ಕಲಬುರಗಿ | ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನ ಹತ್ಯೆ

Date:

ಕಲಬುರಗಿ ಜಿಲ್ಲೆಯಲ್ಲಿ ರಾಜಕೀಯ ವೈಷಮ್ಯಗಳಿಂದಾಗಿ ನಡೆಯುವ ಗಲಾಟೆಗಳು ಹೆಚ್ಚುತ್ತಿವೆ. ಈ ಹಿಂದೆ, ಅಂಬೇಡ್ಕರ್ ಜಯಂತಿ ವೇಳೆ ಯುವಕನೊಬ್ಬನನ್ನು ಹತ್ಯೆ ಮಾಡಲಾಗಿತ್ತು. ಇದೀಗ, ಕಾಂಗ್ರೆಸ್‌ ಪರವಾಗಿ ಪ್ರಚಾರ ಮಾಡಿದ್ದ ಕಾರಣಕ್ಕೆ ಯುವಕನೊಬ್ಬನನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.

- Advertisement -

ಜಿಲ್ಲೆಯ ಅಫಜಲಪುರ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ಜಾವೀದ್ ಚಿನ್ನವಳ್ಳಿ ಎಂಬ ಯುವಕನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಮೃತದೇಹವನ್ನು ಬಾವಿಗೆ ಎಸೆದಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಮಂಗಳವಾರವಷ್ಟೇ ಕಲಬುರಗಿಯಲ್ಲಿ ಲೋಕಸಭಾ ಚುನಾವಣೆಯ ಮತದಾನ ಮುಗಿದಿತ್ತು. ಮತದಾನ ಮುಗಿದ ಒಂದು ದಿನದ ಬಳಿಕ, ಬುಧವಾರ ಸಂಜೆ ದುಷ್ಕರ್ಮಿಗಳು ಜಾವೀದ್‌ನನ್ನು ಪಾರ್ಟಿ ಮಾಡಲೆಂದು ಕರೆದೊಯ್ದಿದ್ದಾರೆ.

ಅಲ್ಲಿ, ಕಾಂಗ್ರೆಸ್‌ ಪರವಾಗಿ ಪ್ರಚಾರ ಮಾಡಿದ್ದರ ಬಗ್ಗೆ ಚರ್ಚೆ ನಡೆದಿದ್ದು, ಜಾವಿದ್‌ನನ್ನು ಹತ್ಯೆ ಮಾಡಲಾಗಿದೆ ಎಂದು ಹೇಳಲಾಗಿದೆ. ಗಾಣಗಾಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಏಪ್ರಿಲ್‌ ತಿಂಗಳಿನಲ್ಲಿ ಕಲಬುರಗಿಯ ಅಶೋಕ್ ನಗರದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ ವೇಳೆ ಅಶೋಕ್ ಎಂಬ ಯುವಕನನ್ನು ಹತ್ಯೆ ಮಾಡಲಾಗಿತ್ತು. ಕೃತ್ಯ ಎಸಗಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಅಲ್ಲದೆ, ಈ ಘಟನೆಗೂ ಕೆಲ ದಿನಗಳ ಹಿಂದೆ, ಕಲಬುರಗಿಯ ಬಿಜೆಪಿ ಸಂಸದ ಉಮೇಶ್ ಜಾಧವ್ ಆಪ್ತ ಗಿರೀಶ್ ಚಕ್ರ ಎಂಬಾತನನ್ನು ಕೊಲೆ ಮಾಡಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಬಲೇಶ್ವರ ನಾಕಾ ರಸ್ತೆ ಕಾಮಗಾರಿ ವಿಳಂಬಕ್ಕೆ ಆಪ್ ಆಕ್ರೋಶ; ಪಾಲಿಕೆಗೆ ಒಂದು ವಾರ ಗಡುವು

ಅಭಿವೃದ್ಧಿ ಕಾಮಗಾರಿ ಹೆಸರಿನಲ್ಲಿ ಬಬಲೇಶ್ವರ ನಾಕಾದಿಂದ ನಾಯರಾ ಪೆಟ್ರೋಲ್ ಪಂಪ್‌ವರೆಗಿನ ರಸ್ತೆಯ...

ಕೋಲಾರ | ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಪರ ಮತ ಯಾಚನೆ

ಮುಂಬರುವ ಜಿ.ಪಂ,‌ ತಾ.ಪಂ. ಗ್ರಾ.ಪಂ.ಗೆ ಈ ಚುನಾವಣೆಯೇ ಪ್ರಮುಖ ದಾರಿ. ನಂತರ...

ಯುವಜನತೆ ದುಶ್ಚಟಗಳಿಂದ ದೂರವಿದ್ದು ಉತ್ತಮ ನಾಗರಿಕರಾಗಬೇಕು: ಹಜ್ರತ್ ಎಂ.ಪಿ. ಮುಜಮ್ಮಿಲ್ ಸಾಹೇಬ್ ಕರೆ

ಮೈಸೂರಿನ ಗೌಸಿಯಾ ನಗರದ ಉಸ್ಮಾನಿಯಾ ಬ್ಲಾಕ್‌ನ ನೌಜವಾನ್ ಕಮಿಟಿ ವತಿಯಿಂದ ಪ್ರತಿವರ್ಷದಂತೆ...

ಸೇನಾ ನೇಮಕಾತಿ ಆಯ್ಕೆ ಪ್ರಕ್ರಿಯೆ ಕುರಿತು ಅರಿವು; ಪೂರ್ವಭಾವಿ ಪರೀಕ್ಷೆ

ಭಾರತೀಯ ಸೇನೆಯ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮುಂದಿನ ಹಂತದ ನೇಮಕಾತಿ...