ಕಲಬುರಗಿ | ₹16 ಸಾವಿರ ಕೋಟಿ ವೆಚ್ಚಕ್ಕೆ ಲೆಕ್ಕವೆಲ್ಲಿ? 371(ಜೆ) ಕುರಿತು ಶ್ವೇತಪತ್ರಕ್ಕೆ ಸಿಪಿಐ,ಎಐಕೆಎಸ್ ಪಟ್ಟು

Date:

ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ 371(ಜೆ) ಅಡಿಯಲ್ಲಿ ಇದುವರೆಗೆ ಖರ್ಚು ಮಾಡಿರುವ ₹16 ಸಾವಿರ ಕೋಟಿ ಅನುದಾನದ ಬಳಕೆ ಕುರಿತು ಸಮಗ್ರ ತನಿಖೆ ನಡೆಸಬೇಕು. ಬಾಕಿ ಇರುವ ₹13 ಸಾವಿರ ಕೋಟಿ ಅನುದಾನವನ್ನು ಬಿಡುಗಡೆ ಮಾಡಿ, ಪ್ರದೇಶದ ಸಮಗ್ರ ಅಭಿವೃದ್ಧಿಗೆ ಸದ್ಬಳಕೆಯಾಗುವಂತೆ ಪ್ರತ್ಯೇಕ ಕಲ್ಯಾಣ ಕರ್ನಾಟಕ ಸಚಿವಾಲಯ ಸ್ಥಾಪಿಸಬೇಕು ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಸಿಪಿಐ) ಹಾಗೂ ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) ಒತ್ತಾಯಿಸಿವೆ.

- Advertisement -

ಮಂಗಳವಾರ ನಗರದಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಸಿಪಿಐ ಜಿಲ್ಲಾ ಕಾರ್ಯದರ್ಶಿ ಹಾಗೂ ಎಐಕೆಎಸ್ ಜಿಲ್ಲಾ ಕಾರ್ಯದರ್ಶಿ ಡಾ. ಮಹೇಶಕುಮಾರ ರಾಠೋಡ, ಎಐಕೆಎಸ್‌ ರಾಜ್ಯ ಕಾರ್ಯಾಧ್ಯಕ್ಷ ಮೌಲಾ ಮುಲ್ಲಾ ಸೇರಿದಂತೆ ಮುಖಂಡರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

ಈ ದಿನ ಕವಿತೆ | ಎರಡು ದೀಪಗಳು- ಅಲಿ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಉರ್ದು ಕವಿ ಅಲಿ ಸರ್ದಾರ್ ಜಾಫ್ರಿಯವರ ಕವನವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ . ಕತ್ತಲ ಗವಿಯೊಳಗಿಂದರೆಕ್ಕೆಗಳು ಫಡಫಡಿಸುವ ಸದ್ದು ಕೇಳುವುದು.ನಿರ್ದಯಿ ಗಾಳಿಯುಮಂಜಿನ ಮೇಲೆ...

ಕರಸ್ಥಲದ ಲಿಂಗ ಮತ್ತು ಬೆರಳಿನ ಮಸಿ: ಸ್ಥಾವರ ಪ್ರಭುತ್ವದ...

ಭಾರತೀಯ ಸಮಾಜದ ಹಳ್ಳಿಯ ಭೌತಿಕ ವಿನ್ಯಾಸವನ್ನು ಗಮನಿಸಿದರೆ ಅದೊಂದು ಅಪ್ಪಟ ಘನೀಕೃತ ‘ಸ್ಥಾವರ’ ಮಾದರಿ. ಹಳ್ಳಿಯ ಹೃದಯಭಾಗದಲ್ಲಿ ಕೇವಲ ಪೂಜೆಯ ತಾಣವಲ್ಲ, ಇಡೀ ನೆಲದ ಮೇಲೆ ಅಧಿಪತ್ಯ ಸಾಧಿಸುವ ಕ್ಷೇತ್ರಾಧಿಪತಿಯ ‘ದೇವಸ್ಥಾನ’ ವಿರಾಜಮಾನವಾಗಿರುತ್ತದೆ....

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 2014ರಿಂದ ಇದುವರೆಗೆ ಸುಮಾರು ₹29 ಸಾವಿರ ಕೋಟಿ ಅನುದಾನ ಒದಗಿಸಲಾಗಿದ್ದು, ಅದರಲ್ಲಿ ₹16 ಸಾವಿರ ಕೋಟಿ ಖರ್ಚಾಗಿದೆ. ಆದರೆ ಈ ಭಾಗದ ಹಿಂದುಳಿತನ ಇನ್ನೂ ನಿವಾರಣೆಯಾಗಿಲ್ಲ. ಪ್ರೊ. ಗೋವಿಂದರಾವ್ ಸಮಿತಿ ವರದಿಯಲ್ಲಿಯೂ ಕಲ್ಯಾಣ ಕರ್ನಾಟಕದ ಬಹುತೇಕ ತಾಲೂಕುಗಳು ಹಿಂದುಳಿದಿರುವುದನ್ನು ಉಲ್ಲೇಖಿಸಲಾಗಿದೆ. ಹೀಗಾಗಿ ಅಭಿವೃದ್ಧಿಗಾಗಿ ಖರ್ಚು ಮಾಡಿರುವ ಅನುದಾನದ ಬಳಕೆ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಮುಖಂಡರು ಆಗ್ರಹಿಸಿದರು.

371(ಜೆ) ಕುರಿತು ಶ್ವೇತಪತ್ರಕ್ಕೆ ಆಗ್ರಹ

371(ಜೆ) ಜಾರಿಯಾದ ನಂತರ ಶಿಕ್ಷಣ, ಉದ್ಯೋಗ ಹಾಗೂ ಅಭಿವೃದ್ಧಿ ಕ್ಷೇತ್ರಗಳಲ್ಲಿ ಆಗಿರುವ ಬದಲಾವಣೆಗಳ ಕುರಿತು ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಬೇಕು. 371(ಜೆ) ಅಡಿಯಲ್ಲಿ ಉದ್ಯೋಗ ಮೀಸಲಾತಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದೆ, ಜಾರಿಗೂ ಮುನ್ನ ನೇಮಕಗೊಂಡಿರುವವರನ್ನೇ ಕಲ್ಯಾಣ ಕರ್ನಾಟಕ ಕೋಟಾದಲ್ಲಿ ಪರಿಗಣಿಸಲಾಗುತ್ತಿದೆ. ಇದರಿಂದ ಸ್ಥಳೀಯ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು.

371(ಜೆ) ಜಾರಿಯಾದ ನಂತರ ನಡೆದ ನೇಮಕಾತಿಗಳಲ್ಲಿನ ಅನ್ಯಾಯ ಸರಿಪಡಿಸಿ, ಬ್ಯಾಕ್‌ಲಾಗ್ ಹುದ್ದೆಗಳ ಮಾದರಿಯಲ್ಲಿ ಹುದ್ದೆಗಳನ್ನು ಭರ್ತಿ ಮಾಡಬೇಕು. ವಿವಿಧ ಇಲಾಖೆಗಳು ಹಾಗೂ KKRTC ಸೇರಿದಂತೆ ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಖಾಲಿ ಇರುವ 44 ಸಾವಿರಕ್ಕೂ ಅಧಿಕ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು.

ಶಿಕ್ಷಣ ಕ್ಷೇತ್ರದಲ್ಲೂ ತೀವ್ರ ನಿರ್ಲಕ್ಷ್ಯ

ಕಲ್ಯಾಣ ಕರ್ನಾಟಕದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡದೆ, ಬಹುತೇಕ ಕಡೆ ಅತಿಥಿ ಉಪನ್ಯಾಸಕರ ಮೂಲಕ ಶಿಕ್ಷಣ ನೀಡಲಾಗುತ್ತಿದೆ. ವಿಶ್ವವಿದ್ಯಾಲಯಗಳಿಗೆ ಅಗತ್ಯ ವಿಶೇಷ ಅನುದಾನ ನೀಡದೆ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ದುರ್ಬಲಗೊಳಿಸಲಾಗಿದೆ ಎಂದು ದೂರಿದರು.

ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಕ್ಷೇತ್ರದಲ್ಲಿಯೂ ಶಿಕ್ಷಕರ ಕೊರತೆ ತೀವ್ರವಾಗಿದ್ದು, ಈ ಭಾಗದಲ್ಲಿ ಸುಮಾರು 30 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಅನೇಕ ಶಾಲೆಗಳಲ್ಲಿ ಕೊಠಡಿ, ಶೌಚಾಲಯ, ಕುಡಿಯುವ ನೀರು, ಗ್ರಂಥಾಲಯ, ಆಟದ ಮೈದಾನ ಹಾಗೂ ಕಂಪ್ಯೂಟರ್ ಸೇರಿದಂತೆ ಮೂಲಸೌಕರ್ಯಗಳ ಕೊರತೆಯಿದೆ. ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಜತೆಗೆ ಮೂಲಸೌಕರ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಿ ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು. ಕಲ್ಯಾಣ ಕರ್ನಾಟಕದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ಕಲಬುರಗಿ ಸಂಪೂರ್ಣ ತೀವ್ರ ಬರಪೀಡಿತ ಜಿಲ್ಲೆ ಘೋಷಣೆಗೆ ಆಗ್ರಹ

ಕಲಬುರಗಿ ಜಿಲ್ಲೆಯಾದ್ಯಂತ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ಮತ್ತು ಕೃಷಿ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಜೇವರ್ಗಿ ತಾಲೂಕು ಸೇರಿದಂತೆ ಇಡೀ ಕಲಬುರಗಿ ಜಿಲ್ಲೆಯನ್ನು ಸಂಪೂರ್ಣ ತೀವ್ರ ಬರಪೀಡಿತ ಜಿಲ್ಲೆಯಾಗಿ ಘೋಷಿಸಬೇಕು ಎಂದು ಸಿಪಿಐ-ಎಐಕೆಎಸ್ ಆಗ್ರಹಿಸಿವೆ.

ಸೆ.16ರೊಳಗೆ ಸರ್ಕಾರ ಈ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಕಪ್ಪು ಬಾವುಟ ಪ್ರದರ್ಶನ ನಡೆಸಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲೆಯ ಒಣಭೂಮಿಯನ್ನು ನೀರಾವರಿಗೆ ಒಳಪಡಿಸಲು ರೂಪಿಸಿರುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಬಚಾವತ್ ಆಯೋಗದ ಶಿಫಾರಸಿನಂತೆ ಜಿಲ್ಲೆಯ ಪಾಲಿನ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಹಾಗೂ ಶಾಶ್ವತ ಬರ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ರೈತರ ಸಾಲ ಮನ್ನಾ, ಬಡ್ಡಿ–ಸಾಲ ವಸೂಲಿ ನಿಲ್ಲಿಸಲು ಆಗ್ರಹ

ಎಐಕೆಎಸ್ ರಾಜ್ಯ ಕಾರ್ಯಾಧ್ಯಕ್ಷ ಮೌಲಾ ಮುಲ್ಲಾ ಮಾತನಾಡಿ, ಬರಗಾಲದಿಂದ ಸಂಕಷ್ಟದಲ್ಲಿರುವ ರೈತರ ಸಾಲ ವಸೂಲಿ ಮತ್ತು ಬಡ್ಡಿ ವಿಧಿಸುವುದನ್ನು ತಕ್ಷಣ ನಿಲ್ಲಿಸಬೇಕು. ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಪ್ರತಿ ಎಕರೆಗೆ ನೀರಾವರಿ ಸೌಲಭ್ಯ ವಿಸ್ತರಿಸುವ ಜತೆಗೆ ಜಾನುವಾರುಗಳಿಗೆ ಮೇವು ಮತ್ತು ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಮಲ್ಲಾಬಾದ್ ಏತ ನೀರಾವರಿ ಕಾಮಗಾರಿಗೆ ಆಕ್ಷೇಪ

ಮಲ್ಲಾಬಾದ್ ಏತ ನೀರಾವರಿ ಯೋಜನೆಯ ಕಾಮಗಾರಿ ಸಮರ್ಪಕವಾಗಿ ನಡೆಯುತ್ತಿಲ್ಲ. ರೈತರಿಗೆ ನೋಟಿಸ್ ನೀಡದೆ ಅವರ ಜಮೀನು ಬಳಸಿಕೊಳ್ಳಲಾಗುತ್ತಿದೆ. ಅಧಿಕಾರಿಗಳು ಮತ್ತು ಗುತ್ತಿಗೆದಾರರು ಶಾಮೀಲಾಗಿ ಮನಬಂದಂತೆ ಕಾಮಗಾರಿ ನಡೆಸುತ್ತಿದ್ದಾರೆ ಎಂದು ಮುಖಂಡರು ಆರೋಪಿಸಿದರು.

ರೈತರಿಗೆ ಸೂಕ್ತ ಪರಿಹಾರ ನೀಡಿ ಗುಣಮಟ್ಟದ ಕಾಮಗಾರಿ ನಡೆಸಬೇಕು. ನಿಯಮ ಉಲ್ಲಂಘಿಸಿರುವುದು ಕಂಡುಬಂದರೆ ಗುತ್ತಿಗೆ ರದ್ದುಪಡಿಸಿ ಸಂಬಂಧಪಟ್ಟ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಒತ್ತಾಯಿಸಿದರು.
ಜೇವರ್ಗಿ ಪೌರ ಕಾರ್ಮಿಕರ ಸಮಸ್ಯೆ ಪರಿಹರಿಸಲು ಆಗ್ರಹ

ಜೇವರ್ಗಿಯಲ್ಲಿ ಕಳೆದ ಐದು ತಿಂಗಳಿಂದ ಸಮಸ್ಯೆ ಎದುರಿಸುತ್ತಿರುವ ಪೌರ ಕಾರ್ಮಿಕರಿಗೆ ಕೂಡಲೇ ಕೆಲಸ ನೀಡಬೇಕು ಹಾಗೂ ಬಾಕಿ ವೇತನ ಪಾವತಿಸಬೇಕು. ಕಾರ್ಮಿಕರ ಸಮಸ್ಯೆಯನ್ನು ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಪರಿಹರಿಸಬೇಕು ಎಂದು ಸಿಪಿಐ ಹಾಗೂ ಎಐಕೆಎಸ್ ಒತ್ತಾಯಿಸಿವೆ.

ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೆ.17ರಂದು ಮುಖ್ಯಮಂತ್ರಿ ಅವರ ಕಲಬುರಗಿ ಭೇಟಿ ಸಂದರ್ಭದಲ್ಲಿ ಕಪ್ಪು ಬಾವುಟ ಪ್ರದರ್ಶನ ನಡೆಸಲಾಗುವುದು ಎಂದು ಮುಖಂಡರು ಎಚ್ಚರಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಹಾಲಗಡ್ಡಾ ಕೆರೆಗೆ ನೀರು ತುಂಬಿಸಲು ಆಗ್ರಹಿಸಿ ರೈತರ ಉಪವಾಸ ಸತ್ಯಾಗ್ರಹ

ಪತ್ರಿಕಾಗೋಷ್ಠಿಯಲ್ಲಿ ಸಾಜೀದ್ ಅಹಮದ್, ಮಹಮ್ಮದ್ ಚೌದರಿ, ಭೀಮಾಶಂಕರ ಮಾಡಿಯಾಳ, ಶಿವಲಿಂಗಪ್ಪ ಲಿಂಗಟೇಕರ್, ಮಲ್ಲಿಕಾರ್ಜುನ ಕೆಲ್ಲೂರ ಸೇರಿದಂತೆ CPI ಹಾಗೂ AIKS ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಪಾರ್ಶ್ವವಾಯು ಲಕ್ಷಣ ಕಂಡರೆ ವಿಳಂಬ ಬೇಡ, ತಕ್ಷಣ ಆಸ್ಪತ್ರೆಗೆ ದಾಖಲಿಸಿ: ಡಾ. ಶಿವಾನಂದ ಮಾಸ್ತಿಹೋಳಿ

ಪಾರ್ಶ್ವವಾಯು ಸಂಭವಿಸಿದಾಗ ಪ್ರತಿಯೊಂದು ನಿಮಿಷವೂ ಅತ್ಯಮೂಲ್ಯವಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿ ಸೂಕ್ತ...

ರಸ್ತೆಯೋ, ಕೆಸರುಗದ್ದೆಯೋ? ಗುಂಡಿ ಬಿದ್ದ ರಸ್ತೆಯಲ್ಲಿ ಕುಚಿಗೇರಿ ಗ್ರಾಮಸ್ಥರ ನಿತ್ಯ ಯಾತನೆ

ಮಲೆನಾಡಿನ ಹಸಿರು ಸೌಂದರ್ಯಕ್ಕೆ ಮನಸೋತು ಪ್ರವಾಸಿಗರು ತಂಡೋಪತಂಡವಾಗಿ ಹರಿದುಬರುತ್ತಿದ್ದರೆ, ಇತ್ತ ಸೌಂದರ್ಯದ...

ಬಾಗಲಕೋಟೆ | ರಾಷ್ಟ್ರೀಯ ಏಕತಾ ದಿನಾಚರಣೆ; ಜಿಲ್ಲಾಧಿಕಾರಿಯಿಂದ ಪ್ರತಿಜ್ಞಾವಿಧಿ ಬೋಧನೆ

ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಶನಿವಾರ ರಾಷ್ಟ್ರೀಯ...

ಗದಗ | ಕಲೆಯ ಮೂಲ ಸತ್ವ ಉಳಿಸಿ ಬೆಳೆಸುವುದು ಕಲಾವಿದರ ಜವಾಬ್ದಾರಿ: ಪ.ಸ.ಕುಮಾರ

"ಕಲಾವಿದರು ತಮ್ಮ ಸೃಜನಶೀಲತೆಯನ್ನು ಯಾವುದೇ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಮೊರೆ...