ಕಲಬುರಗಿ| ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಜಾಥಾ

Date:

ವೆಲ್ವೇರ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಅಕ್ಟೋಬರ್ 6 ರಂದು ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ ಹಮ್ಮಿಕೊಂಡಿದ ʼಕಲ್ಯಾಣ ಕರ್ನಾಟಕ ನ್ಯಾಯಪೂರ್ಣ ಅಭಿವೃದ್ಧಿ ಜಾಥಾʼ ನಗರದ ಕೆಕೆಆರ್‌ಡಿಬಿ ಕಚೇರಿಯಲ್ಲಿ ಮಂಡಳಿಯ ಕಾರ್ಯದರ್ಶಿಗಳಿಗೆ ಮನವಿ ಪತ್ರ ಸಲ್ಲಿಸುವ ಮೂಲಕ ಸೋಮವಾರ ಕೊನೆಗೊಂಡಿತು.

- Advertisement -

ಬಳ್ಳಾರಿಯಿಂದ ಪ್ರಾರಂಭವಾದ ಈ ಜಾಥಾವು ರಾಯಚೂರು, ಬೀದರ್ ಮೂಲಕ ಕಲಬುರಗಿಯಲ್ಲಿ ಅ.13 ರಂದು ಕೊನೆಗೊಂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಈ ಸಂದರ್ಭದಲ್ಲಿ ಡಬ್ಲ್ಯೂಪಿಐ ಪಕ್ಷದ ರಾಜ್ಯಾಧ್ಯಕ್ಷ ತಾಹಿ‌ರ್ ಹುಸೇನ್ ಮಾತನಾಡಿ, ನಮ್ಮಗೆ ಸ್ವಾತಂತ್ರ್ಯ ಬಂದು 78 ವರ್ಷ ಕಳೆದರು ಕಲ್ಯಾಣ ಕರ್ನಾಟಕವು ಇಂದಿಗೂ ಅತ್ಯಂತ ಹಿಂದುಳಿದ ಪ್ರದೇಶವಾಗಿದೆ. ಈ ಭಾಗದಲ್ಲಿ ಯಾವುದೇ ಅಭಿವೃದ್ಧಿಗಳು ಆಗುತ್ತಿಲ್ಲ. ಮೂಲಕ 2013ರಲ್ಲಿ ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡಿದ್ದು, ಆ ಸಮಯದಲ್ಲಿ ಸುಮಾರು ರೂ.25 ಸಾವಿರ ಕೋಟಿ ಅನುದಾನ ಕಳೆದ 12 ವರ್ಷಗಳಲ್ಲಿ ಬಿಡುಗಡೆಯಾದರೂ ಅಭಿವೃದ್ಧಿಯಾಗದೇ ಜನರಿಗೆ ಸೂಕ್ತವಾದ ಸೌಲಭ್ಯಗಳು ಸಿಗುತ್ತಿಲ್ಲ.ರಾಜ್ಯದ ಅತಿ ಬಡ ಜಿಲ್ಲೆಗಳು ಯಾದಗಿರಿ, ರಾಯಚೂರು, ಕಲಬುರಗಿ ಮತ್ತು ಕೊಪ್ಪಳ ಭಾಗದಲ್ಲಿ ಯಾವುದೇ ದೊಡ್ಡ ಕಂಪನಿಗಳು ಇಲ್ಲದೇ ಇಲ್ಲಿನ ಜನರು ಉದ್ಯೋಗಕ್ಕಾಗಿ ಹೊರಪ್ರದೇಶಗಳಿಗೆ ತೆರಳುವ ಪರಸ್ಥಿತಿ ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಪಾರ್ಟಿ 1

ಇದನ್ನೂ ಓದಿ: ಕಲಬುರಗಿ | ಸರ್ಕಾರಿ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಭರ್ತಿಗಾಗಿ ಬೃಹತ್‌ ಪ್ರತಿಭಟನೆ

ಈ ಭಾಗದಿಂದ ವರ್ಷಕ್ಕೆ 10 ಸಾವಿರ ಇಂಜಿನಿಯರಿಂಗ್‌ ಪದವಿ ಪಡೆದು ಉದ್ಯೋಗಕ್ಕಾಗಿ ಉದ್ಯೋಗಕ್ಕಾಗಿ ಬೇರೆ ಜಿಲ್ಲೆಗಳಿಗೆ ವಲಸೆ ಹೋಗುತ್ತಾರೆ. 30 ಲಕ್ಷ ಜನರು ರಕ್ತಹೀನತೆ ಮತ್ತು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಸುಮಾರು 80 ಸಾವಿರ ಸರ್ಕಾರಿ ಹುದ್ದೆಗಳು ಖಾಲಿಯಾಗಿವೆ, ಅದರಲ್ಲೂ 22 ಸಾವಿರ ಶಿಕ್ಷಕರ ಹುದ್ದೆಗಳು ಇನ್ನೂ ಭರ್ತಿಯಾಗಿಲ್ಲ ಇದರ ಬಗ್ಗೆ  ಸಂಬಂಧಪಟ್ಟವರು ಯಾರು ಕೂಡ ಗಮನಹರಿಸುತ್ತಿಲ್ಲ ಎಂದರು.

ಈ ಕೂಡಲೇ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ, ಡಿಎಂಎಫ್‌, ಕೆಎಂಇಆರ್‌ಎಫ್ ಅನುದಾನಗಳ ಸರಿಯಾದ ಬಳಕೆಯಾಗಬೇಕು, ಹೊಸ ಕೈಗಾರಿಕೆಗಳ ಸ್ಥಾಪನೆ ಮತ್ತು ಸ್ಥಳೀಯರಿಗೆ ಉದ್ಯೋಗ ಆದ್ಯತೆ ನೀಡಬೇಕು, ನೀರಾವರಿ ಯೋಜನೆಗಳ ಶೀಘ್ರ ಪೂರ್ಣಗೋಳಿಸಬೇಕು, ಶಿಕ್ಷಣದ ಗುಣಮಟ್ಟ ಸುಧಾರಣೆ ಮತ್ತು ಶಿಕ್ಷಕರ ಹುದ್ದೆಗಳ ಭರ್ತಿ ಮಾಡಬೇಕು, ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗಗಳ ಮೇಲೆ ನಡೆಯುವ ಅನ್ಯಾಯ ತಡೆಯಲು ವಿಶೇಷ ನ್ಯಾಯಮಂಡಳಿ ಸ್ಥಾಪಿಸುವುದು, ಜನಸಂಖ್ಯೆ ಆಧಾರದ ಮೇಲೆ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗಳ ಸ್ಥಾಪನೆ, ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಕೈಗಾರಿಕಾ ನೀತಿ ರೂಪಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಶ್ರೀಕಾಂತ್ ಸಾಳಿಯನ್, ಪ್ರಭಾಕರ್, ಹಬೀಬುಲ್ಲಾ ಖಾನ್, ರಾಜ್ಯ ಉಪಾಧ್ಯಕ್ಷ ಮುಜಾಹಿದಾ ಪಾಷಾ ಕುರೆಶಿ, ರಾಜ್ಯ ಕಾರ್ಯದರ್ಶಿ ಮೂಬೀನ್ ಅಹಮ್ಮದ್, ಜಬ್ಬಾರ್ ಗೋಲಾ, ಅಫೈಲ್ ಮೆಹಮೂದ್, ಫರೀದ್ ಮಾನವಿ, ಫಹಾದ್ ಮೊಕ್ಸಿನ್, ಇಬ್ರಾಹಿಂ ಪಟೇಲ್, ಮಹೇಶ್ ರಾಥೋಡ್, ಸಯ್ಯದ್ ಅಮ್ಮದ್, ಆದಿಲ್‌ ಪಟೇಲ್‌, ಸಲೀಂ ಚಿತಪೂರಿ, ಫರೀದ್, ಸೂಫಿಯಾನ್, ಮುಭಾಶಿರ್‌, ಸಯ್ಯದ್ ಇರ್ಫಾನ್ ಸೇರಿದಂತೆ ಹಲವರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಈಶಾನ್ಯ ಶಿಕ್ಷಕರ ಕ್ಷೇತ್ರ: ಆರು ಅಭ್ಯರ್ಥಿಗಳಿಂದ 10 ನಾಮಪತ್ರ ಸಲ್ಲಿಕೆ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...