ನು ಒದಗಿಸಲು ಮತ್ತು ಮೊಬೈಲ್ ಆ್ಯಪ್ ಗಳಲ್ಲಿ ನಿರಂತರವಾಗಿ ಕೆಲಸ ಮಾಡುವಂತೆ ಹೇರಲಾಗುತ್ತಿರುವ ಒತ್ತಡವನ್ನು ನಿಲ್ಲಿಸುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿಗೆ ಕೆಲಸ ಸ್ಥಗಿತಗೊಳಿಸಿ ಮುಷ್ಕರ ಹಾಕಿದರು.
ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸುವ ಆದೇಶ ನೀಡುವ ಬಗ್ಗೆ, ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ, ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸೌಲಭ್ಯಗಳನ್ನು ಕಲ್ಪಿಸಬೇಕು ಮತ್ತು ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರ ಮುಖಾಂತರ ಕಂದಾಯ ಸಚಿವ ಕೃಷ್ಣ ಭೈರೇಗೌಡ ಇವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಮೋತಿಲಾಲ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಬಳ್ಳೊಂಡಿಗಿ, ತಾಲೂಕ ಉಪಾಧ್ಯಕ್ಷ ಮೈನುದ್ದಿನ್, ಗ್ರಾಮ ಸಹಾಯಕರ ಸಂಘ ತಾಲೂಕು ಅಧ್ಯಕ್ಷ ಚಂದ್ರಶಾ, ರಾಜು, ಮಹಾಂತೇಶ, ಅನೀಲಕುಮಾರ್, ನರಸರೆಡ್ಡಿ, ವೆಂಕಟಪ್ಪ, ಶೇಕಪ್ಪ, ಪರಶುರಾಮ, ಬಸವರಾಜ,
ಪೂಜಾ, ಭುವನೇಶ್ವರಿ, ಮಲ್ಲವ್ವ, ಸಿದ್ದಮ್ಮ, ಪರಿಮಳಾ, ಹಾಲಮ್ಮ, ಜ್ಯೋತಿ, ಶ್ವೇತಾ, ರಜಾಕ್, ಖಾಸಿಂ, ರೇವಣಸಿದ್ದಪ್ಪ, ಮೌನೇಶ, ಅರ್ಜುನ್ ಸೇರಿದಂತೆ ಅನೇಕರು ಇದ್ದರು.
ವರದಿ: ಆನಂತ್ ದೇಶಪಾಂಡೆ, ವಾಲೆಂಟಿಯರ್
