ಕಲಬುರಗಿ | ಕಬ್ಬು ಬೆಳೆಗೆ ಭೀಮಾ ನದಿ ನೀರು ಹರಿಸದಂತೆ ರೈತರಿಗೆ ಎಚ್ಚರಿಕೆ

Date:

ಬೇಸಿಗೆಯ ಸಮಯದಲ್ಲಿ ಭೀಮಾ ನದಿ ನೀರಿನಿಂದ ಕಬ್ಬು ಬೆಳೆಯುವ ರೈತರಿಗೆ ನದಿ ನೀರು ಬಳಸದಂತೆ ಕಲಬುರಗಿ ಸೂಚನೆ ನೀಡಲು ಕರ್ನಾಟಕ ನೀರಾವರಿ ನಿಗಮ ನಿಯಮಿತ ಕಲಬುರಗಿ ಜಿಲ್ಲೆಯ ತಹಸೀಲ್ದಾರರುಗಳಿಗೆ ಪತ್ರ ಬರೆದಿದೆ.

- Advertisement -

ಭೀಮಾ ನದಿಗೆ ಹೊಂದಿಕೊಂಡಿರುವ ವಿಜಯಪುರ ಜಿಲ್ಲೆಯ ಸಿಂದಗಿ, ಇಂಡಿ, ಅಲ್ಮೇಲ್, ಕಲಬುರಗಿ ಜಿಲ್ಲೆಯ ಅಫಜಲಪುರ, ಜೇವರ್ಗಿ, ಕಲಬುರಗಿ ಮತ್ತು ಚಿತ್ತಾಪುರ ತಾಲೂಕುಗಳ ತಹಸೀಲ್ದಾರ್‌ಗಳಿಗೆ ಕರ್ನಾಟಕ ನೀರಾವರಿ ನಿಗಮ ನಿಯಮಿತದ ಪತ್ರ ಬರೆದಿದ್ದು, ನೀರನ್ನು ಕಬ್ಬು ಬೆಳೆಗೆ ಹರಿಸದಿರುವಂತೆ ಎಚ್ಚರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಬೇಸಿಗೆಗಾಗಿ ನೀರು ಉಳಿಸಬೇಕಿದ್ದು, ರೈತರು ತಮ್ಮ ಬೆಳೆಗಳಿಗೆ ನದಿಯಿಂದ ನೀರು ಹರಿಸಿದರೆ ಕಲಬುರಗಿ, ಅಫಜಲಪುರ, ಜೇವರ್ಗಿ ಮುಂತಾದ ನಗರಗಳಿಗೆ ಕುಡಿಯುವ ನೀರು ಪೂರೈಸುವಲ್ಲಿ ತೊಂದರೆಯಾಗುತ್ತದೆ. ಬೇಸಿಗೆಯಲ್ಲಿ ರೈತರಿಗೆ ಆಸರೆಯಾಗಿರುವ ಏಕೈಕ ಬೆಳೆ ಕಬ್ಬು. ಇದಕ್ಕೆ ನೀರು ಬೇಕೇ ಬೇಕು. ಆದರೆ, ಕುಡಿಯುವ ನೀರಿನ ಅವಶ್ಯಕತೆ ಹೆಚ್ಚಾಗಿದೆ ಎಂದು ಅವರು ತಿಳಿಸಿದ್ದಾರೆ.

ನಾವು ಕಷ್ಟಪಟ್ಟು ಕಬ್ಬು ಬೆಳೆದಿದ್ದೇವೆ, ಇಳುವರಿ ಕಡಿಮೆಯಾಗಿದೆ. ಈ ವರ್ಷ ಮಳೆಯಾಗದೇ ನಾವು ಸಂಕಷ್ಟದಲ್ಲಿದ್ದೇವೆ. ಈ ಬೇಸಿಗೆಯಲ್ಲಿ ಬೆಳೆ ಉಳಿಸಲು ಹೋರಾಡುತ್ತಿದ್ದೇವೆ. ನಮ್ಮಲ್ಲಿ ವಿದ್ಯುತ್ ಸಂಪರ್ಕಕೂಡ ಸ್ಥಗಿತಗೊಂಡಿದೆ ಎಂದು ಹೇಳುತ್ತಾರೆ ಅಫಜಲಪುರದ ರೈತರು.

ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅಫಜಲಪುರ ತಹಸೀಲ್ದಾರ್ ಸಂಜೀವಕುಮಾರ ದಾಸರ್, ಶಾಸಕ ಎಂ.ವೈ.ಪಾಟೀಲ್ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ಸಭೆ ನಡೆಸಿದ್ದು, ನದಿ ದಡದಲ್ಲಿರುವ ಹೊಲಗಳಿಗೆ ಸಂಪೂರ್ಣ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಯೋಚಿಸಲಾಗಿದೆ. ಭೀಮಾ ಮದಿಗೆ ಅಡ್ಡಲಾಗಿ ಸುಮಾರು ನಾಲ್ಕು ಬ್ಯಾರೇಜ್‌ಗಳಿವೆ. ನದಿ ನೀರನ್ನು ಕುಡಿಯುವ ಉದ್ದೇಶಕ್ಕಾಗಿ ಸಂಗ್ರಹಿಸಲು ಉದ್ದೇಶಿಸಲಾಗಿದೆ ಎಂದಿದ್ದಾರೆ.

ಒಟ್ಟಿನಲ್ಲಿ, ಭೀಮಾ ನದಿ ದಡದಲ್ಲಿರುವ ರೈತರು ಬೆಳೆಯುಳಿಸಿಕೊಳ್ಳಲು ಒದ್ದಾಡುತ್ತಿದ್ದರೆ, ಅಧಿಕಾರಿಗಳು ಕುಡಿಯುವ ನೀರನ್ನು ಉಳಿಸಿ ಬಳಸಲು ಯೋಚಿಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...