ನಗರದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಚೌಕ್ ಪೊಲೀಸರು ವಶಕ್ಕೆ ಪಡೆದು, ವೈದ್ಯಕೀಯ ಪರೀಕ್ಷೆಯ ವರದಿ ಆಧರಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.
ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ., ಐಪಿಎಸ್ ಅವರ ನಿರ್ದೇಶನದಂತೆ ನಗರದಲ್ಲಿ ಅಕ್ರಮ ಚಟುವಟಿಕೆಗಳ ವಿರುದ್ಧ ನಿಗಾ ವಹಿಸಲಾಗುತ್ತಿದೆ. ಡಿಸಿಪಿ ಶಾಲೂ ಐಪಿಎಸ್ ಹಾಗೂ ಉತ್ತರ ಉಪವಿಭಾಗದ ಎಸಿಪಿ ಶಿವನಗೌಡ ಪಾಟೀಲ ಅವರ ಮಾರ್ಗದರ್ಶನದಲ್ಲಿ ಚೌಕ್ ಪೊಲೀಸ್ ಠಾಣೆಯ ಪಿಐ ಸುಶೀಲಕುಮಾರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.
ನವೆಂಬರ್ 3ರಂದು ನಗರದ ಮಹಾದೇವ ನಗರ ಕಮಾನ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪದ ಮೇಲೆ ನಬಿ ಕಾಲೋನಿ ಖಾದ್ರಿ ಚೌಕ್ ನಿವಾಸಿ, 22 ವರ್ಷದ ಆಟೋ ಚಾಲಕ ನಜೀರ್ ಅಲಿಯಾಸ್ ಬಲ್ಲು ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ, ಪರೀಕ್ಷೆಯ ವರದಿಯಲ್ಲಿ ಗಾಂಜಾ ಸೇವನೆ ದೃಢಪಟ್ಟ ಹಿನ್ನೆಲೆಯಲ್ಲಿ ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಇದನ್ನು ಓದಿದ್ದೀರಾ? ಕಲಬುರಗಿ | ಕಿಯಾ ಕಾರು ಮಾರಾಟ ಮಳಿಗೆಯಲ್ಲಿ ₹2.73 ಕೋಟಿ ಹಣದ ದುರ್ಬಳಕೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು
ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿ ಶಿವಾನಂದ ಸಿ.ಎಚ್.ಸಿ. ಹಾಗೂ ಜಗನ್ನಾಥ ಸಿ.ಪಿ.ಸಿ. ಪಾಲ್ಗೊಂಡಿದ್ದರು. ಯಶಸ್ವಿ ಕಾರ್ಯಾಚರಣೆ ನಡೆಸಿದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರು ಶ್ಲಾಘಿಸಿದ್ದಾರೆ.





