ಗುಲ್ಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿರುರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಸ್ನಾತಕೋತ್ತರ ಬಾಲಕರ ವಸತಿ ನಿಲಯದ ಕಾವೇರಿ ವಸತಿ ನಿಲಯ ʼನಮ್ಮ ಬದುಕೆಂಬ ದೋಣಿಗೆ ನಾವೇ ನಾವಿಕರುʼ ಎಂಬ ಸ್ಪೂರ್ತಿದಾಯಕ ಕಾರ್ಯಕ್ರಮ ಜರುಗಿತು.
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸೋಮಶೇಖರ್ ವಾಯ್ ಮಾತನಾಡಿ, ʼವಿದ್ಯಾರ್ಥಿಗಳು ವಸತಿ ನಿಲಯದಲ್ಲಿ ನೀಡುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಉನ್ನತ ವ್ಯಾಸಂಗದೊಂದಿಗೆ ತಮ್ಮ ಗುರಿ ತಲುಪಿ ಭವಿಷ್ಯ ರೂಪಿಸಿಕೊಳ್ಳಬೇಕುʼ ಎಂದು ಸಲಹೆ ನೀಡಿದರು.
ಬಿಸಿಎಂ ತಾಲೂಕಾ ಕಲ್ಯಾಣಾಧಿಕಾರಿ ಶರಣಬಸಪ್ಪ ಪಾಟೀಲ್ ಮಾತನಾಡಿ, ʼಗುಲಬರ್ಗಾ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಇಂತಹ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಖುಷಿಯ ಸಂಗತಿ. ವಿದ್ಯಾರ್ಥಿಗಳು ಹೆಚ್ಚಿನ ಅಧ್ಯಯನ ಕಡೆಗೆ ಗಮನಹರಿಸಿ ಉನ್ನತ ಹುದ್ದೆ ಪಡೆಯಬೇಕುʼ ಎಂದರು.
ಮುಖ್ಯ ಭಾಷಣಕಾರರಾಗಿ ಆಗಮಿಸಿದ ಕೆ.ಎಂ.ವಿಶ್ವನಾಥ್ ಮರತೂರ ಮಾತನಾಡಿ, ʼನಮ್ಮ ಬದುಕನ್ನು ನಾವೇ ರೂಪಿಸಿಕೊಳ್ಳಬೇಕು ಎಂದು ಸ್ಪೂರ್ತಿದಾಯಕ ಮಾತುಗಳನ್ನಾಡಿ ವಿದ್ಯಾರ್ಥಿಗಳಿಗೆ ಆದರ್ಶ ಮತ್ತು ಸ್ವಾಲಂಬನೆ ಬದುಕು ರೂಪಿಸಿಕೊಳ್ಳುವುದು ಹೇಗೆ ಎಂಬ ಕುರಿತು ವಿಶ್ಲೇಷಿಸಿದರು.
ಕಾವೇರಿ ವಸತಿ ನಿಲಯದ ಅಧ್ಯಕ್ಷ ಸಂತೋಷಕುಮಾರ ಎಸ್.ಪಿ ಮಾತನಾಡಿ, ʼವಿದ್ಯಾರ್ಥಿಗಳು ಮೂಲಭೂತ ಹಕ್ಕುಗಳಿಗಾಗಿ ಪ್ರಶ್ನಿಸಿತಾರೋ ಅದೇ ರೀತಿ ಮೂಲಭೂತ ಕರ್ತವ್ಯಗಳನ್ನು ಕೂಡ ಕಡ್ಡಾಯವಾಗಿ ಪಾಲಿಸಬೇಕುʼ ಎಂದು ತಿಳಿಸಿದರು.
ಇದನ್ನೂ ಓದಿ : ಬೀದರ್ | ಮನೆ ಮಹಡಿ ಮೇಲೆ ‘ಡ್ರ್ಯಾಗನ್ ಫ್ರೂಟ್’ ಬೆಳೆದ ಉಪನ್ಯಾಸಕ!
ಕಾರ್ಯಕ್ರಮದಲ್ಲಿ ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಡಾ.ಗೌತಮ್ ಕರಿಕಲ್, ಗುಲ್ಬರ್ಗಾ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ಪದಾಧಿಕಾರಿಗಳು, ವಸತಿ ನಿಲಯದ ವಿದ್ಯಾರ್ಥಿ, ಸಿಬ್ಬಂದಿ ಉಪಸ್ಥಿತರಿದ್ದರು.