ಕಲಬುರಗಿ | 3,000 ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಗ್ರಾ.ಪಂ. ಬಿಲ್‌ ಕಲೆಕ್ಟರ್

Date:

ಮನೆಯ ಜಿಪಿಎಸ್‌ ಮಾಡಿ ಬಾಕಿ ಹಣವನ್ನು ಬಿಡುಗಡೆ ಮಾಡಿಸಲು 3,000 ರೂ. ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಪಂಚಾಯತಿ ಬಿಲ್‌ ಕಲೆಕ್ಟರ್‌ ಒಬ್ಬರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹರನೂರು ಗ್ರಾಮ ಪಂಚಾಯತ್‌ ಬಿಲ್‌ ಕಲೆಕ್ಟರ್‌ ಬಾಬುರಾವ ಯಲಗೂರದಪ್ಪ ಬಂಧಿತ ಎಂದು ತಿಳಿದು ಬಂದಿದೆ.

ಹರನೂರು ಗ್ರಾಮದ ಈರಮ್ಮ ಮಾಡಿವಾಳ ಎಂಬುವರಿಗೆ ಬಸವ ವಸತಿ ಯೋಜನೆಯಡಿ ಮನೆ ಮಂಜೂರಾಗಿದ್ದು ಕೊನೆಯ ಕಂತು 30,000 ರೂ. ಬಾಕಿ ಇತ್ತು. ಇದಕ್ಕೆ ಜಿಪಿಎಸ್‌ ಮಾಡಿ ದಾಖಲೆ ಅಪ್ಲೋಡ್‌ ಮಾಡಲು 3,000 ರೂ.ಗೆ ಲಂಚಕ್ಕೆ ಬೇಡಿಯಿಟ್ಟಿದ್ದ, ಈ ಬಗ್ಗೆ ಈರಮ್ಮ ಗ್ರಾಮದ ನಾಗನಗೌಡ ಎಂಬುವರಿಗೆ ತಿಳಿಸಿದರು. ನಾಗನಗೌಡ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಪಾಯಕಾರಿ ಸುಳ್ಳು ಆರೋಪ: ತಪ್ಪು ಯತ್ನಾಳರದ್ದೋ, ಕಾಂಗ್ರೆಸ್ಸಿನವರದ್ದೋ?

ಜೇವರ್ಗಿ ಪಟ್ಟಣದ ನರಿಬೋಳ ಕ್ರಾಸ್‌ ಬಳಿ ಬೇಡಿಕೆಯಿಟ್ಟ ಹಣವನ್ನು ಮನೆಯ ಫಲಾನುಭನಿ ಈರಮ್ಮ ಬಿಲ್‌ ಕಲೆಕ್ಟರ್‌ ಬಾಬುರಾವ ಅವರಿಗೆ ಹಣ ತಲುಪಿಸುವ ವೇಳೆ ಲೋಕಾಯುಕ್ತ ಪೊಲೀಸ್‌ ಇನ್ಸ್ಪೆಕ್ಟರ್ ನಾನಾಗೌಡ ಪಾಟೀಲ್‌ ನೇತ್ರತ್ವದ ತಂಡ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್‌.ಡಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ, ಸಂಸದ ಉಮೇಶ್ ಜಾಧವ್ ಭೇಟಿ

ಪೊಲೀಸ್‌ ಅಧಿಕಾರಿ ಆಗಬೇಕೆಂಬ ರಾಜ್ಯದ ಯುವಜನರ ಭವಿಷ್ಯವನ್ನೇ ಹಾಳು ಮಾಡಿದ್ದ ಪಿಎಸ್‌ಐ...

ಗೈರು ಹಾಜರಾದ ಮತಗಟ್ಟೆ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಸೂಚನೆ: ಬಿಬಿಎಂಪಿ ಮುಖ್ಯ ಆಯುಕ್ತ

ಲೋಕಸಭಾ ಚುನಾವಣೆ ಹಿನ್ನೆಲೆ, ಮತಗಟ್ಟೆ ಅಧಿಕಾರಿಗಳಿಗೆ ಹಮ್ಮಿಕ್ಕೊಂಡಿರುವ ತರಬೇತಿಗೆ ಗೈರು ಹಾಜರಾದವರ...

ರಾಯಚೂರು | ಎಸ್‌ಯುಸಿಐ ಅಭ್ಯರ್ಥಿ ರಾಮಲಿಂಗಪ್ಪ ನಾಮಪತ್ರ ಸಲ್ಲಿಕೆ

ರಾಯಚೂರು-ಯಾದಗಿರಿ ಒಳಗೊಂಡ ರಾಯಚೂರು ಲೋಕಸಭಾ (ಪ.ಪಂ) ಕ್ಷೇತ್ರದ ಎಸ್.ಯು.ಸಿ.ಐ (ಕಮ್ಯುನಿಸ್ಟ್) ಪಕ್ಷದ...

ಗದಗ | ತಾಲೂಕು ಆಡಳಿತದಿಂದ ‘ಮೇವು ಬ್ಯಾಂಕ್’ ಆರಂಭ; ಕೆ.ಜಿಗೆ 2 ರೂ. ದರ ನಿಗದಿ

ಕೊಣ್ಣೂರು : ಜಾನುವಾರುಗಳಿಗೆ ಮೇವು ಕೊರತೆ ನೀಗಿಸಲು ತಾಲೂಕು ಆಡಳಿತದಿಂದ ಮೇವು...