ಕಲಬುರಗಿ ರೈತರಿಗೆ ₹1417.02 ಕೋಟಿ ಪರಿಹಾರ, ಬಿಜೆಪಿಯಿಂದ ನಕಲಿ ಪ್ರತಿಭಟನೆ: ಪ್ರಿಯಾಂಕ್‌ ಖರ್ಗೆ

Date:

Advertisements

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ ನಡೆಸುವುದು ಹಾಸ್ಯಾಸ್ಪದವಾಗಿದೆ. ಬಿಜೆಪಿಯ ಈ ಆತ್ಮವಂಚನೆಯ ಪ್ರತಿಭಟನೆಗಳು ಅಗತ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹರಿಹಾಯ್ದಿದ್ದಾರೆ.

ತಮ್ಮ ” ಎಕ್ಸ್ ” ಖಾತೆಯಲ್ಲಿ ಈ ಬಗ್ಗೆ ಅಂಕಿ ಅಂಶಗಳ ಸಮೇತ ಸುದೀರ್ಘವಾಗಿ ಬರೆದುಕೊಂಡಿರುವ ಅವರು, “ಬಿಜೆಪಿ ಆಡಳಿತವಧಿಯಲ್ಲಿ ಕಲಬುರಗಿ ಜಿಲ್ಲೆಗೆ ಒಂದು ಮಂತ್ರಿ ಸ್ಥಾನವನ್ನು ಕೊಟ್ಟಿರಲಿಲ್ಲ, ಆಗ ಇದ್ದಂತಹ ಉಸ್ತುವಾರಿ ಮಂತ್ರಿಗಳು ಜಿಲ್ಲೆಯ ಕಡೆ ತಲೆ ಹಾಕುತ್ತಿರಲಿಲ್ಲ, ಇಂತಹ ಬಿಜೆಪಿಗೆ ಇಂದು ನಮ್ಮ ಕಡೆ ಬೆರಳು ತೋರಿಸುವುದಕ್ಕೆ ಕನಿಷ್ಠ ಮಟ್ಟದ ನೈತಿಕತೆ ಇಲ್ಲ” ಎಂದು ಟೀಕಿಸಿದ್ದಾರೆ.

“ಕಲಬುರಗಿಯ ಜನರ ಸಂಕಷ್ಟಕ್ಕೆ ಬಿಜೆಪಿ ಸರ್ಕಾರ ಹೇಗೆ ನಡೆದುಕೊಂಡಿತ್ತು ಎಂಬುದರ ಬಗ್ಗೆ ಅಂಕಿ ಅಂಶಗಳೇ ಮಾತನಾಡುತ್ತವೆ. ಜಿಲ್ಲೆಯ ರೈತರಿಗೆ ಯಾವ ಸರ್ಕಾರ ಎಷ್ಟು ಅನುಕೂಲ ಮಾಡಿಕೊಟ್ಟಿದೆ ಎನ್ನುವುದನ್ನು ನಾವು ಹೇಳುವುದು ಬೇಕಿಲ್ಲ, ಅಂಕಿ ಅಂಶಗಳೇ ಹೇಳುತ್ತವೆ. ಬಿಜೆಪಿ ಸರ್ಕಾರದ ಅವಧಿಯ ನಾಲ್ಕು ವರ್ಷಗಳಲ್ಲಿ ನೆರೆ, ಬರದ ವಿಷಯದಲ್ಲಿ ಬಿಜೆಪಿ ಪರಿಹಾರ ಒದಗಿಸಿಕೊಟ್ಟಿದ್ದು ನಗಣ್ಯ” ಎಂದಿದ್ದಾರೆ.

Advertisements

ಬಿಜೆಪಿ ಅವಧಿಯಲ್ಲಿ ರೈತರಿಗೆ ದೊರಕಿದ ಬೆಳೆ ವಿಮೆ ಪರಿಹಾರ

  • 2019 -20ನೇ ಸಾಲಿನಲ್ಲಿ 38,248 ರೈತರಿಗೆ ₹16.65 ಕೋಟಿ ರೂ. ಪರಿಹಾರ ಮಾತ್ರ.
  • 2020 – 21ನೇ ಸಾಲಿನಲ್ಲಿ 37,145 ರೈತರಿಗೆ ಕೇವಲ ₹22.97 ಕೋಟಿ ರೂ. ಪರಿಹಾರ ಮಾತ್ರ.
  • 2021 – 22ನೇ ಸಾಲಿನಲ್ಲಿ 66,234 ರೈತರಿಗೆ ₹57.95 ಕೋಟಿ ರೂ. ಪರಿಹಾರ ಮಾತ್ರ.
  • 2022 – 23ನೇ ಸಾಲಿನಲ್ಲಿ 1,88,600 ರೈತರಿಗೆ ಒದಗಿಸಿದ್ದು ₹108.6 ಕೋಟಿ ರೂ. ಪರಿಹಾರ ಮಾತ್ರ.

    ಬಿಜೆಪಿ ನಾಲ್ಕು ವರ್ಷದಲ್ಲಿ ಒಟ್ಟು ₹206.17 ಕೋಟಿ ಪರಿಹಾರ ಮಾತ್ರ ನೀಡಿದೆ.

    ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ತೇಲುತ್ತಿರುವ ಉತ್ತರ ಕರ್ನಾಟಕ; ಹಾರಾಡುತ್ತಿರುವ ಅಧಿಕಾರಸ್ಥರು

ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಎರಡೇ ವರ್ಷದಲ್ಲಿ ಅತಿ ಹೆಚ್ಚು ಬೆಳೆ ವಿಮೆ ಪರಿಹಾರ ಒದಗಿಸುವಲ್ಲಿ ಯಶಸ್ವಿಯಾಗಿದೆ.

  • 2023 – 24ನೇ ಸಾಲಿನಲ್ಲಿ 1,59,622 ರೈತರಿಗೆ ₹189.40 ಕೋಟಿ ರೂ. ಪರಿಹಾರ ನೀಡಿದ್ದೇವೆ.
  • 2024-25 ನೇ ಸಾಲಿನಲ್ಲಿ 2,03,746 ರೈತರಿಗೆ ₹656.63 ಕೋಟಿ ರೂ. ಪರಿಹಾರ ಒದಗಿಸಿದ್ದೇವೆ.
  • ಒಟ್ಟು 3,63,368 ರೈತರಿಗೆ ₹846.03 ಕೋಟಿ ರೂ. ಪರಿಹಾರವನ್ನು ಎರಡೇ ವರ್ಷದಲ್ಲಿ ಒದಗಿಸಿದ್ದೇವೆ.
  • ತೊಗರಿಯ ನೆಟೆ ರೋಗದ ಬಗ್ಗೆ ಬಿಜೆಪಿ ತಲೆ ಕೆಡಿಸಿಕೊಂಡಿರಲೇ ಇಲ್ಲ, ನಮ್ಮ ಸರ್ಕಾರವು 2023-24ನೇ ಸಾಲಿನಲ್ಲಿ 1,78,354 ರೈತರಿಗೆ ₹181.86 ಕೋಟಿ ರೂ. ನೆಟೆ ರೋಗದ ಪರಿಹಾರ ಒದಗಿಸಿದೆ.

“ಹಾಗೆಯೇ, ಹೆಚ್ಚು ಇನ್ ಪುಟ್ ಸಬ್ಸಿಡಿಯನ್ನು ಒದಗಿಸಿಕೊಡುವ ಮೂಲಕ ರೈತರ ನೆರವಿಗೆ ನಿಂತಿದೆ ನಮ್ಮ ಸರ್ಕಾರ, ಎರಡು ವರ್ಷಗಳಲ್ಲಿ 3,49,555 ರೈತರಿಗೆ ₹389.14 ಕೋಟಿ ಸಬ್ಸಿಡಿ ಒದಗಿಸಲಾಗಿದೆ. ಎರಡೇ ವರ್ಷದ ಅವಧಿಯಲ್ಲಿ ಒಟ್ಟು 8,91,277 ರೈತರು ಫಲಾನುಭವಿಗಳಾಗಿದ್ದಾರೆ, ₹1,417.02 ಕೋಟಿ ಹಣ ರೈತರ ಕೈ ಸೇರಿದೆ. ಬಿಜೆಪಿ ಸರ್ಕಾರ ಕಲಬುರಗಿ ರೈತರಿಗೆ ನಾಲ್ಕು ವರ್ಷಗಳಲ್ಲಿ ಕೊಟ್ಟಿರುವ ಮೊತ್ತದ ಏಳು ಪಟ್ಟು ಹೆಚ್ಚು ಹಣವನ್ನು ನಮ್ಮ ಸರ್ಕಾರ ಎರಡೇ ವರ್ಷದಲ್ಲಿ ಒದಗಿಸಿದೆ. ಕಲಬುರಗಿಯಲ್ಲಿ ಈಗಾಗಲೇ ನೆರೆ ಪರಿಸ್ಥಿತಿ ಇದೆ, ಬಿಜೆಪಿಯವರ ನಕಲಿ ಮೊಸಳೆ ಕಣ್ಣೀರಿನಿಂದ ಪ್ರವಾಹ ಹೆಚ್ಚಾಗಬಹುದು” ಎಂದು ಲೇವಡಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ʼಇಂಟರ್‌ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್’ಗೆ ʼಶಕ್ತಿ ಯೋಜನೆʼ ಸೇರ್ಪಡೆ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಶಕ್ತಿ ಯೋಜನೆ'ಯು...

Download Eedina App Android / iOS

X