ಕಲಬುರಗಿ | ಮುಂಬೈನಿಂದ ಬಂದ ಬಾಲಕಿಗೆ ಕೋವಿಡ್ ದೃಢ

Date:

ಮುಂಬೈನಿಂದ ಬಂದಿದ್ದ 8 ವರ್ಷದ ಬಾಲಕಿಗೆ ಕೋವಿಡ್ ದೃಢಪಟ್ಟಿದೆ. ಕಳೆದ ಒಂದು ವರ್ಷದ ಬಳಿಕ ಜಿಲ್ಲೆಯಲ್ಲಿ ಮತ್ತೆ ಕಾಣಿಸಿಕೊಂಡ ಮೊದಲ ಪ್ರಕರಣ ಇದಾಗಿದೆ.

- Advertisement -

ಮಹಾರಾಷ್ಟ್ರದ ಮುಂಬೈನಿಂದ ಬಂದಿದ್ದ ಬಾಲಕಿ ಕ್ಷಯರೋಗ (ಟಿಬಿ) ಚಿಕಿತ್ಸೆಗಾಗಿ ಡಿ.23ರಂದು ಜಿಮ್ಸ್‌ಗೆ ದಾಖಲಾಗಿದ್ದಳು. ಆಕೆಯಲ್ಲಿ ನಿರಂತರ ಜ್ವರ ಇರುವುದು ಕಂಡು ಬಂದಿದ್ದು, ಇನ್ನೂ ಕೆಲವು ರೋಗ ಲಕ್ಷಣಗಳು ಕಂಡು ಬಂದಿದ್ದವು. ಸೋಮವಾರ ಪರೀಕ್ಷೆ ಮಾಡಿದಾಗ ಕೋವಿಡ್ ದೃಢ ಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜಶೇಖರ ಮಾಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಸೋಂಕಿತ ಬಾಲಕಿಗೆ ಕೋವಿಡ್ ಹಾಗೂ ಕ್ಷಯರೋಗ ಚಿಕಿತ್ಸೆ ನೀಡಲಾಗುತ್ತಿದೆ. ಬಾಲಕಿಯ ಸಂಪರ್ಕಕ್ಕೆ ಬಂದವರನ್ನು ಐಸೊಲೇಷನ್ ಮಾಡಲು ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಸೋಮವಾರದಿಂದ ಕೋವಿಡ್ ಪರೀಕ್ಷೆ ಆರಂಭವಾಗಿದ್ದು, ಮೊದಲ ದಿನ ಸಂಶಯಾಸ್ಪದ 23 ಜನರಿಗೆ ಪರೀಕ್ಷೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಮಾಸ್ಕ ಧರಿಸಿ

ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲಿ ಕೋವಿಡ್-19ರ ಉಪತಳಿ ಜೆ.ಎನ್-1 ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಧರಿಸುವಿಕೆ,  ಆಗಾಗ ಕೈಗಳನ್ನು ಸ್ವಚ್ಛವಾಗಿ ತೊಳೆದುಕೊಳ್ಳುವುದು ಸೇರಿದಂತೆ ಕೋವಿಡ್ ಸುರಕ್ಷಾ ನಿಯಮ ಪಾಲಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜಶೇಖರ ಮಾಲಿ ಅವರು ಜಿಲ್ಲೆಯ ಜನತೆಯಲ್ಲಿ ಮನವಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...